ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಜ್ಞಾವಂತ ಕನ್ನಡಿಗರಿಗೆ ಬಿಜೆಪಿಯ ಮೋಸ ಅರ್ಥಮಾಡಿಕೊಳ್ಳುವ ಜಾಣ್ಮೆಇದೆ

|
Google Oneindia Kannada News

ಬೆಂಗಳೂರು, ಜುಲೈ 3: ತೈಲ ಬೆಲೆ ಏರಿಕೆ ಮತ್ತು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯನವರು ಸಾಲುಸಾಲು ಟ್ವೀಟ್ ಮಾಡಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ, ರಾಜ್ಯದ ಹಿತದೃಷ್ಟಿ ಕಾಪಾಡಿಕೊಳ್ಳಲು ವಿಫಲರಾಗುತ್ತಿದ್ದಾರೆ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತ ಪಡಿಸಿದ್ದಾರೆ.

ದಾವಣಗೆರೆ; ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಜೈಕಾರದಾವಣಗೆರೆ; ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಜೈಕಾರ

"ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತನ್ನನ್ನು ಆರಿಸಿ ಕಳಿಸಿರುವ ಕರ್ನಾಟಕಕ್ಕೆ ತಾನೇ ಮಾಡಿರುವ ಅನ್ಯಾಯವನ್ನು ಮುಚ್ಚಿಹಾಕಲು ವಾಸ್ತವಾಂಶವನ್ನು ತಿರುಚಿ ರಾಜ್ಯದ ಜನತೆಯನ್ನು ತಪ್ಪು ದಾರಿಗೆಳೆಯುತ್ತಿದ್ದಾರೆ. @BJP4India ಪ್ರಜ್ಞಾವಂತ ಕನ್ನಡಿಗರಿಗೆ ಈ ಮೋಸವನ್ನು ಅರ್ಥಮಾಡಿಕೊಳ್ಳುವ ಜಾಣ್ಮೆ ಇದೆ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

"2020-21ರ ರಾಜಸ್ವ ಕೊರತೆ ಮತ್ತು ತೆರಿಗೆಯಲ್ಲಿ ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ನೀಡಬೇಕಾದ ಪಾಲಿನಲ್ಲಿ ಆಗಿರುವ ಅನ್ಯಾಯವನ್ನು ಸರಿದೂಗಿಸಲು 15ನೇ ಹಣಕಾಸು ಆಯೊಗ ರಾಜ್ಯಕ್ಕೆ ರೂ.5495 ಕೋಟಿ ವಿಶೇಷ ಅನುದಾನ ಶಿಫಾರಸು ಮಾಡಿತ್ತು. ನಿರ್ಮಲಾ ಸೀತಾರಾಮನ್ ಆ ಅನುದಾನಕ್ಕೆ ಕಲ್ಲು ಹಾಕಿ ರಾಜ್ಯಕ್ಕೆ ದ್ರೋಹ ಬಗೆದಿದ್ದಾರೆ".

 ಕುಮಾರಸ್ವಾಮಿ ಹೇಳಿದ್ದೆಲ್ಲವೂ ವೇದವಾಕ್ಯನಾ?: ಎಚ್‌ಡಿಕೆ ವಿರುದ್ಧ ಬೆಂಕಿಯುಗುಳಿದ ಸಿದ್ದರಾಮಯ್ಯ ಕುಮಾರಸ್ವಾಮಿ ಹೇಳಿದ್ದೆಲ್ಲವೂ ವೇದವಾಕ್ಯನಾ?: ಎಚ್‌ಡಿಕೆ ವಿರುದ್ಧ ಬೆಂಕಿಯುಗುಳಿದ ಸಿದ್ದರಾಮಯ್ಯ

 15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ಕೇಂದ್ರದಿಂದ ಬರುವ ತೆರಿಗೆ ಪಾಲು

15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ಕೇಂದ್ರದಿಂದ ಬರುವ ತೆರಿಗೆ ಪಾಲು

"15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ಕೇಂದ್ರದಿಂದ ಬರುವ ತೆರಿಗೆ ಪಾಲು ರೂ.31,180 ಕೋಟಿ ಎಂದು ಶಿಫಾರಸು ಮಾಡಿತ್ತು. 2020-21ರ ಕರ್ನಾಟಕದ ಬಜೆಟ್ ನಲ್ಲಿ ಈ ಪಾಲನ್ನು ರೂ.28.591ಕೋಟಿಗೆ ನಿಗದಿಪಡಿಸಲಾಗಿತ್ತು. ಕೊನೆಗೆ ಪರಿಷ್ಕೃತ ಅಂದಾಜಿನಲ್ಲಿ ತೆರಿಗೆ ಪಾಲನ್ನು ರೂ.20,053 ಕೋಟಿಗೆ ಇಳಿಕೆ ಮಾಡಲಾಗಿತ್ತು"ಎಂದು ಸಿದ್ದರಾಮಯ್ಯ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.

 ರಾಜ್ಯ ಬಿಜೆಪಿ ಸರಕಾರ ಸತ್ಯ ಮುಚ್ಚಿಟ್ಟು ಜನರಿಗೆ ಮಂಕುಬೂದಿ ಎರಚುತ್ತಿದೆ

ರಾಜ್ಯ ಬಿಜೆಪಿ ಸರಕಾರ ಸತ್ಯ ಮುಚ್ಚಿಟ್ಟು ಜನರಿಗೆ ಮಂಕುಬೂದಿ ಎರಚುತ್ತಿದೆ

"ರಾಜ್ಯದ @BJP4Karnataka ಸರ್ಕಾರವೇ 2020-21ರ ಸಾಲಿನ ರಾಜಸ್ವ ಕೊರತೆ ರೂ.19,485 ಎಂದು ಪರಿಷ್ಕರಿಸಿದ್ದರೂ, ಹಣಕಾಸು ಖಾತೆಯಂತ ಜವಾಬ್ದಾರಿ ಸ್ಥಾನದಲ್ಲಿರುವ ನಿರ್ಮಲಾ ಸೀತಾರಾಮನ್ ಅವರಿಗೆ ಅದು ಮಿಗತೆಯಾಗಿ ಹೇಗೆ ಕಾಣಿಸಿದೆ ಎನ್ನುವುದನ್ನು ಅವರೇ ರಾಜ್ಯದ ಜನತೆಗೆ ವಿವರಣೆ ನೀಡಬೇಕಾಗುತ್ತದೆ".

 GST ತೆರಿಗೆ ಪರಿಹಾರದಲ್ಲಿ ಕೂಡಾ ಕರ್ನಾಟಕಕ್ಕೆ ಅನ್ಯಾಯವಾಗಿದೆ

GST ತೆರಿಗೆ ಪರಿಹಾರದಲ್ಲಿ ಕೂಡಾ ಕರ್ನಾಟಕಕ್ಕೆ ಅನ್ಯಾಯವಾಗಿದೆ

ಕೇವಲ ವಿಶೇಷ ಅನುದಾನದಲ್ಲಿ ಮಾತ್ರವಲ್ಲ GST ತೆರಿಗೆ ಪರಿಹಾರದಲ್ಲಿ ಕೂಡಾ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಈ ನಷ್ಟ ಸರಿದೂಗಿಸಲು @BJP4Karnataka ಸರ್ಕಾರ ಸಾಲದ ಮೊರೆ ಹೋಗಬೇಕಾಯಿತು. ಹೀಗಿದ್ದರೂ @CMofKarnataka ಆಗಲೀ, @BJP4India ಸಂಸದರಾಗಲಿ ಈ ಅನ್ಯಾಯದ ವಿರುದ್ಧ ಸಣ್ಣ ವಿರೋಧದ ದನಿಯನ್ನು ಎತ್ತದೆ ರಾಜ್ಯಕ್ಕೆ ದ್ರೋಹ ಎಸಗಿದ್ದಾರೆ.

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ರಾಜ್ಯ ಹೇರಿರುವ ತೆರಿಗೆ ಕಾರಣ

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ರಾಜ್ಯ ಹೇರಿರುವ ತೆರಿಗೆ ಕಾರಣ ಎಂಬ ಹಸಿಸುಳ್ಳನ್ನು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ವಾಸ್ತವದಲ್ಲಿ ಕೇಂದ್ರ ಸರ್ಕಾರ ಹೇರಿರುವ ಅಬಕಾರಿ ತೆರಿಗೆಯೇ ಕಾರಣವಾಗಿದೆ. ಅಬಕಾರಿ ಸುಂಕವನ್ನು ಡೀಸೆಲ್ ಮೇಲೆ ಲೀಟರಿಗೆ ರೂ.3.45ರಿಂದ 31.84ಕ್ಕೆ ಮತ್ತು ಪೆಟ್ರೋಲ್ ಮೇಲೆ ರೂ.9.21ರಿಂದ 32.98ಕ್ಕೆ ಏರಿಸಲಾಗಿದೆ.

English summary
Opposition Leader Siddaramaiah Slams Central Govt over fuel price hike and injustice to Karnataka People.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X