ರಾಜ್ಯದಲ್ಲಿ ಕೋವಿಡ್ ಹೆಚ್ಚಳ; ಯಾರ್ಯಾರಿಗೆ ಮಾಸ್ಕ್ ಕಡ್ಡಾಯ : ಸಿದ್ದರಾಮಯ್ಯ ಮಹತ್ವದ ಸೂಚನೆ
ಬೆಂಗಳೂರು, ಮೇ 27: ಕೋವಿಡ್ ಸಂಬಂಧಿಸಿದಂತೆ ನಿನ್ನೆ(ಸೋಮವಾರ) ನಡೆದ ಸಭೆಯಲ್ಲಿ ಮುನ್ನೆಚ್ಚರಿಕಾ ಬಗ್ಗೆ ಚರ್ಚಿಸಲಾಗಿದೆ. ನಾವು ಎಲ್ಲದ್ದಕ್ಕೂ ಸಿದ್ಧರಾಗಿರಬೇಕು. ವೆಂಟಿಲೇಟರ್, ಆಮ್ಲಜನಕ, ವಾರ್ಡ್ ಗಳಿಗೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಲಾಗಿದೆ. ಸುಮಾರು 65 ಇದ್ದ ಪ್ರಕರಣಗಳು 80 ಆಗಿವೆ. ಇದು ಗಂಭೀರವಾದ ತಳಿಯಲ್ಲ ಎಂದು ಹೇಳಿದರು.
ಇಂದು ವಿಧಾನಸೌಧದ ಪೂರ್ವ ದ್ವಾರದ ಬಳಿ ಇರುವ ಮಾಜಿ ಪ್ರಧಾನ ಮಂತ್ರಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರು ರವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೇ ಹಾಗೂ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿ, ನೆಗಡಿ, ಕೆಮ್ಮು, ಜ್ವರ ಬಂದಿರುವ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು ಹಾಗೂ ವೃದ್ಧರು, ವಿವಿಧ ಕಾಯಿಲೆಗಳಿಗೆ ತುತ್ತಾಗಿರರುವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಲಸಿಕೆಗಳನ್ನು. ಮುನ್ನೆಚ್ಚರಿಕಾ ಕ್ರಮವಾಗಿ ಸಂಗ್ರಹಿಸಬೇಕು ಎಂದು ಸೂಚಿಸಲಾಗಿದೆ ಎಂದರು. ಎಲ್ಲರೂ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿಲ್ಲ.ಆದರೆ ವೃದ್ಧರು, ಕಾಯಿಲೆಯಿರುವವರು ಮಾಸ್ಕ್ ಕಡ್ಡಾಯವಾಗಿ ಹಾಕಿಕೊಳ್ಳುವಂತೆ ಸೂಚಿಸಲಾಗಿದೆ ಎಂದರು. ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಮಾಡಲು ಕೇಂದ್ರದಿಂದ ಸೂಚನೆ ಬಂದಿಲ್ಲ. ಆದರೆ ಎಚ್ಚರಿಕೆ ವಹಿಸಲಾಗುವುದು ಎಂದರು.

ಸ್ವತಂತ್ರ ಭಾರತದ ಮೊದಲನೇ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಆಧುನಿಕ ಭಾರತದ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನೆಹರೂ ಅವರ ಪುಣ್ಯ ತಿಥಿಯನ್ನು ಸರ್ಕಾರ ಗೌರವ ಹಾಗೂ ಅಭಿಮಾನದಿಂದ ನೆರವೇರಿಸಿದೆ. ದೇಶದ ಬಡತನವನ್ನು ಹೋಗಲಾಡಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದರು. ಉದ್ಯೋಗ ಸೃಷ್ಟಿ, ಮಿಶ್ರ ಆರ್ಥಿಕತೆಯನ್ನು ದೇಶದಲ್ಲಿ ಪರಿಚಯಿಸಿದ್ದಲ್ಲದೆ ದೇಶದಲ್ಲಿ ಹಸಿರು ಕ್ರಾಂತಿಗೆ ಅಡಿಗಲ್ಲು ಹಾಕಿದರು.
ಸಹಕಾರಿ ಚಳವಳಿ, ವಿಕೇಂದ್ರೀಕರಣಕ್ಕೆ ಬದ್ಧತೆಯಿಂದ ಕೆಲಸ ಮಾಡಿದರು. ಅವರು ಪ್ರಧಾನಿಗಳಾಗಿದ್ದ 17 ವರ್ಷಗಳ ಅವಧಿಯಲ್ಲಿ ಅನೇಕ ಅಣೆಕಟ್ಟು, ಸಾರ್ವಜನಿಕ ವಲಯದಲ್ಲಿ ಕೈಗಾರಿಕೆ, ಶಿಕ್ಷಣ ಸಂಸ್ಥೆಗಳನ್ನೂ ಸ್ಥಾಪಿಸಿದರು. ದೇಶ ಆರ್ಥಿಕವಾಗಿ ಸಬಲತೆಯನ್ನು ಕಂಡುಕೊಂಡಿದ್ದರೆ, ಆಹಾರದಲ್ಲಿ ಸ್ವಾವಲಂಬನೆಯನ್ನು ಕಂಡುಕೊಂಡಿದ್ದರೆ ನೆಹರೂ ಅವರು ಹಾಕಿದ ಅಡಿಪಾಯ ಕಾರಣ ಎಂದರು. ನೆಹರೂ ಅವರನ್ನು ಗೌರವದಿಂದ ಸ್ಮರಿಸುವ ಕೆಲಸವನ್ನು ಪ್ರತಿಯೊಬ್ಬ ಭಾರತೀಯನೂ ಮಾಡಬೇಕು ಎಂದರು. ಆಧುನಿಕ ಭಾರತಕ್ಕೆ ನೆಹರೂ ಅಡಿಪಾಯ ಹಾಕಿರದೇ ಹೋಗಿದ್ದರೆ ಇಂದಿನ ಭಾರತ ಇರುತ್ತಿರಲಿಲ್ಲ. ಆರ್ಥಿಕತೆಯಲ್ಲಿ ಜಗತ್ತಿನಲ್ಲಿ 5 ನೇ ಸ್ಥಾನದಲ್ಲಿದ್ದರೆ ಅದಕ್ಕೆ ನೆಹರೂ ಅವರೇ ಕಾರಣ ಎಂದರು.
ಸ್ವಾತಂತ್ರ್ಯ ಹೋರಾಟದಲ್ಲೇ ಭಾಗವಹಿಸದೆ ಬ್ರಿಟೀಷರ ಜೊತೆಗಿದ್ದ RSS, BJP ಯವರು ಈಗ ದೇಶಭಕ್ತಿ ಬಗ್ಗೆ ಬರಿ ಭಾಷಣ ಮಾಡುವುದು ಡೋಂಗಿತನ ಎಂದು ಟೀಕಿಸಿದರು. ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆಯಲ್ಲಿ, ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲದ ಬಿಜೆಪಿಯವರು ಸಾಮಾಜಿಕ ನ್ಯಾಯದ ಪರವಾಗಿದ್ದ ಅಂಬೇಡ್ಕರ್, ನೆಹರೂ ಬಗ್ಗೆ ಬಿಜೆಪಿ, RSS ಸಹಸ್ರ ಸಹಸ್ರ ಸುಳ್ಳುಗಳನ್ನು ಸೃಷ್ಟಿಸುತ್ತಿದೆ ಎಂದರು.
ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಡಾಂಗೆ ಮತ್ತು ಸಾವರ್ಕರ್ ಎಂದು ಸ್ವತಃ ಅಂಬೇಡ್ಕರ್ ಅವರೇ ತಮ್ಮದೇ ಹಸ್ತಾಕ್ಷರದಲ್ಲಿ ಪತ್ರ ಬರೆದಿದ್ದಾರೆ. ಆದರೂ ಬಿಜೆಪಿ, RSS ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಹಸಿ ಹಸಿ ಸುಳ್ಳುಗಳನ್ನು ಹಂಚುತ್ತಾ ತಿರುಗುತ್ತಿದ್ದಾರೆ ಎಂದರು.
ಬಿಜೆಪಿಗೆ ಗೊತ್ತಿರುವುದು ಬರಿ ಹಿಂಸೆ ಮತ್ತು ಸುಳ್ಳು. ದಲಿತರು, ಶೂದ್ರರ ಮೇಲೆ ಕೇಸುಗಳು ಬೀಳುವಂತೆ ಮಾಡುವುದು ಇದೇ BJP ಮತ್ತು RSS. ಆಮೇಲೆ ಅವರನ್ನು ಜೈಲಿನಿಂದ ಕರೆದುಕೊಂಡು ಬರುವುದೂ ಇವರೇ. ಇದೇ ನಾಟಕ ಆಡಿಕೊಂಡೇ ಅವರು ಕಾಲಕಳೆಯುತ್ತಿದ್ದಾರೆ ಎಂದು ಟೀಕಿಸಿದರು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications