ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿಷ್ಯರ ವಿರುದ್ಧ ಸಿದ್ದರಾಮಯ್ಯ ಸಮರ, ಶಾಸಕರ ಅನರ್ಹತೆಗೆ ಮನವಿ!

|
Google Oneindia Kannada News

Recommended Video

ಶಿಷ್ಯರ ವಿರುದ್ಧ ಸಿದ್ದರಾಮಯ್ಯ ಸಮರ | ಶಾಸಕರ ಅನರ್ಹತೆಗೆ ಮನವಿ | Oneindia Kannada

ಬೆಂಗಳೂರು, ಜುಲೈ 11 : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶಿಷ್ಯರ ವಿರುದ್ಧ ತಿರುಗಿಬಿದ್ದಿದ್ದಾರೆ. ಇಬ್ಬರು ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಅವರು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

ಸಿದ್ದರಾಮಯ್ಯ ಅವರು ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ ಕಮಟಳ್ಳಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ಮನವಿ ಸಲ್ಲಿಸಲಿದ್ದಾರೆ. ಈ ಇಬ್ಬರೂ ಶಾಸಕರು ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

8 ಶಾಸಕರ ಅನರ್ಹತೆಗೆ ಸ್ಪೀಕರ್‌ಗೆ ಕಾಂಗ್ರೆಸ್‌ನಿಂದ ದೂರು8 ಶಾಸಕರ ಅನರ್ಹತೆಗೆ ಸ್ಪೀಕರ್‌ಗೆ ಕಾಂಗ್ರೆಸ್‌ನಿಂದ ದೂರು

ಸಚಿವ ಸ್ಥಾನ ಕಳೆದುಕೊಂಡ ದಿನದಿಂದ ರಮೇಶ್ ಜಾರಕಿಹೊಳಿ ಅವರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಕಾಂಗ್ರೆಸ್‌ನ ಹಲವು ಶಾಸಕರ ಬಂಡಾಯದ ಹಿಂದೆ ರಮೇಶ್ ಜಾರಕಿಹೊಳಿ ಅವರು ಇದ್ದಾರೆ ಎಂಬುದು ಗುಟ್ಟಾಗಿ ಉಳಿದಿಲ್ಲ.

8 ಶಾಸಕರ ಅನರ್ಹತೆ : ಕೆಪಿಸಿಸಿ ಅಧ್ಯಕ್ಷರು ಹೇಳುವುದೇನು?8 ಶಾಸಕರ ಅನರ್ಹತೆ : ಕೆಪಿಸಿಸಿ ಅಧ್ಯಕ್ಷರು ಹೇಳುವುದೇನು?

ಮಹೇಶ್ ಕಮಟಳ್ಳಿ ಅವರು ರಮೇಶ್ ಜಾರಕಿಹೊಳಿ ಅವರ ಕಟ್ಟಾ ಬೆಂಬಲಿಗರು. 'ನಾನು ಕಾಂಗ್ರೆಸ್ ಪಕ್ಷ ತೊರೆಯುವುದಿಲ್ಲ' ಎಂದು ಹೇಳಿಕೆ ನೀಡುತ್ತಿದ್ದ ಅವರು, ಶನಿವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ಹಾರಿದ್ದಾರೆ.....

ರಮೇಶ್ ಜಾರಕಿಹೊಳಿ ಒಂದೆರಡು ಏಟು ಹೊಡೆಯಲಿ ಪರವಾಗಿಲ್ಲ: ಡಿಕೆಶಿ!ರಮೇಶ್ ಜಾರಕಿಹೊಳಿ ಒಂದೆರಡು ಏಟು ಹೊಡೆಯಲಿ ಪರವಾಗಿಲ್ಲ: ಡಿಕೆಶಿ!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, 'ರಾಜೀನಾಮೆ‌ ನೀಡಿರುವ ಶಾಸಕರು‌ ಮಾತ್ರವಲ್ಲ, ಕಾಂಗ್ರೆಸ್‌ನ ಎಲ್ಲ 78 ಶಾಸಕರೂ ನನಗೆ ಆಪ್ತರಾಗಿದ್ದಾರೆ. ಅವರು ನಮ್ಮ ಪಕ್ಷದ ಬಹಳಷ್ಟು ನಾಯಕರಿಗೂ ಆಪ್ತರಾಗಿದ್ದಾರೆ. ಮಾಧ್ಯಮಗಳು ಸೆಲೆಕ್ಟಿವ್ ಆಗಿ ಈ ಶಾಸಕರು ನನ್ನ ಆಪ್ತರು ಎಂದು ಹೇಳುತ್ತಿರುವುದು ಸರಿ ಅಲ್ಲ. ಇದರಿಂದ ನನ್ನ ಮನಸ್ಸಿಗೆ ನೋವಾಗಿದೆ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಬೆಂಬಲಿಗರು

ಸಿದ್ದರಾಮಯ್ಯ ಬೆಂಬಲಿಗರು

ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಅವರು ಒಂದು ಕಾಲದಲ್ಲಿ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು. ಆದರೆ, ಈಗ ಅವರ ಮಾತನ್ನು ಕೇಳುವ ಸ್ಥಿತಿಯಲ್ಲಿ ಇಲ್ಲ. ಹಲವು ಬಾರಿ ರಮೇಶ್ ಜಾರಕಿಹೊಳಿ ಅವರ ಮನವೊಲಿಸಲು ಸಿದ್ದರಾಮಯ್ಯ ಅವರು ಮಾಡಿದ ಎಲ್ಲಾ ಪ್ರಯತ್ನಗಳು ವಿಫಲವಾಗಿವೆ. ಆದ್ದರಿಂದ, ಈಗ ಶಿಷ್ಯನಿಗೆ ತಕ್ಕಪಾಠ ಕಲಿಸಲು ಅವರು ತೀರ್ಮಾನಿಸಿದ್ದಾರೆ.

ರಮೇಶ್ ಜಾರಕಿಹೊಳಿ ಆಪ್ತರು

ರಮೇಶ್ ಜಾರಕಿಹೊಳಿ ಆಪ್ತರು

ಅಥಣಿ ಶಾಸಕ ಮಹೇಶ್ ಕಮಟಳ್ಳಿ ಅವರು ರಮೇಶ್ ಜಾರಕಿಹೊಳಿ ಅವರ ಆಪ್ತರು. ಹಲವು ಬಾರಿ ರಮೇಶ್ ಜಾರಕಿಹೊಳಿ ಅವರ ಪರವಾಗಿ ನಿಂತಿದ್ದರು. ಆದರೆ, ಕುಂದಗೋಳ ಉಪ ಚುನಾವಣೆ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಬಣದಲ್ಲಿ ಗುರುತಿಸಿಕೊಂಡಿದ್ದರು. ಈಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ರಮೇಶ್ ಜಾರಕಿಹೊಳಿ ಅವರ ಜೊತೆ ಮುಂಬೈಗೆ ಹಾರಿದ್ದಾರೆ.

ಪಕ್ಷ ಬಿಡುವ ತೀರ್ಮಾನ ಮಾಡಿಲ್ಲ

ಪಕ್ಷ ಬಿಡುವ ತೀರ್ಮಾನ ಮಾಡಿಲ್ಲ

ಕೆಲವು ದಿನಗಳ ಹಿಂದೆ ಮಾಧ್ಯಮಗಳ ಜೊತೆ ಮಾತನಾಡಿದ್ದ ಮಹೇಶ್ ಕಮಟಳ್ಳಿ ಅವರು, 'ಯಾವುದೇ ಕಾರಣಕ್ಕೂ ಪಕ್ಷ ಬಿಡುವ ತೀರ್ಮಾನ ಮಾಡಿಲ್ಲ. ರಮೇಶಣ್ಣ, ನಾನು ಪಕ್ಷದಲ್ಲಿಯೇ ಇದ್ದೇವೆ. ಇದು ಹೈಕಮಾಂಡ್‌ ನಾಯಕರಿಗೂ ತಿಳಿದಿದೆ' ಎಂದು ಹೇಳಿದ್ದರು.

English summary
Congress CLP leader Siddaramaiah requested the speaker K.R.Ramesh Kumar to disqualify Gokak MAL Ramesh Jarakiholi and Athani MLA Mahesh Kumathalli. Both MLAs already submitted resignation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X