Get Updates
Get notified of breaking news, exclusive insights, and must-see stories!

ಪಿಂಚಣಿಗಾಗಿ ಪ್ರತಿಭಟನೆ; ಸಿಎಂ ಕಣ್ಣು ಬಿಟ್ಟು ನೋಡಲು ಇನ್ನೆಷ್ಟು ಹೆಣ ಬೀಳಬೇಕು? ಸಿದ್ದರಾಮಯ್ಯ ಕಿಡಿ

ಈಗಾಗಲೇ ಪ್ರಾಣ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.

ಬೆಂಗಳೂರು,ಫೆಬ್ರವರಿ25: ಕರ್ನಾಕಟ ರಾಜ್ಯ ಅನುದಾನಿತ ಶಾಲಾ ಶಿಕ್ಷಕರಿಂದ ಪಿಂಚಣಿಗಾಗಿ 141 ದಿನಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ನಡೆಸುತ್ತಿದ್ದು, ಕೆಲ ದಿನಗಳ ಹಿಂದೆ ಶಿಕ್ಷಕರಾದ ಶಂಕರಪ್ಪ ಬೋರಡ್ಡಿ ಎಂಬುವವರುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಕುರಿತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಟ್ವೀಟರ್ ಮೂಲಕ ಬಿಜೆಪಿ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಳೆದ 141 ದಿನಗಳಿಂದ ಫ್ರೀಡಂ ಪಾರ್ಕ್ ನಲ್ಲಿ ಮುಷ್ಕರ ನಿರತರಾಗಿರುವ ಅನುದಾನಿತ ಶಾಲಾ ಶಿಕ್ಷಕರ ಗೋಳು ಕೇಳುವವರಿಲ್ಲ. ಶಿಕ್ಷಕರು ಕೇಳುತ್ತಿರುವುದು ತಮ್ಮ ಹಕ್ಕಿನ ಪಿಂಚಣಿಯನ್ನು ಎಂಬ ಕನಿಷ್ಠ ಜ್ಞಾನವಾದರೂ ಬಿಜೆಪಿ ಸರ್ಕಾರಕ್ಕೆ ಬೇಡವೇ? ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

Siddaramaiah Talks Over Teacher Suicide Who Came Bangalore To Protest

ಪಿಂಚಣಿಗಾಗಿ ಮುಷ್ಕರದಲ್ಲಿ ತೊಡಗಿದ್ದ ಬಾಗಲಕೋಟೆ ಮೂಲದ ಶಿಕ್ಷಕ ಸಿದ್ದಯ್ಯ ಹಿರೇಮಠ ಮತ್ತು ರಾಯಚೂರು ಜಿಲ್ಲೆ ಸಿಂಧನೂರು ಮೂಲಕ ಶಂಕರಪ್ಪ ಬೋರಡ್ಡಿ ಅವರು ಸರ್ಕಾರ ತಮ್ಮ ಹೋರಾಟಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನು ಸರ್ಕಾರಿ ಕೊಲೆಗಳು ಅನ್ನದೆ ಬೇರೇನು ಹೇಳಬೇಕು ಬಸವರಾಜ ಬೊಮ್ಮಾಯಿ ಅವರೇ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಕಣ್ಣು ಬಿಟ್ಟು ನೋಡಲು ಇನ್ನೆಷ್ಟು ಹೆಣ ಬೀಳಬೇಕು? ಅನುದಾನಿತ ಶಾಲಾ ಶಿಕ್ಷಕರು ಪ್ರತಿಭಟನೆ ಆರಂಭಿಸಿ 141 ದಿನಗಳು ಕಳೆದರೂ ಇನ್ನು ಈ ವಿಚಾರ ತಮ್ಮ ಗಮನಕ್ಕೆ ಬಂದಿರಲಿಲ್ಲ ಎಂದು ಹೇಳುವ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಇಷ್ಟು ದಿನ ಕೋಮಾದಲ್ಲಿತ್ತು ಎಂಬುದನ್ನು ಸ್ವತಃ ಒಪ್ಪಿಕೊಂಡಿದೆ. ಸದಾ ಕಾಲ ಕಿವಿಯಲ್ಲಿ ಕಮಿಷನ್ ಸದ್ದು ಗುಯ್ಗುಡುವಾಗ ಬಡವರ ಕೂಗು ಕೇಳುವುದಾದರೂ ಹೇಗೆ ಬಸವರಾಜ ಬೊಮ್ಮಾಯಿ ಅವರಿಗೆ ಎಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Siddaramaiah Talks Over Teacher Suicide Who Came Bangalore To Protest

ಕೋಮುಗಲಭೆ ನಡೆದು ಕೊಲೆಯಾದರೆ ಗಂಟೆಯೊಳಗೆ ಹೆಣದ ಸುತ್ತ ನೊಣದಂತೆ ಹೋಗಿ ಕೂರುವ ಬಿಜೆಪಿ ಸರ್ಕಾರಕ್ಕೆ, ಸಾವಿರಾರು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೀವಗಳು ಅಮೂಲ್ಯ ಅನ್ನಿಸುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ. ಇನ್ನಷ್ಟು ಜೀವಗಳು ಬಲಿಯಾಗುವ ಮುನ್ನ ಮುಷ್ಕರದಲ್ಲಿ ತೊಡಗಿರುವ ಅನುದಾನಿತ ಶಾಲಾ ಶಿಕ್ಷಕರನ್ನು ಕರೆದು ಬಿಜೆಪಿ ಸರ್ಕಾರ ಮಾತುಕತೆ ನಡೆಸಿ, ಅವರ ಬೇಡಿಕೆಗಳನ್ನು ತಕ್ಷಣ ಈಡೇರಿಸುವ ಕೆಲಸ ಮಾಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಇನ್ನೂ ಪ್ರತಿಭಟನೆಯಲ್ಲಿ ತೊಡಗಿದ್ದ ಬಾಗಲಕೋಟೆ ಮೂಲದ ಶಿಕ್ಷಕ ಸಿದ್ದಯ್ಯ ಹಿರೇಮಠ ಮತ್ತು ರಾಯಚೂರು ಜಿಲ್ಲೆ ಸಿಂಧನೂರು ಮೂಲಕ ಶಂಕರಪ್ಪ ಬೋರಡ್ಡಿ ಅವರು ಈಗಾಗಲೇ ಪ್ರಾಣ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+