ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಜಾಹೀರಾತಲ್ಲಿ ನೆಹರು ಹೆಸರು ಕೈ ಬಿಟ್ಟ ಕರ್ನಾಟಕ ಸರ್ಕಾರ

|
Google Oneindia Kannada News

ಬೆಂಗಳೂರು, ಆಗಸ್ಟ್ 14: ಬಿಜೆಪಿ ನೇತೃತ್ವದ ಕರ್ನಾಟಕ ಸರಕಾರ ಭಾನುವಾರ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಬಹುತೇಕ ಎಲ್ಲಾ ದಿನಪತ್ರಿಕೆಗಳಿಗೆ ಜಾಹೀರಾತು ನೀಡಿದೆ. ಆದರೆ, ಜಾಹೀರಾತಿನಲ್ಲಿ ಸ್ವಾತಂತ್ರ್ಯ ಭಾರತದ ಮೊದಲ ಪ್ರಧಾನಿ, ಸ್ವಾತಂತ್ರ್ಯ ಹೋರಾಟದಲ್ಲಿ ಹಲವು ಭಾರೀ ಜೈಲು ಸೇರಿದ್ದ ಪಂಡಿತ್ ಜವಹರಲಾಲ್‌ ನೆಹರೂ ಅವರ ಪರಿಚಯ ನೀಡದೆ ಇರುವುದಕ್ಕೆ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾಹೀರಾತಿನಲ್ಲಿ ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರಬೋಸ್, ಸರ್ದಾರ್‌ ವಲ್ಲಭಭಾಯಿ ಪಟೇಲ್‌, ಭಗತ್ ಸಿಂಗ್, ಚಂದ್ರಶೇಖರ್‌ ಆಜಾದ್‌, ಲಾಲಾ ಲಜಪತ್ ರಾಯ್‌, ಬಾಲ ಗಂಗಾಧರ್‌ ತಿಲಕ್‌, ಬಿಪಿನ್‌ ಚಂದ್ರ ಪಾಲ್‌, ಡಾ. ಬಿ. ಆರ್‌. ಅಂಬೇಡ್ಕರ್‌, ಲಾಲ್‌ ಬಹದ್ದೂರ್‌ ಶಾಸ್ತ್ರಿ, ಮೌಲಾನ ಅಬ್ದುಲ್‌ ಕಲಾಂ ಆಜಾದ್‌, ಸಂಗೊಳ್ಳಿ ರಾಯಣ್ಣ, ಝಾನ್ಸಿ ರಾಣಿ ಲಕ್ಷ್ಮಿಬಾಯಿ, ಎಚ್. ಎಸ್. ದೊರೆಸ್ವಾಮಿ ಸೇರಿದಂತೆ ಹಲವು ಹೋರಾಟಗಾರರ ಫೋಟೋಗಳ ಜೊತೆಗೆ ಕಿರುಪರಿಚಯವನ್ನು ನೀಡಲಾಗಿದೆ.

ಧ್ವಜದ ಬಗ್ಗೆ ಸಿಎಂ ಲೇಖನ; 13 ಪ್ರಶ್ನೆ ಕೇಳಿದ ಸಿದ್ದರಾಮಯ್ಯಧ್ವಜದ ಬಗ್ಗೆ ಸಿಎಂ ಲೇಖನ; 13 ಪ್ರಶ್ನೆ ಕೇಳಿದ ಸಿದ್ದರಾಮಯ್ಯ

ಇದರ ಜೊತೆಗೆ ಸಾವರ್ಕರ್‌ ಫೋಟೋವನ್ನು ಹಾಕಿ, 'ಕ್ರಾಂತಿಕಾರಿ' ಸಾವರ್ಕರ್‌ ಎಂದು ಪರಿಚಯ ನೀಡಲಾಗಿದೆ. ಇದಕ್ಕೆ ಆರ್‌ಎಸ್ಎಸ್‌ ಸಂಸ್ಥಾಪಕ ಕೆ. ಬಿ. ಹೆಡಗೆವಾರ್ ಅವರ ಪರಿಚಯ ಏಕೆ ಕೈಬಿಟ್ಟಿದ್ದಿರಿ ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ?

ಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ?

"ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ರಾಜ್ಯ ಸರ್ಕಾರದ ಇಂದಿನ ಜಾಹೀರಾತಿನ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಹೆಸರನ್ನು ಕೈಬಿಡುವಷ್ಟು ಕೀಳು ಮಟ್ಟಕ್ಕೆ ನೀವು ಇಳಿಯಬಾರದಿತ್ತು, ಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ?. ಪಂಡಿತ ಜವಾಹರಲಾಲ್ ನೆಹರೂ ಅವರು ಸ್ವಾತಂತ್ರ್ಯಹೋರಾಟದಲ್ಲಿ ಭಾಗಿಯಾಗಿ ತಮ್ಮ ಬದುಕಿನ 9 ವರ್ಷಗಳನ್ನು ಜೈಲಿನಲ್ಲಿ ಕಳೆದವರು ಎನ್ನುವುದು ನೆನಪಿರಲಿ. ಅವರು ನಿಮ್ಮ ವಿ. ಡಿ. ಸಾವರ್ಕರ್ ಅವರಂತೆ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕಾಲು ಹಿಡಿದು ಕ್ಷಮೆ ಕೋರಿದ ಹೇಡಿ ಅಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬದುಕನ್ನು ಜಾತ್ಯತೀತತೆ ಕಾಪಾಡಲು ಮುಡಿಪಾಗಿಟ್ಟಿದ್ದ ನೆಹರೂ

ಬದುಕನ್ನು ಜಾತ್ಯತೀತತೆ ಕಾಪಾಡಲು ಮುಡಿಪಾಗಿಟ್ಟಿದ್ದ ನೆಹರೂ

"ಆರ್ ಎಸ್ ಎಸ್ ಕೋಮುರಾಜಕಾರಣವನ್ನು ವಿರೋಧಿಸಿದ್ದ, ಗಾಂಧಿ ಹತ್ಯೆಯ ನಂತರ ಅದನ್ನು ನಿಷೇಧಿಸಿದ್ದ ಮತ್ತು ತನ್ನ ಬದುಕನ್ನು ಜಾತ್ಯತೀತತೆ ಕಾಪಾಡಲು ಮುಡಿಪಾಗಿಟ್ಟಿದ್ದ ಜವಾಹರಲಾಲ್ ನೆಹರೂ ಅವರ ಬಗ್ಗೆ ಆರ್ ಎಸ್ ಎಸ್ ಅಲರ್ಜಿಯನ್ನು ಅರ್ಥಮಾಡಿಕೊಳ್ಳಬಹುದು, ಆದರೆ ನಿಮಗೇನಾಗಿದೆ ಬೊಮ್ಮಾಯಿ ಅವರೇ?. ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನಮೂದಿಸಲು ನಿಮಗೆ ಸಿಕ್ಕ ಏಕೈಕ ವ್ಯಕ್ತಿ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕ್ಷಮೆ ಯಾಚಿಸಿದ್ದ ಹೇಡಿ ವಿ. ಡಿ. ಸಾವರ್ಕರ್ ಮಾತ್ರ ಎನ್ನುವುದು ನಿಮ್ಮ ಪರಿವಾರದ ಸ್ವಾತಂತ್ರ್ಯ ಹೋರಾಟದ ಸತ್ಯವನ್ನು ಬೆತ್ತಲೆ ಮಾಡಿದೆ" ಎಂದು ಟೀಕಿಸಿದ್ದಾರೆ.

ಅಂಬೇಡ್ಕರ್ ಅವರಿಗೆ ಕೊನೆಯ ಸಾಲಿನ ನಿರ್ಲಕ್ಷ್ಯ!

ಅಂಬೇಡ್ಕರ್ ಅವರಿಗೆ ಕೊನೆಯ ಸಾಲಿನ ನಿರ್ಲಕ್ಷ್ಯ!

"ಸ್ವಾತಂತ್ರ್ಯಹೋರಾಟದಲ್ಲಿ ಭಾಗಿಯಾಗಿ ಎರಡು ಬಾರಿ (1921 ಮತ್ತು 1931) ಜೈಲುಶಿಕ್ಷೆ ಅನುಭವಿಸಿದ್ದ ಆರ್ ಎಸ್ ಎಸ್ ಸಂಸ್ಥಾಪಕ ಕೆ. ಬಿ. ಹೆಡಗೆವಾರ್ ಅವರ ಚಿತ್ರವನ್ನು ಯಾಕೆ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಿಂದ ಕೈಬಿಟ್ಟಿದ್ದೀರಿ ಬೊಮ್ಮಾಯಿಯವರೇ?. ತ್ರಿವರ್ಣ ಧ್ವಜವನ್ನು ತಿರಸ್ಕರಿಸಿದ್ದ ಅವರ ಬಂಡವಾಳ ಬಯಲಾಗಬಹುದೆಂಬ ಭಯವೇ? ಬ್ರಿಟಿಷರ ಕ್ಷಮೆ ಕೇಳಿ ಜೈಲಿನಿಂದ ಬಿಡುಗಡೆಗೊಂಡ ವಿ. ಡಿ. ಸಾವರ್ಕರ್ ಅವರಿಗೆ ಮೊದಲ ಸಾಲಿನ ಗೌರವ, ಸ್ವಾತಂತ್ರ್ಯ ಹೋರಾಟದ ಜೊತೆ ಬಹುಜನ ಸಮಾಜದ ಹಿತಾಸಕ್ತಿಯ ರಕ್ಷಣೆಗಾಗಿಯೂ ಹೋರಾಟ ನಡೆಸಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಕೊನೆಯ ಸಾಲಿನ ನಿರ್ಲಕ್ಷ್ಯ. ಸುಪ್ತ ಅಸ್ಪೃಶ್ಯತೆಯ ನಗ್ನ ಪ್ರದರ್ಶನ" ಎಂದಿದ್ದಾರೆ.

ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ಕಿಡಿ

'ಸನ್ಮಾನ್ಯ ಬೊಮ್ಮಾಯಿಯವರೇ, ಜನರ ತೆರಿಗೆ ಹಣದಿಂದ ನೀಡಿರುವ ಜಾಹೀರಾತಿನಲ್ಲಿ ಧೀಮಂತ ಸ್ವಾತಂತ್ರ್ಯ ಹೋರಾಟಗಾರ ಪಂಡಿತ ಜವಾಹರಲಾಲ್ ನೆಹರೂ ಅವರಿಗೆ ಮಾಡಿರುವ ಅವಮಾನವನ್ನು ಸಹಿಸಲಾಗದು. ಈ ಅವಮಾನಕ್ಕಾಗಿ ಮೊದಲು ರಾಜ್ಯದ ಜನತೆಯ ಕ್ಷಮೆ ಕೇಳಿ" ಎಂದು ಆಗ್ರಹಿಸಿದ್ದಾರೆ.

ಇನ್ನು, ಸ್ವಾತಂತ್ರ್ಯ ಭಾರತದ ಮೊದಲ ಪ್ರಧಾನಿ ನೆಹರೂ ಹೆಸರು ಬಿಟ್ಟು ಸಾವರ್ಕರ್ ಹೆಸರು ಸೇರಿಸಿರುವುದಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

English summary
Leader of opposition Siddaramaiah upset with BJP lead Karnataka government for dropping former PM JawaharLal Nehru's name from the list of freedom fighters in advertisement. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X