ರಾಜ್ಯದಲ್ಲಿ ಮುಂಗಾರು ಕೃಷಿ ಚಟುವಟಿಕೆ ಆರಂಭ: ಕೃಷಿ ಇಲಾಖೆ ಅಧಿಕಾರಿಗಳಿಗೆ ಸಿದ್ದರಾಮಯ್ಯ ಕೊಟ್ಟ ಸೂಚನೆ ಏನು?

ಬೆಂಗಳೂರು, ಮೇ 22: ರಾಜ್ಯಾದ್ಯಂತ ಮುಂಗಾರು ಕೃಷಿ ಚಟುವಟಿಕೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಬೀಜ ಮತ್ತು ಗೊಬ್ಬರಕ್ಕೆ ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಬೀಜ ಮತ್ತು ಗೊಬ್ಬರಕ್ಕಾಗಿ ಹಾವೇರಿಯಲ್ಲಿ ರೈತರು ಸಾಲುಗಟ್ಟಿ ನಿಂತಿದ್ದ ವಿಷಯ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿಗಳು ಕೃಷಿ ಸಚಿವ ಚೆಲುವರಾಯಸ್ವಾಮಿ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

Siddaramaiah Take Measures To Ensure That There Is No Shortage Of Seeds And Fertilizers

ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ಕೃಷಿ ಚಟುವಟಿಕೆ ಆರಂಭಿಸಿದ್ದಾರೆ. ಆದ್ದರಿಂದ ರೈತರು ಬೀಜ, ಗೊಬ್ಬರಕ್ಕೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಹೇಳಿದರು. ತಕ್ಷಣ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಬೀಜ, ಗೊಬ್ಬರದ ದಾಸ್ತಾನು ಕುರಿತು ಮಾಹಿತಿ ಪಡೆದುಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಎಲ್ಲಾ ಧರ್ಮದವರೂ ಒಂದು ತಾಯಿಯ ಮಕ್ಕಳಂತೆ ಇರಬೇಕು

ಎಲ್ಲಾ ಧರ್ಮದವರೂ ಒಂದು ತಾಯಿಯ ಮಕ್ಕಳಂತೆ ಇರಲು ಎಲ್ಲ ಧರ್ಮದವರಲ್ಲೂ ಆರ್ಥಿಕ, ಸಾಮಾಜಿಕ, ರಾಜಕೀಯ ಶಕ್ತಿ ತುಂಬಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 10168 ಹಜ್ ಯಾತ್ರಿಗಳ ಪ್ರಯಾಣ ಸುಖಕರವಾಗಿರಲಿ ಎಂದು ಶುಭ ಕೋರಿದ್ದೇನೆ. ಸಮಾಜದಲ್ಲಿ ಸಾಮರಸ್ಯ, ಸೌಹಾರ್ದತೆ ನೆಲಸಲಿ ಎಂದು ಪ್ರಾರ್ಥಿಸುವಂತೆ ತಿಳಿಸಿದ್ದೇನೆ.

ಕುವೆಂಪು ಅವರು ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿದಂತೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಭೌದ್ಧ, ಸಿಖ್ ಧರ್ಮದವರೆಲ್ಲಾ ಒಂದು ತಾಯಿಯ ಮಕ್ಕಳಂತೆ ಇರಬೇಕು. ಅಂಥ ವಾತಾವರಣ ನಿರ್ಮಾಣವಾಗಬೇಕಾದರೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಶಕ್ತಿ ಬಂದು ಎಲ್ಲರೂ ಸಬಲರಾಗಬೇಕು. ಅದಕ್ಕೆ ಹಜ್ ಯಾತ್ರಿಗಳು ಪ್ರಾರ್ಥಿಸಲಿ. ಪ್ರಸ್ತುತ ಆರ್ಥಿಕ ವರ್ಷದಲ್ಲಿ ದೇಶ ಹಾಗೂ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಬೆಳೆ ಬರಲಿ, ನಾಡು ಸಮೃದ್ಧವಾಗಲಿ ಎಂದು ಪ್ರಾರ್ಥಿಸುವಂತೆ ಎಲ್ಲಾ ಯಾತ್ರಾರ್ಥಿಗಳಲ್ಲಿ ಮನವಿ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಹಜ್ ಭವನ ನಿರ್ಮಾಣಕ್ಕಾಗಿ ಅನುದಾನ

ಮಂಗಳೂರು ಮತ್ತು ಕಲಬುರ್ಗಿಯಲ್ಲಿ ಹಜ್ ಭವನ ನಿರ್ಮಾಣಕ್ಕಾಗಿ ಅನುದಾನ ಒದಗಿಸಲಾಗಿದೆ. ಕಲಬುರ್ಗಿಯಲ್ಲಿ ಸ್ಥಳ ಸಿಗದೇ ವಿಳಂಬವಾಗಿದೆ. ಮಂಗಳೂರಿನಲ್ಲಿ ಸ್ಥಳ ಗುರುತಿಸಲಾಗಿದೆ ಎಂದರು. ನೀತಿ ಸಂಹಿತೆ ಮುಗಿದ ಮೇಲೆ ಗುದ್ದಲಿ ಪೂಜೆ ನೆರವೇರಿಸಲಾಗುವುದು ಎಂದರು. ಪ್ರತಿ ದಿನ ಹಜ್ ಗೆ ತೆರಳುವವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸಚಿವ ಜಮೀರ್ ಅಹಮ್ಮದ್ ಅವರನ್ನು ಮುಖ್ಯಮಂತ್ರಿಗಳು ಶ್ಲಾಘಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+