ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉದ್ಯೋಗ ನೀಡುವ ಭರವಸೆ; ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 17 : "ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಅವರು ಕಳೆದ 45 ವರ್ಷಗಳಲ್ಲಿ ಅತ್ಯಧಿಕ ನಿರುದ್ಯೋಗಕ್ಕೆ ಕಾರಣಕರ್ತರಾಗಿದ್ದಾರೆ" ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಸೆ. 17ರ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬ. 70ನೇ ವರ್ಷದ ಹುಟ್ಟು ಹಬ್ಬದ ದಿನವನ್ನು 'ರಾಷ್ಟ್ರೀಯ ನಿರುದ್ಯೋಗ ದಿನ' ಎಂದು ಕರೆಯಲಾಗಿದೆ. ಟ್ವಿಟರ್‌ನಲ್ಲಿ ಈ ಕುರಿತು 24 ಗಂಟೆಗಳ ಅಭಿಯಾನ ನಡೆಯುತ್ತಿದೆ.

ಕೊರೊನಾ ಇಂಪ್ಯಾಕ್ಟ್‌: 10,000 ಉದ್ಯೋಗ ಕಡಿತದ ನಿರೀಕ್ಷೆಯಲ್ಲಿ ಬ್ರಿಟಿಷ್ ಏರ್‌ವೇಸ್ಕೊರೊನಾ ಇಂಪ್ಯಾಕ್ಟ್‌: 10,000 ಉದ್ಯೋಗ ಕಡಿತದ ನಿರೀಕ್ಷೆಯಲ್ಲಿ ಬ್ರಿಟಿಷ್ ಏರ್‌ವೇಸ್

NationalUnemploymentDay ಎಂಬ ಹ್ಯಾಷ್ ಟ್ಯಾಗ್ ಬಳಕೆ ಮಾಡಿಕೊಂಡು ಸಾವಿರಾರು ಟ್ವೀಟ್‌ಗಳನ್ನು ಮಾಡಲಾಗುತ್ತಿದೆ. ಈ ಮೂಲಕ ದೇಶದ ಯುವಜನರಿಗೆ ಉದ್ಯೋಗ ಕೊಡಿ ಎಂದು ಪ್ರಧಾನಿ ಮೋದಿಯನ್ನು ಆಗ್ರಹಿಸಲಾಗುತ್ತಿದೆ.

ಜನರು ಇನ್ನೆಷ್ಟು ದಿನ ನಿರುದ್ಯೋಗಿಗಳಾಗಿರಬೇಕು: ಕೇಂದ್ರಕ್ಕೆ ರಾಹುಲ್ ಪ್ರಶ್ನೆ ಜನರು ಇನ್ನೆಷ್ಟು ದಿನ ನಿರುದ್ಯೋಗಿಗಳಾಗಿರಬೇಕು: ಕೇಂದ್ರಕ್ಕೆ ರಾಹುಲ್ ಪ್ರಶ್ನೆ

Recommended Video

BSY ಪುತ್ರನಿಗೆ ರಾಜ್ಯ ರಾಜಕೀಯದಲ್ಲಿ ಏನು ಕೆಲಸ | Vijayendra | Oneindia Kannada

ಕಾಂಗ್ರೆಸ್ ನಾಯಕ ಮತ್ತು ಕರ್ನಾಟಕದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ NationalUnemploymentDay ಅಭಿಯಾನಕ್ಕೆ ಬೆಂಬಲ ನೀಡಿದ್ದಾರೆ. ನರೇಂದ್ರ ಮೋದಿ ಸರ್ಕಾರದ ಆಡಳಿತದ ಬಗ್ಗೆ ಟ್ವೀಟ್‌ಗಳನ್ನು ಮಾಡಿದ್ದಾರೆ.

ನಿರುದ್ಯೋಗ ಭತ್ಯೆ ಕೊಡಲು ಸರ್ಕಾರಕ್ಕೆ ಏಕೆ ಮನಸ್ಸಿಲ್ಲ?ನಿರುದ್ಯೋಗ ಭತ್ಯೆ ಕೊಡಲು ಸರ್ಕಾರಕ್ಕೆ ಏಕೆ ಮನಸ್ಸಿಲ್ಲ?

ನಿರುದ್ಯೋಗಕ್ಕೆ ಕಾರಣಕರ್ತ

ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, "ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಮೋದಿ ನಿರುದ್ಯೋಗಕ್ಕೆ ಕಾರಣಕರ್ತರಾಗಿದ್ದಾರೆ" ಎಂದು ದೂರಿದ್ದಾರೆ.

ನಿರುದ್ಯೋಗ ಪರ್ವ

ಸಿದ್ದರಾಮಯ್ಯ ಅವರು, "ನರೇಂದ್ರ ಮೋದಿ ಆಡಳಿತದ ನಿರುದ್ಯೋಗ ಪರ್ವ ನಿರಾಂತಕವಾಗಿ ಮುಂದುವರಿದಿದೆ.ಕಳೆದ 6 ತಿಂಗಳಲ್ಲಿ ಸಂಬಳ‌ ಪಡೆಯುವ ಎರಡು ಕೋಟಿ ಉದ್ಯೋಗಗಳು ಮತ್ತು ಒಟ್ಟು 12 ಕೋಟಿ ಉದ್ಯೋಗಗಳು ನಷ್ಟವಾಗಿವೆ" ಎಂದು ಆರೋಪಿಸಿದ್ದಾರೆ.

ಡಿ. ಕೆ. ಶಿವಕುಮಾರ್ ಟ್ವೀಟ್

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಹ NationalUnemploymentDay ಎಂಬ ಹ್ಯಾಷ್ ಟ್ಯಾಗ್ ಬಳಕೆ ಮಾಡಿಕೊಂಡು ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿ ಟ್ವೀಟ್

ಎಐಸಿಸಿ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಸಹ NationalUnemploymentDay ಅಭಿಯಾನಕ್ಕೆ ಬೆಂಬಲ ನೀಡಿದ್ದಾರೆ. ಸರಣಿ ಟ್ವೀಟ್‌ಗಳನ್ನು ಪತ್ರಿಕಾ ತುಣುಕುಗಳ ಜೊತೆ ಮಾಡಿದ್ದಾರೆ.

English summary
Karnataka former CM and Congress leader Siddaramaiah supported the NationalUnemploymentDay campaign. National Unemployment Day trends on twitter on PM Narendra Modi's 70th birth day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X