ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪಗೆ ಮೋದಿ ಕಂಡರೆ ಭಯ: ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಆಗಸ್ಟ್ 17: ಯಡಿಯೂರಪ್ಪ ಸರ್ಕಾರದ ವಿರುದ್ಧ ತೀವ್ರ ಆಕ್ರೋಶಗೊಂಡಿರುವ ಸಿದ್ದರಾಮಯ್ಯ, ಸರಣಿ ಟ್ವೀಟ್ ಮಾಡಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರವಾಹ ಪರಿಸ್ಥತಿ, ಬರ ಪರಿಸ್ಥಿತಿ, ಹಳೆಯ ಜನಪ್ರಿಯ ಯೋಜನೆಗಳನ್ನು ಬದಲಾಯಿಸುವ ಸರರ್ಕಾರದ ನಿರ್ಧಾರ, ಸಂಪುಟ ವಿಸ್ತರಣೆ ಮಾಡದೇ ಇರುವುದು ಎಲ್ಲದರ ಬಗ್ಗೆಯೂ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿ ಯಡಿಯೂರಪ್ಪ ಅವರನ್ನು ಚುಚ್ಚಿದ್ದಾರೆ.

ಸಿದ್ದರಾಮಯ್ಯ ಯೋಜನೆಗಳಿಗೆ ಯಡಿಯೂರಪ್ಪ ಕತ್ತರಿ ಸಿದ್ದರಾಮಯ್ಯ ಯೋಜನೆಗಳಿಗೆ ಯಡಿಯೂರಪ್ಪ ಕತ್ತರಿ

ನಮ್ಮ ಸರ್ಕಾರ ರಾಜ್ಯದಲ್ಲಿ ಬಿಪಿಎಲ್ ಕಾರ್ಡುದಾರ 4 ಕೋಟಿ ಜನರಿಗೆ ಅನ್ನಭಾಗ್ಯ ಯೋಜನೆಯಡಿ 7 ಕೆಜಿ ಉಚಿತ ಅಕ್ಕಿ ನೀಡುವ ಯೋಜನೆ ಜಾರಿಗೊಳಿಸಿತ್ತು. ರಾಜ್ಯ ಬಿಜೆಪಿ ಸರ್ಕಾರ ಈ ಅಕ್ಕಿಯನ್ನು ಕಡಿಮೆ ಮಾಡಲು ಚರ್ಚೆ ನಡೆಸಿದೆ ಎಂಬ ಮಾಹಿತಿ ಬಂದಿದೆ. ಈ ರೀತಿಯೇನಾದರೂ ಮಾಡಿದರೆ ನಾನು ಬೀದಿಗಿಳಿದು ಪ್ರತಿಭಟನೆ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಅನ್ನಭಾಗ್ಯ ಯೋಜನೆಯ ಕಡಿತ ಮಾಡಿದ ಅಕ್ಕಿ ಹಣವನ್ನು ಕಿಸಾನ್ ಸಮ್ಮಾನ್ ಯೋಜನೆಗೆ ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ. ರೈತರಿಗೆ 4 ಸಾವಿರ ಕೊಡಲು ನಮ್ಮದೇನು ಅಡ್ಡಿ ಇಲ್ಲ, ಆದರೆ, ಬಡವರ ಅಕ್ಕಿ ಕಡಿತ ಮಾಡಿ ಹಣ ನೀಡುತ್ತೇವೆ ಎನ್ನುವುದು ಬಡವರ ವಿರೋಧಿ ಧೋರಣೆಯಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಅನ್ನಭಾಗ್ಯದಿಂದ ಗುಳೆ ಪದ್ಧತಿ ಕಡಿಮೆ ಆಗಿದೆ: ಸಿದ್ದರಾಮಯ್ಯ

ಅನ್ನಭಾಗ್ಯದಿಂದ ಗುಳೆ ಪದ್ಧತಿ ಕಡಿಮೆ ಆಗಿದೆ: ಸಿದ್ದರಾಮಯ್ಯ

ಅನ್ನಭಾಗ್ಯ ಯೋಜನೆ ಜಾರಿಗೆ ಬಂದ ಮೇಲೆ ಗುಳೆ ಪದ್ಧತಿ ಕಡಿಮೆ ಆಗಿದೆ. ಬಡವರು ಎರಡು ಹೊತ್ತು ಊಟ ಮಾಡುತ್ತಿದ್ದಾರೆ. ಇದು‌ ಇಡೀ ದೇಶದಲ್ಲಿ ಮೆಚ್ಚುಗೆ ಪಡೆದಿರುವ ಕಾರ್ಯಕ್ರಮ. ಹಾಗಾಗಿ ಅಕ್ಕಿ ಕಡಿತಗೊಳಿಸುವ ಆಲೋಚನೆಯೇನಾದರೂ ಯಡಿಯೂರಪ್ಪನವರಿಗೆ ಇದ್ದಲ್ಲಿ ತಕ್ಷಣವೇ ಅದನ್ನು ಕೈಬಿಡಲಿ ಎಂದು ಒತ್ತಾಯಿಸಿದ್ದಾರೆ.

'ಇಂದಿರಾ ಕ್ಯಾಂಟೀನ್ ಗೆ ರಾಜ್ಯ ಅನುದಾನ ನೀಡಬೇಕು'

'ಇಂದಿರಾ ಕ್ಯಾಂಟೀನ್ ಗೆ ರಾಜ್ಯ ಅನುದಾನ ನೀಡಬೇಕು'

ಇಂದಿರಾ ಕ್ಯಾಂಟೀನ್ ಅನ್ನು ಸರ್ಕಾರ ಬಿಬಿಎಂಪಿ ವ್ಯಾಪ್ತಿಗೆ ಬಿಟ್ಟುಕೊಡುತ್ತದೆ ಎಂಬ ಸುದ್ದಿಗೆ ಗರಂ ಆಗಿರುವ ಸಿದ್ದರಾಮಯ್ಯ, 'ಇಂದಿರಾ ಕ್ಯಾಂಟೀನ್‌ಗೆ ಸರ್ಕಾರ ಹಣ ನೀಡುತ್ತಿಲ್ಲ. ಬಿಬಿಎಂಪಿಯವರೇ ನಿರ್ವಹಿಸಬೇಕು ಎಂದು ಸರ್ಕಾರ ಹೇಳುತ್ತಿದೆ. ಕ್ಯಾಂಟೀನ್ ನಿರಂತರವಾಗಿ ನಡೆಯಬೇಕಾದರೆ, ಅಲ್ಲಿ ಗುಣಮಟ್ಟದ‌ ಆಹಾರ ಸಿಗಬೇಕಾದರೆ ಇಂದಿರಾ ಕ್ಯಾಂಟೀನ್ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಬೇಕು' ಎಂದು ಒತ್ತಾಯ ಮಾಡಿದ್ದಾರೆ.

ಅನ್ನಭಾಗ್ಯ ರದ್ದುಪಡಿಸುವುದಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ ಅನ್ನಭಾಗ್ಯ ರದ್ದುಪಡಿಸುವುದಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ

ರಾಜ್ಯದಲ್ಲಿ ಪೂರ್ಣ ಸರ್ಕಾರವೇ ಇಲ್ಲ: ಸಿದ್ದರಾಮಯ್ಯ

ರಾಜ್ಯದಲ್ಲಿ ಪೂರ್ಣ ಸರ್ಕಾರವೇ ಇಲ್ಲ: ಸಿದ್ದರಾಮಯ್ಯ

ಒಂದೆಡೆ ಪ್ರವಾಹ, ಇನ್ನೊಂದೆಡೆ ಬರ ಎರಡೂ ಇದೆ. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು, ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ವಾಡಿಕೆಗಿಂತ ಶೇ.20 ಕಡಿಮೆ ಆಗಿದೆ. ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿ 22 ದಿನ ಕಳೆದವು ಆದರೆ, ಇನ್ನೂ ರಾಜ್ಯದಲ್ಲಿ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಇಲ್ಲ ಎಂದು ಸಿದ್ದರಾಮಯ್ಯ ಚುಚ್ಚಿದ್ದಾರೆ. ಇವತ್ತಿನವರೆಗೆ ಬರ ಪೀಡಿತ ಪ್ರದೇಶಗಳ ಘೋಷಣೆ ಆಗಿಲ್ಲ. ಬರ ಪೀಡಿತ ಅಂತ ಘೋಷಣೆ ಮಾಡದೆ ಇದ್ದರೆ ಪರಿಹಾರ ಪಡೆಯಲು ಆಗುವುದಿಲ್ಲ. ಮಳೆಯಾಗದೆ ಬಿತ್ತನೆ ಮಾಡಿರುವ ಬೆಳೆ ಹಾಳಾಗಿದೆ.‌ ಕೆಲವೆಡೆ ಬಿತ್ತನೆ ಸಹ ಆಗ್ತಿಲ್ಲ. ಮಳೆ ಇಲ್ಲದೆ ಜಾನುವಾರುಗಳುಗೆ ಮೇವಿಲ್ಲದಂತಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇಂಥಹಾ ನಿರ್ಲಜ್ಜ ಸರ್ಕಾರವನ್ನು ನಾನು ನೋಡಿಲ್ಲ: ಸಿದ್ದರಾಮಯ್ಯ

ಇಂಥಹಾ ನಿರ್ಲಜ್ಜ ಸರ್ಕಾರವನ್ನು ನಾನು ನೋಡಿಲ್ಲ: ಸಿದ್ದರಾಮಯ್ಯ

ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಜಿಲ್ಲಾ ಮಂತ್ರಿಗಳಿಲ್ಲದೆ, ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡಿದ್ದಾರೆ. ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಇನ್ನೂ ಇದೆಯೇ? ಯಡಿಯೂರಪ್ಪನವರ ಏಕಚಕ್ರಾಧಿಪತ್ಯದಲ್ಲಿ ಸಂವಿಧಾನ, ಕಾನೂನು ಇವುಗಳಿಗೆ ಬೆಲೆ ಇಲ್ಲದಂತಾಗಿ, ರಾಜ್ಯದ ಜನರ ಕಷ್ಟ ಕೇಳುವವರಿಲ್ಲ. ಇಂಥ ನಿರ್ಲಜ್ಜ ಸರ್ಕಾರವನ್ನೇ ನಾನು ಎಂದೂ ನೋಡಿಲ್ಲ. ಸರ್ಕಾರ‌ ಕೂಡಲೇ ಬರ ಪ್ರದೇಶಗಳನ್ನ ಘೋಷಿಸಿ, ಅಗತ್ಯ ಪ್ರಮಾಣದ ಅನುದಾನ ಬಿಡುಗಡೆ ಮಾಡಬೇಕು. ದನಕರುಗಳಿಗೆ ಮೇವು ಕೊಡುತ್ತಿಲ್ಲ, ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ.‌ ರೈತರಿಗೆ, ಬಡವರಿಗೆ ಸಹಾಯ ಮಾಡುತ್ತಿಲ್ಲ.‌ ಹಾಗಿದ್ದಲ್ಲಿ ಈ ಸರ್ಕಾರ ಯಾಕೆ ಇರಬೇಕು?

ಕಾಂಗ್ರೆಸ್ಸಿಗರು 'ತಲೆತಿರುಕರು' ಎನ್ನುವ ಯಡಿಯೂರಪ್ಪ ಹೇಳಿಕೆ ಸರೀನಾ? ಕಾಂಗ್ರೆಸ್ಸಿಗರು 'ತಲೆತಿರುಕರು' ಎನ್ನುವ ಯಡಿಯೂರಪ್ಪ ಹೇಳಿಕೆ ಸರೀನಾ?

ಯಡಿಯೂರಪ್ಪ ಮಾತು ಜಾಸ್ತಿ, ಕೆಲಸ ಇಲ್ಲ: ಸಿದ್ದರಾಮಯ್ಯ

ಯಡಿಯೂರಪ್ಪ ಮಾತು ಜಾಸ್ತಿ, ಕೆಲಸ ಇಲ್ಲ: ಸಿದ್ದರಾಮಯ್ಯ

ಯಡಿಯೂರಪ್ಪನವರದು ಮಾತು ಮಾತ್ರ ಜಾಸ್ತಿ. ಅವರು ಕೇಂದ್ರದ ಮೇಲೆ ಏಕೆ ಒತ್ತಡ ಹೇರುತ್ತಿಲ್ಲ? ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರದಿಂದ ಇವತ್ತಿನವರೆಗೂ ಒಂದು ರೂಪಾಯಿ ನೀಡಿಲ್ಲ. ಪ್ರಧಾನಿಗಳೇ ಸ್ವತಃ ರಾಜ್ಯಕ್ಕೆ ಭೇಟಿ ನೀಡಬೇಕಿತ್ತು. ಇಬ್ಬರು ಸಚಿವರನ್ನ ಕಳುಹಿಸಿದ್ದೇವೆ ಅಂತಾರೆ. ಅವರೇನಾದ್ರೂ ಪರಿಹಾರ ಘೋಷಿಸಿದ್ದಾರಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ಅವರು ಮೋದಿಗೆ ಹೆದರುತ್ತಾರೆ: ಸಿದ್ದರಾಮಯ್ಯ

ಯಡಿಯೂರಪ್ಪ ಅವರು ಮೋದಿಗೆ ಹೆದರುತ್ತಾರೆ: ಸಿದ್ದರಾಮಯ್ಯ

ಯಡಿಯೂರಪ್ಪನವರು ಪ್ರಧಾನ ಮಂತ್ರಿಗಳಿಗೆ ತುಂಬಾ ಹೆದರುತ್ತಾರೆ ಎನಿಸುತ್ತಿದೆ. ಅವರಿಗೆ ಭಯವಿದ್ದರೆ ಸರ್ವ ಪಕ್ಷ ನಿಯೋಗವನ್ನಾದರೂ ಕರೆದುಕೊಂಡು ಹೋಗಲಿ, ಪ್ರಧಾನಿಯವರ ಬಳಿ ನಾವೇ ಮಾತಾಡುತ್ತೇವೆ. ಇಷ್ಟೆಲ್ಲಾ ಆಗಿದೆ ಇದರ ಬಗ್ಗೆ ಚರ್ಚೆಗೆ ವಿಧಾನ ಮಂಡಲ ಅಧಿವೇಶನವನ್ನು ಕರೆಯಬೇಕಿತ್ತು, ಅದನ್ನೂ ಮುಖ್ಯಮಂತ್ರಿಗಳು ಮಾಡಿಲ್ಲ.

ಮುಖ್ಯಮಂತ್ರಿಗೆ ಅವಮಾನ: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಕಿಡಿಮುಖ್ಯಮಂತ್ರಿಗೆ ಅವಮಾನ: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಕಿಡಿ

'ಕೇಂದ್ರ ಸರ್ಕಾರ ಐದು ಸಾವಿರ ಕೋಟಿ ನೆರವು ನೀಡಲಿ'

'ಕೇಂದ್ರ ಸರ್ಕಾರ ಐದು ಸಾವಿರ ಕೋಟಿ ನೆರವು ನೀಡಲಿ'

ಪ್ರಜಾಪ್ರಭುತ್ವ ವಿರೋಧಿಯಾಗಿ ಸರ್ಕಾರ ರಚನೆ ಆಗಿದೆ. ಸರ್ಕಾರಕ್ಕೆ ಯಾವುದೇ ತತ್ವ ಸಿದ್ಧಾಂತಗಳಿಲ್ಲ. ಕಣ್ಣು, ಕಿವಿ ಇಲ್ಲದ ಇಂತಹ ಸರ್ಕಾರವನ್ನ ನಾನು ಎಂದಿಗೂ ನೋಡಿಲ್ಲ. ಪ್ರಧಾನ ಮಂತ್ರಿಗಳು ರಾಜ್ಯದ ಪ್ರವಾಹದ ಬಗ್ಗೆ ಒಂದೇ ಒಂದು ಮಾತನಾಡಿಲ್ಲ, ರಾಜ್ಯದ ಬಗ್ಗೆ ಏಕಿಷ್ಟು ತಾತ್ಸಾರ? ಕೇಂದ್ರ ಸರ್ಕಾರ ಕೂಡಲೇ ರೂ.5 ಸಾವಿರ ಕೋಟಿ ನೆರವು ಘೋಷಿಸಲಿ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಯಡಿಯೂರಪ್ಪ ಟ್ವೀಟ್ ಮೂಲಕ ಸ್ಪಷ್ಟನೆ

ಜನಪ್ರಿಯ ಯೋಜನೆಗಳಿಗೆ ಸರ್ಕಾರ ಕತ್ತರಿ ಹಾಕುತ್ತದೆ ಎಂಬುದನ್ನು ಅಲ್ಲಗಳೆದಿರುವ ಯಡಿಯೂರಪ್ಪ ಅವರು, ಈ ಬಗ್ಗೆ ಟ್ವೀಟ್ ಮಾಡಿ, ಅನ್ನಭಾಗ್ಯ ಯೋಜನೆಗೆ ಕತ್ತರಿ ಹಾಕುವುದಿಲ್ಲ, ಅದನ್ನು ಮುಂದುವರೆಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ. ಇದಕ್ಕೆ ಸಿದ್ದರಾಮಯ್ಯ ಸ್ವಾಗತ ಬಯಸಿ ಟ್ವೀಟ್ ಮಾಡಿದ್ದಾರೆ.

English summary
Former CM Siddaramaiah today did series of tweet against state government and central government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X