Siddaramaiah: ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್ಸು ಕಳಿಸಲು ಕ್ರಮ: ಸಿದ್ದರಾಮಯ್ಯ

ಮೈಸೂರು, ಏಪ್ರಿಲ್ 26: ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯದ ವಿವಿಧ ನಗರಗಳಲ್ಲಿ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗವುದು ಎಂದರು.

ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಿತ್ತು.ಹಿಂದೆ ಪುಲ್ವಾಮಾದಲ್ಲಿಯೂ 40 ಜನ ಯೋಧರು ಪ್ರಾಣ ಕಳೆದುಕೊಂಡಿದ್ದರು. ಈ ಘಟನೆಯಲ್ಲಿ ಭದ್ರತಾ ವೈಫಲ್ಯವಾಗಿದೆ. ಕೇಂದ್ರ ಸರ್ಕಾರದವರನ್ನು ನಂಬಿ ಪ್ರವಾಸಿಗರು ಹೋಗಿದ್ದರು ಹಾಗೂ ಈಗ ಯಾವುದೇ ಕ್ರಮಗಳನ್ನು ಕೇಂದ್ರ ಕೈಗೊಂಡರೂ, ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ ? ಕಾಶ್ಮೀರದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆಗೆ ಸಚಿವ ಸಂತೋಷ್ ಲಾಡ್ ಅವರನ್ನು ನಿಯೋಜಿಸಿದ್ದು, ಅವರು ಎಲ್ಲ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

Siddaramaiah Steps Will Be Taken To Repatriate Pakistani Nationals In The State

ಉಗ್ರರ ದಾಳಿಗೆ ಸಂಬಂಧಿಸಿದಂತೆ, ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇದೆಯೇ ಎಂಬ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅಗತ್ಯವಿಲ್ಲ. ಕಾಶ್ಮೀರದ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು. ನಾವು ಯುದ್ಧದ ಪರ ಇಲ್ಲ. ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಕೇಂದ್ರಸರ್ಕಾರ ಭದ್ರತೆಯನ್ನು ಹೆಚ್ಚಿಸಬೇಕು ಎಂದು ತಿಳಿಸಿದರು.

ಕಾಶ್ಮೀರದ ಉಗ್ರರ ದಾಳಿಗೆ ಸಂಭಂಧಿಸಿದಂತೆ ಕರೆಯಲಾಗಿದ್ದ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿಯವರು ಭಾಗವಹಿಸದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು ಮಹತ್ವಯುತ ಸಭೆಯಾಗಿದ್ದು, ಪ್ರಧಾನಿಯವರು ಈ ಸಭೆಯಲ್ಲಿ ಹಾಜರಿರಬೇಕಿತ್ತು. ಆದರೆ ಅವರಿಗೆ ಈ ಸಭೆಗಿಂತ ಬಿಹಾರದ ಚುನಾವಣಾ ಪ್ರಚಾರವೇ ಮುಖ್ಯವೆಂದು ಕಾಣುತ್ತದೆ. ಪ್ರಧಾನಿಯವರು ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಚಾಮರಾಜನಗರಕ್ಕೆ 20 ಬಾರಿ ಮುಖ್ಯಮಂತ್ರಿಯಾಗಿ ಭೇಟಿ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು,ಚಾಮರಾಜನಗರಕ್ಕೆ ಮೊದಲ ಬಾರಿ ಭೇಟಿ ನೀಡಿದಾಗಲೇ, ಅಲ್ಲಿಗೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆಂಬ ಕಳಂಕ ತೊಡೆದುಹೋಯಿತು ಎಂದರು.

ಉಗ್ರರನ್ನು ಸದೆಬಡಿಯಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು: ಹೆಬ್ಬಾಳಕರ್

ದೇಶಕ್ಕೆ ಮಾರಕವಾಗಿರುವ ಉಗ್ರರನ್ನು ಮಟ್ಟಹಾಕಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಉಗ್ರರನ್ನು ಸದೆ ಬಡಿಯಲು ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡರೂ ಅದಕ್ಕೆ ಬೆಂಬಲ ನೀಡಲಾಗುವುದು ಎಂದರು.

ಉಗ್ರರನ್ನು ಮಟ್ಟಹಾಕುವ ವಿಷಯದಲ್ಲಿ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ನಮ್ಮ ನಾಯಕರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಈಗಾಗಲೇ ಹೇಳಿದ್ದಾರೆ. ಉಗ್ರರನ್ನು ಮಟ್ಟಹಾಕುವುದೇ ನಮ್ಮೆಲ್ಲರ ಉದ್ದೇಶವಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿ ಅಮಾಯಕರಿಗೆ ವಂಚಿಸುತ್ತಿರುವುದು ನನ್ನ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಖುದ್ದು ನಾನೇ ದೂರು ನೀಡಿದ್ದೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+