KSRTC ಚಾಲಕ ಆತ್ಮಹತ್ಯೆ ಪ್ರಕರಣ: ಸದನದಲ್ಲಿ ಸಿದ್ದರಾಮಯ್ಯ ಒತ್ತಾಯಿಸಿದ್ದೇನು?
ಬೆಂಗಳೂರು, ಮಾ. 14: ಸಿಂಧುತ್ವ ಪ್ರಮಾಣ ಸಿಗದ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಕುಮಾರ ಚಿಂಚೋಳಿ ಗ್ರಾಮದ ಕೆಎಸ್ಆರ್ಟಿಸಿ ಚಾಲಕ ಓಂಕಾರ್ ಶೇರಿಕರ್ ಆತ್ಮಹತ್ಯೆ ಪ್ರಕರಣ ಸೋಮವಾರ ವಿಧಾನಸಭೆ ಅಧಿವೇಶನದಲ್ಲಿ ಪ್ರತಿಧ್ವನಿಸಿತು.
ವಿಧಾನಸಭಾ ಅಧಿವೇಶನ ಆರಂಭವಾಗುತ್ತಿದ್ದಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಚಾಲಕ ಓಂಕಾರ್ ಶೇರಿಕರ್ ಆತ್ಮಹತ್ಯೆ ಪ್ರಕರಣ ಪ್ರಸ್ತಾಪಿಸಿದರು.
ನಿನ್ನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಗೊಂಡಾ ಸಮಾಜದ ಒಂಕಾರ್ ರೇವಣ್ಣಪ್ಪ ಶೇರಿಕರ್ ಎಂಬುವ ಕೆಎಸ್ಆರ್‌ಟಿಸಿ ಚಾಲಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದು ಅತ್ಯಂತ ಬೇಸರದ ಸಂಗತಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾತು ಆರಂಭಿಸಿದ ಸಿದ್ದರಾಮಯ್ಯ ಆಡಳಿತ ರೂಢ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದರು.

ಸರ್ಕಾರ 16/01/2021 ರಂದು ಸಿಂಧುತ್ವ ಪ್ರಮಾಣ ಪತ್ರ ಪಡೆಯಲು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಿಂದ ಜಿಲ್ಲಾಧಿಕಾರಿಗಳು ವರದಿ ಪಡೆದು ಅದನ್ನು ಪರಿಶೀಲನೆ ಮಾಡಿ, ನಂತರ ಪ್ರಮಾಣ ಪತ್ರ ನೀಡಬೇಕು ಎಂದು ಆದೇಶ ಮಾಡಿದೆ. ಇದಕ್ಕೂ ಪೂರ್ವದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಯ ವರದಿ ಪಡೆದು ನೀಡಲಾಗುತ್ತಿತ್ತು. ಈ ಸಿಆರ್ಇ ಸೆಲ್ ಜನರಿಗೆ ಕಿರುಕುಳ ನೀಡುತ್ತಿದೆ ಎಂಬ ಆರೋಪ ಬಹಳ ಹಿಂದಿನಿಂದಲೂ ಇತ್ತು, ಸರ್ಕಾರ ಮತ್ತೆ ಅವರಿಗೆ ಅಧಿಕಾರ ನೀಡಿ ಜನರನ್ನು ಇನ್ನಷ್ಟು ಸಮಸ್ಯೆಗೆ ನೂಕಿದೆ ಎಂದರು.

ಓಂಕಾರ್ ರೇವಣಪ್ಪ ಅವರು ಕೆಲಸಕ್ಕೆ ಸೇರಿ ಎಂಟು ವರ್ಷಗಳಾದರೂ ಸಿಂಧುತ್ವ ಪ್ರಮಾಣಪತ್ರ ಸಿಗದೆ ಜಿಲ್ಲಾಧಿಕಾರಿ, ತಾಲೂಕು ಕಚೇರಿಗೆ ಅಲೆಯುತ್ತಲೇ ಇದ್ದರು. ಈ ಮಧ್ಯೆ ಕೆಎಸ್ಆರ್‌ಟಿಸಿ ಡಿಪೋದಿಂದ ಪ್ರಮಾಣ ಪತ್ರ ಸಲ್ಲಿಸುವಂತೆ ಮೇಲಿಂದ ಮೇಲೆ ನೋಟಿಸ್ ಗಳನ್ನು ನೀಡಲಾಗಿತ್ತು. ಈ ಎಲ್ಲಾ ಕಿರುಕುಳಗಳಿಂದ ನೊಂದ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೀದರ್ ಜಿಲ್ಲೆಯೊಂದರಲ್ಲೆ ಸುಮಾರು 150 ಜನರಿಗೆ ಸರ್ಕಾರಿ ನೌಕರಿಗೆ ಆಯ್ಕೆಯಾದರೂ ಈ ವರೆಗೆ ಸಿಂಧುತ್ವ ಪ್ರಮಾಣಪತ್ರ ನೀಡಲು ಸಾಧ್ಯವಾಗಿಲ್ಲ. ಇದು ನಿಮ್ಮ ಆಡಳಿತ ನೀತಿ ಎಂದು ಟೀಕೆ ಮಾಡಿದರು.
ಸರ್ಕಾರ 16/01/2021 ರ ಆದೇಶವನ್ನು ಹಿಂಪಡೆಯಬೇಕು. ಗೊಂಡ, ರಾಜಗೊಂಡ ಸಮುದಾಯದವರು ಎಸ್.ಟಿ ಮೀಸಲಾತಿ ಅಡಿ ಬರುತ್ತಾರೆ, ಕೋಲಿ, ಟೋಕ್ರೆ ಈ ಸಮಾಜದ ಜನರಿಗೂ ಮೀಸಲಾತಿ ಪತ್ರ ಸಿಗಬೇಕು. ಈಗ ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರ ಓಂಕಾರ್ ರೇವಣಪ್ಪ ಅವರ ಕುಟುಂಬದವರಿಗೆ ಪರಿಹಾರ ಮತ್ತು ಸರ್ಕಾರಿ ನೌಕರಿ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಸರ್ಕಾರದ ಹೊಸ ಆದೇಶ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಲೇ ಇವೆ, ನಾನು ಕೂಡ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಆದೇಶ ಹಿಂಪಡೆಯುವಂತೆ ಸರ್ಕಾರಕ್ಕೆ ಎರಡು ಪತ್ರ ಬರೆದಿದ್ದೆ. ಸರ್ಕಾರ ಆದೇಶ ಹಿಂಪಡೆದಿದ್ದರೆ ಇನ್ನಷ್ಟು ಅಮಾಯಕ ಜನರ ಸಾವಿಗೆ ಕಾರಣವಾಗಬಹುದಾದ ಸಾಧ್ಯತೆಗಳನ್ನು ಅಲ್ಲಗಳೆಯಲು ಆಗಲ್ಲ. ತಕ್ಷಣ ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದರು.
Recommended Video
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications