'ಸಿದ್ಧರಾಮಯ್ಯನವರೇ, ದಯವಿಟ್ಟು ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ'
ಬೆಂಗಳೂರು, ಆಗಸ್ಟ್ 05: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಬೆಳಿಗ್ಗೆ 6 ಗಂಟೆಯಿಂದ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದಾರೆ. ಸಾರಿಗೆ ನೌಕರರ ಮುಷ್ಕರದಿಂದಾಗಿಇಂದು ಸಾರಿಗೆ ಬಸ್‌ಗಳು ರಸ್ತೆಗೆ ಇಳಿದಿಲ್ಲ, ಬಸ್ ಸಂಚಾರದಲ್ಲಿನ ವ್ಯತ್ಯಾಸದಿಂದಾಗಿಹಾಗಾಗಿ ಇದರ ಪರಿಣಾಮ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಮೇಲು ಬೀರಿದೆ. ದಿವಾಳಿ ಸರ್ಕಾರ ವಿರುದ್ಧ ಸಾರಿಗೆ ನೌಕರರ ಮುಷ್ಕರ, ರಾಜ್ಯಾದ್ಯಂತ ಸ್ತಬ್ಧವಾದ ಬಸ್ ಸಂಚಾರ ಎಂದು ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಅವರು ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಆರ್ ಅಶೋಕ್ ಅವರು, ಸಿದ್ಧರಾಮಯ್ಯನವರೇ, ದಯವಿಟ್ಟು ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ. ಕನ್ನಡಿಗರಿಗೆ ನೆಮ್ಮದಿಯ ಜೀವನ ಮಾಡಲು ಬಿಡಿ. ಬಸ್ಸಿಲ್ಲ..ಬಸ್ಸಿಲ್ಲ..
ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗಲು ಬಸ್ಸಿಲ್ಲ, ನೌಕರರು, ಉದ್ಯೋಗಿಗಳು ಕೆಲಸಕ್ಕೆ ಹೋಗಲು ಬಸ್ಸಿಲ್ಲ, ನೆಂಟರಿಷ್ಟರ ಮನೆಗಳಿಗೆ, ಶುಭ ಸಮಾರಂಭಗಳಿಗೆ, ಸಾವು-ನೋವಿಗೆ ಹೋಗಲು ಬಸ್ಸಿಲ್ಲ, ಇದು ಬಹುಪಾಲು ಕನ್ನಡಿಗರ ಇವತ್ತಿನ ಬವಣೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಖಜಾನೆ ಖಾಲಿ ಮಾಡಿ ಪಾಪರ್ ಆಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಚೆಲ್ಲಾಟ, ಜನಸಾಮಾನ್ಯರಿಗೆ ಪರದಾಟ, ಗೋಳಾಟ, ತೊಳಲಾಟ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನಿಮ್ಮ ಘನಂದಾರಿ ಆಡಳಿತದಿಂದ ಸಾರಿಗೆ ನಿಗಮಗಳನ್ನು ಸರ್ವನಾಶ ಮಾಡಿಬಿಟ್ಟರಲ್ಲ ಸ್ವಾಮಿ. ಸಾರಿಗೆ ನೌಕರರ ಹಿಂಬಾಕಿ ಕೊಡಲು ದುಡ್ಡಿಲ್ಲ, ನೌಕರರ ವೇತನ ಹೆಚ್ಚಳ ಮಾಡಲು ದುಡ್ಡಿಲ್ಲ, ಹೊಸ ಬಸ್ ಖರೀದಿಗೆ ದುಡ್ಡಿಲ್ಲ, ಹಳೆ ಬಸ್ಸುಗಳ ರಿಪೇರಿಗೆ ದುಡ್ಡಿಲ್ಲ. ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು. ನಿಮ್ಮ ಅಧಿಕಾರದ ಲಾಲಸೆಗೆ, ದುರಾಡಳಿತಕ್ಕೆ ಜನಸಾಮಾನ್ಯರು ಇನ್ಯಾವ್ಯಾವ ರೀತಿ ಪರದಾಡಬೇಕು, ಇನ್ನೆಷ್ಟು ಕಷ್ಟ ಅನುಭವಿಸಬೇಕು ಎಂದು ಆರ್ ಅಶೋಕ್ ಪ್ರಶ್ನಿಸಿದ್ದಾರೆ.
ಸಾರಿಗೆ ನೌಕರರ ಪ್ರತಿಭಟನೆ ವಿಚಾರದಲ್ಲಿ ಸರ್ಕಾರವನ್ನು ಟೀಕಿಸಿದ ಆರ್ ಅಶೊಕ್, ನಾನು ಸಾರಿಗೆ ಸಚಿವನಾಗಿದ್ದಾಗ ಅವರ ಬೇಡಿಕೆ ಈಡೇರಿಸಿದ್ದೆ. ಆದರೆ ಕಾಂಗ್ರೆಸ್ ಸರ್ಕಾರ 4 ವರ್ಷದ ಹಿಂಬಾಕಿ ಕೊಡದೆ, ಸಾರಿಗೆ ಸಿಬ್ಬಂದಿಗೆ, ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ತಕ್ಷಣ ಬೇಡಿಕೆ ಈಡೇರಿಸಲಿ ಎಂದು ಒತ್ತಾಯಿಸಿದ್ದಾರೆ. 'ಸರ್ಕಾರದ ಖಜಾನೆ ಖಾಲಿಯಾಗಿದೆ, ಜನರನ್ನು ಕೊಳ್ಳೆಹೊಡೆಯಲಾಗುತ್ತಿದೆ. ಸರ್ಕಾರಿ ನೌಕರರಿಗೆ ಸಂಬಳವೂ ಸರಿಯಾಗಿ ಸಿಗುತ್ತಿಲ್ಲ' ಎಂದು ಆರೋಪಿಸಿದರು.
ರಾಹುಲ್ ಗಾಂಧಿಯವರ ಬಗ್ಗೆಯೂ ಕಿಡಿಕಾರಿದ ಆರ್ ಅಶೋಕ್, ಎರಡು ವರ್ಷ ಎಲ್ಲೋ ಇದ್ದ ರಾಹುಲ್ ಗಾಂಧಿ, ಈಗ ಚುನಾವಣೆಗೋಸ್ಕರ ಕರ್ನಾಟಕಕ್ಕೆ ಬಂದಿದ್ದಾರೆ. ಕಳೆದ ಎರಡು ವರ್ಷದ 2,000 ರೈತ ಆತ್ಮಹತ್ಯೆ, ಗರ್ಭಿಣಿಯರ ಸಾವು, ಮೈಕ್ರೋ ಫೈನಾನ್ಸ್‌ನಿಂದ ಸಾವುಗಳಾದವು, ಐಪಿಎಲ್ ವಿಜಯೋತ್ಸವದಲ್ಲಿ 11 ಜನ ಅಮಯಾ ಯುವಕರು ಸತ್ತರಲ್ಲ ಆಗ ಯಾಕೆ ಬರಲಿಲ್ಲ? ಎಂದು ಪ್ರಶ್ನಿಸಿದರು.
ಕಾಂಗ್ರೆಸ್‌ನ ಚುನಾವಣಾ ಅಕ್ರಮಗಳನ್ನು ಹೋರಾಟವನ್ನು ಭೂತದ ಕೈಯಲ್ಲಿ ಭಗವದ್ಗೀತೆ ಗೆ ಹೋಲಿಸಿದರು. ರಾಹುಲ್ ಗಾಂಧಿ ಅದೇನು ಬಾಂಬ್ ಹಾಕ್ತಾರೋ ಹಾಕಲಿ ನೋಡೋಣ ಎಂದು ಸವಾಲು ಹಾಕಿದ ಆರ್ ಅಶೋಕ್ ಅವರು ಕನಕಪುರ ಚುನಾವಣೆಯಲ್ಲಿ ಅಕ್ರಮವಾಗಿದೆ ಎಂಬ ಕಾಂಗ್ರೆಸ್‌ನ ಆರೋಪಗಳನ್ನು ತಳ್ಳಿಹಾಕಿದರು. ಕಾಂಗ್ರೆಸ್ ನ ಒಳಜಗಳ ಮರೆಮಾಚಲು ರಾಹುಲ್ ಗಾಂಧಿ ಕರೆತರುತ್ತಿದ್ದಾರೆ. ನಾಳೆ ವಿಧಾನಸೌಧದ ಮುಂದೆ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಘೋಷಿಸಿದರು.












Click it and Unblock the Notifications