ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಎಂ ಕುರ್ಚಿ ಚರ್ಚೆ: ಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ ಸ್ಪಷ್ಟನೆ

|
Google Oneindia Kannada News

ಧಾರವಾಡ, ಮೇ 14: ರಾಜ್ಯದ ಸಿಎಂ ಯಾರಾಗಬೇಕು ಎಂದು ರಾಜ್ಯ ರಾಜಕಾರಣದಲ್ಲಿ ಎದ್ದಿರುವ ಚರ್ಚೆಗೆ ಟ್ವೀಟ್ ಮೂಲಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿಯವರು ಇದ್ದಾರೆ. ಈಗ ಮುಖ್ಯಮಂತ್ರಿ ಯಾರಾಗಬೇಕು ಎಂಬ ಚರ್ಚೆ ಅಪ್ರಸ್ತುತ ಎಂದು ಹೇಳಿದ್ದಾರೆ.

ಜಿ,ಟಿ. ದೇವೇಗೌಡರು ಆ 'ಸತ್ಯ' ಹೇಳಬಾರದಿತ್ತು ಎಂದ ಸಿದ್ದರಾಮಯ್ಯ ಜಿ,ಟಿ. ದೇವೇಗೌಡರು ಆ 'ಸತ್ಯ' ಹೇಳಬಾರದಿತ್ತು ಎಂದ ಸಿದ್ದರಾಮಯ್ಯ

ಸಭೆ ಸಮಾರಂಭಗಳಲ್ಲಿ ಜನರು ನೀವೆ ನಮ್ಮ ಮುಂದಿನ ಮುಖ್ಯಮಂತ್ರಿ ಎಂದು ಕೂಗುತ್ತಾರೆ, ಆಗ ಮತ್ತೆ ತಾವೆಲ್ಲ ನಮ್ಮ‌ ಪಕ್ಷಕ್ಕೆ ಬಹುಮತ ನೀಡಿದರೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಅವರಿಗೆ ಹೇಳಿದ್ದೇನೆ ಎಂದಿರುವ ಸಿದ್ದರಾಮಯ್ಯ, ಅಭಿಮಾನದಿಂದ ನೀವು ಮುಖ್ಯಮಂತ್ರಿಯಾಗಿ ಎಂದು ಹೇಳುವವರ ಬಾಯಿ ಮುಚ್ಚಿಸಲಾಗುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.

'ಎಲ್ಲಿದ್ದೀರಪ್ಪಾ ಜೋಶಿ'

ರಸ್ತೆ, ಕುಡಿಯುವ ನೀರು, ನೀರಾವರಿ ಸೌಲಭ್ಯ, ಶಿಕ್ಷಣಕ್ಕೆ ಪ್ರೋತ್ಸಾಹ ಹೀಗೆ ಹಲವು ಯೋಜನೆಗಳ ಮೂಲಕ ಸಿ.ಎಸ್ ಶಿವಳ್ಳಿ ಅವರು ಕುಂದಗೋಳ ಕ್ಷೇತ್ರದ ಅಭಿವೃದ್ಧಿಗಾಗಿ ನಿರಂತರ ಶ್ರಮಿಸಿದ್ದರು. ಪ್ರಹ್ಲಾದ್ ಜೋಶಿ ಈ ಭಾಗದ ಸಂಸದರಾಗಿ 3 ಬಾರಿ ಆಯ್ಕೆಯಾಗಿದ್ದರೂ ಅವರ ಸಾಧನೆ ಶೂನ್ಯ. ಹಾಗಾಗಿ ಜೋಶಿ ಎಲ್ಲಿದ್ದೀರಪ್ಪಾ? ಎಂದು ಕ್ಷೇತ್ರದ ಜನ ಕೇಳುವಂತಾಗಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಹೋಟೆಲ್‌ನಲ್ಲಿ ಸಭೆ ನಡೆಸದ ಸಿದ್ದರಾಮಯ್ಯ-ಕುಮಾರಸ್ವಾಮಿಹೋಟೆಲ್‌ನಲ್ಲಿ ಸಭೆ ನಡೆಸದ ಸಿದ್ದರಾಮಯ್ಯ-ಕುಮಾರಸ್ವಾಮಿ

'ಜಿಟಿ ದೇವೇಗೌಡ ಆ ಸತ್ಯ ಹೇಳಬಾರದಿತ್ತು'

ಮೈಸೂರಿನಲ್ಲಿ ಜೆಡಿಎಸ್‌ನವರು ಕಾಂಗ್ರೆಸ್‌ಗೆ ಮತ ಹಾಕಿಲ್ಲ ಎಂದಿದ್ದ ಜಿ.ಟಿ.ದೇವೇಗೌಡ ಅವರ ಬಗ್ಗೆಯೂ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಗೆಳೆಯ ಜಿ.ಟಿ.ದೇವೇಗೌಡರು ಇತ್ತೀಚೆಗೆ ನನ್ನ ವಿರುದ್ಧ ಮಾತನಾಡಿಲ್ಲ ನಿಜ. ಆದರೆ ಮೈಸೂರಲ್ಲಿ ಜೆಡಿಎಸ್ ನವರು ಬಿಜೆಪಿಗೆ ಮತ ಹಾಕಿದ್ದಾರೆಂಬ ಅವರ ಹೇಳಿಕೆ ಸತ್ಯವಾಗಿದ್ದರೂ ಅನಗತ್ಯವಾಗಿತ್ತು. ಇದರಿಂದಾಗಿ ಕೆರಳಿದ ನಮ್ಮ ಕಾರ್ಯಕರ್ತರು ಜೆಡಿಎಸ್ ವಿರುದ್ಧ ಮಾತನಾಡತೊಡಗಿದ್ದರು. ಮೈತ್ರಿಕೂಟದಲ್ಲಿ ಇಂತಹದನ್ನು ಮಾಡಬಾರದು ಎಂದಿದ್ದಾರೆ.

ಗಾಯಕ್ಕೆ ಮುಲಾಮು ಹಚ್ಚಲು ಸಿದ್ದರಾಮಯ್ಯ-ಕುಮಾರಸ್ವಾಮಿ ಸಭೆಗಾಯಕ್ಕೆ ಮುಲಾಮು ಹಚ್ಚಲು ಸಿದ್ದರಾಮಯ್ಯ-ಕುಮಾರಸ್ವಾಮಿ ಸಭೆ

ಶಿವಳ್ಳಿಗೆ ಹಣದ ಆಮಿಷ ಒಡ್ಡಲಾಗಿತ್ತು: ಸಿದ್ದರಾಮಯ್ಯ

ಶಿವಳ್ಳಿಯವರು ಹಲವು ಬಾರಿ ಶಾಸಕರಾದರೂ ಸ್ವಂತಕ್ಕಾಗಿ ಆಸ್ತಿ ಮಾಡಿಕೊಂಡಿಲ್ಲ. ಹಿಂದೊಮ್ಮೆ ಬೇರೆ ಪಕ್ಷದವರು ಶಿವಳ್ಳಿಯವರಿಗೆ ತಮ್ಮ ಪಕ್ಷಕ್ಕೆ ಸೇರುವಂತೆ ರೂ.25 ಕೋಟಿ ಹಣ ನೀಡಲು ತಯಾರಿದ್ದಾಗಲೂ ಹಣದ ಆಮಿಷಕ್ಕೆ ಒಳಗಾಗಿ ಪಕ್ಷ ತೊರೆಯಲಿಲ್ಲ. ಇಂಥವರು ಇಂದು ನಮ್ಮೊಂದಿಗೆ ಇರಬೇಕಿತ್ತು, ಅವರ ಅಗಲಿಕೆ ನಿಜಕ್ಕೂ ಬಹುದೊಡ್ಡ ನಷ್ಟ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಶಿವಳ್ಳಿ ಕನಸು ವ್ಯರ್ಥವಾಗಲು ಬಿಡಬಾರದು: ಸಿದ್ದರಾಮಯ್ಯ

ಜನಸೇವೆ ಮಾಡುತ್ತಲೇ ದೈವಾದೀನರಾದ ಶಿವಳ್ಳಿಯವರ ಅಗಲಿಕೆ ವ್ಯರ್ಥವಾಗಬಾರದು. ಶಿವಳ್ಳಿಯವರ ಕುಂದಗೋಳ ಕ್ಷೇತ್ರದ ಅಭಿವೃದ್ಧಿಯ ಕನಸು ಪರಿಪೂರ್ಣಗೊಳ್ಳಬೇಕಾದರೆ ಜನತೆ ಅವರ ಧರ್ಮಪತ್ನಿ ಕುಸುಮಾವತಿ ಅವರಿಗೆ ಮತ ನೀಡಿ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕುಮಾರಸ್ವಾಮಿ ಜೊತೆ ದೂರವಾಣಿ ಮಾತುಕತೆ

ಮನೆ ಕುಸಿತದಿಂದ ಮೃತಪಟ್ಟವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಅವರಿಗೆ ಸಾಂತ್ವನ ಹೇಳಿದ್ದಾರೆ. ಈ ಬಗ್ಗೆಯೂ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಘಟನೆ ಬಗ್ಗೆ ಕುಮಾರಸ್ವಾಮಿ ಅವರ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದು, ಮೃತರ ಕುಟುಂಬದವರಿಗೆ ಸರ್ಕಾರದ ವತಿಯಿಂದ ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ ಎಂದಿದ್ದಾರೆ.

English summary
Siddaramaiah today did series of tweets about present political issues of Karnataka. He said CM Kumaraswamy is present CM of Karnataka and he will remain as CM for next four years.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X