Karnataka Budget: ಹೆಚ್ಚು ಹಾಲು ಕೊಡುವ ಹಸುವಿಗೆ ಹೆಚ್ಚಿನ ಆರೈಕೆ ಬೇಕು: ಬಜೆಟ್ ಭಾಷಣವಿಡೀ ಕೇಂದ್ರಕ್ಕೆ ಕುಟುಕಿದ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026ರ ರಾಜ್ಯ ಬಜೆಟ್ ಮಂಡಿಸುವ ಮೂಲಕ ಮತ್ತೊಮ್ಮೆ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಅವರು ಒಟ್ಟು 17 ಬಾರಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಬಜೆಟ್ ಮಂಡನೆ ವೇಳೆ ಸಿದ್ದರಾಮಯ್ಯ ಅವರು ರಾಜ್ಯದ ಅಭಿವೃದ್ಧಿ ಕುರಿತಂತೆ ಹಲವು ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿದಷ್ಟೇ ಅಲ್ಲದೆ, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿಯೂ ನಡೆಸಿದರು. ಕರ್ನಾಟಕಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ನಡುವೆಯೂ ರಾಜ್ಯವು ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಯುತ್ತಿದೆ ಎಂದು ಅವರು ಬೆನ್ನುತಟ್ಟಿಕೊಂಡರು.
ರಾಜ್ಯದ ಆರ್ಥಿಕ ಸಾಮರ್ಥ್ಯದ ಬಗ್ಗೆ ಮಾತನಾಡಿದ ಅವರು, ದೇಶಕ್ಕೆ ಅತಿ ಹೆಚ್ಚು ತೆರಿಗೆ ಸಂಪನ್ಮೂಲ ಒದಗಿಸುವ ಪ್ರಮುಖ ರಾಜ್ಯಗಳಲ್ಲಿ ಕರ್ನಾಟಕವೂ ಒಂದು ಎಂದು ಹೇಳಿದರು. ಹೆಚ್ಚು ಹಾಲು ಕೊಡುವ ಹಸುಗೆ ಹೆಚ್ಚಿನ ಆರೈಕೆ ಅಗತ್ಯವಿರುವಂತೆ, ದೇಶದ ಆರ್ಥಿಕತೆಗೆ ಹೆಚ್ಚಿನ ಕೊಡುಗೆ ನೀಡುವ ಕರ್ನಾಟಕದಂತಹ ರಾಜ್ಯಗಳ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಬೇಕು ಎಂದು ಕೇಂದ್ರಕ್ಕೆ ಕುಟುಕಿದರು.

ದೇಶದ ಅಭಿವೃದ್ಧಿಯ ಸರ್ವಕ್ಷೇತ್ರಗಳಲ್ಲೂ ನಮ್ಮ ರಾಜ್ಯವು ಮುಂಚೂಣಿಯಲ್ಲಿದೆ. ಅತಿ ಹೆಚ್ಚು ತೆರಿಗೆ ಸಂಪನ್ಮೂಲಗಳನ್ನು ಸಂಗ್ರಹಿಸಿ ಕೊಡುವ ಪ್ರಮುಖ ರಾಜ್ಯವಾಗಿದೆ. ಹೆಚ್ಚು ಹಾಲು ಕೊಡುವ ಹಸು/ಎಮ್ಮೆಗಳಿಗೆ ಹೆಚ್ಚಿನ ಆರೈಕೆಯ ಅಗತ್ಯವೂ ಇರುತ್ತದೆ. ಅವು ಬಡವಾದರೆ ಗೋವಳಿಗನೂ ಸಂಕಷ್ಟಕ್ಕೆ ಸಿಲುಕುತ್ತಾನೆ ಎಂಬುದು ಭೀಷ್ಮನ ತತ್ವ. ಇದನ್ನು ಅರಿತು ಒಕ್ಕೂಟ ಸರ್ಕಾರವು ರಾಜ್ಯದ ಬೇಡಿಕೆಗಳ ಬಗ್ಗೆ ಸಂವೇದನಾಶೀಲತೆಯಿಂದ ವರ್ತಿಸಬೇಕೆಂದು ಆಗ್ರಹಿಸುತ್ತೇವೆ. ಭಾರತದಂಥ ವೈವಿಧ್ಯಮಯ ಸಂಸ್ಕೃತಿಗಳ ರಾಷ್ಟ್ರವು ಸಹಕಾರಿ ಒಕ್ಕೂಟ ವ್ಯವಸ್ಥೆಯಿಂದ ಮಾತ್ರವೇ ಅಭಿವೃದ್ಧಿ ಸಾಧಿಸಬಹುದು ಎಂದರು.
ಕರ್ನಾಟಕದ ಅಭಿವೃದ್ಧಿ ದೇಶಕ್ಕೂ ಮಹತ್ವ
ಬಜೆಟ್ ಭಾಷಣದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಾಣಿಜ್ಯ ಕ್ಷೇತ್ರದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಹೇಳಿದರು. ಕೃತಕ ಬುದ್ಧಿಮತ್ತೆ ಸೇರಿದಂತೆ ತಂತ್ರಜ್ಞಾನಗಳ ವೇಗವಾದ ಬೆಳವಣಿಗೆ ಜಾಗತಿಕ ಉತ್ಪಾದನಾ ವಿಧಾನಗಳನ್ನು ಬದಲಾಯಿಸುತ್ತಿದ್ದು, ಈ ಬದಲಾವಣೆಗಳಿಗೆ ತಕ್ಕಂತೆ ರಾಜ್ಯವೂ ಮುನ್ನಡೆಯಬೇಕಾಗಿದೆ. ನಾವು ಬೆಂಕಿಯನ್ನು ಬೆಳಕಾಗಿಸಿಕೊಳ್ಳುವ ಸಂಕಲ್ಪದೊಂದಿಗೆ ಮುನ್ನಡೆಯಬೇಕು ಎಂದರು.
2023ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳು ಜನರಿಗೆ ಆರ್ಥಿಕ ಭದ್ರತೆ ಮತ್ತು ಸಾಮಾಜಿಕ ಸ್ಥಿರತೆ ನೀಡಿವೆ. ಈ ಯೋಜನೆಗಳಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸ್ಥಿತಿ ಸುಧಾರಿಸಿದ್ದು, ಜನರ ಖರೀದಿ ಸಾಮರ್ಥ್ಯ ಹೆಚ್ಚಾಗಿದೆ ಎಂದು ದೇಶ ಮತ್ತು ವಿದೇಶಗಳ ಅಧ್ಯಯನಗಳು ಸೂಚಿಸಿವೆ ಎಂದು ಕರ್ನಾಟಕದ ಸಾಧನೆಯನ್ನು ಕೇಂದ್ರಕ್ಕೆ ಮುಟ್ಟಿಸಿದರು.
ರಾಜ್ಯದ ಅಭಿವೃದ್ಧಿಗೆ ಸರ್ಕಾರ "11ಜಿ ಆರ್ಥಿಕ ಮಾದರಿ" ಎಂಬ ಸಮಗ್ರ ಅಭಿವೃದ್ಧಿ ಪರಿಕಲ್ಪನೆಯನ್ನು ರೂಪಿಸಿದೆ. ಕರ್ನಾಟಕದ 45ಕ್ಕೂ ಹೆಚ್ಚು ಉತ್ಪನ್ನಗಳಿಗೆ ಜಿಯೋಗ್ರಾಫಿಕಲ್ ಇಂಡಿಕೇಷನ್ (GI) ಮಾನ್ಯತೆ ದೊರೆತಿದ್ದು, ಇದು ರಾಜ್ಯದ ಪಾರಂಪರಿಕ ಕೌಶಲ್ಯಕ್ಕೆ ಸಾಕ್ಷಿಯಾಗಿದೆ. ಈ ಉತ್ಪನ್ನಗಳು ಹೊಸ ಉದ್ಯೋಗ ಸೃಷ್ಟಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ. ಕೇಂದ್ರ ಸರ್ಕಾರವು ಒಕ್ಕೂಟ ತತ್ವದ ಸಾಂವಿಧಾನಿಕ ನಿಯಮಗಳನ್ನು ಪಾಲಿಸದೇ ರಾಜ್ಯಕ್ಕೆ ನಿರಂತರ ಅನ್ಯಾಯ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಕೇಂದ್ರದ ಪಾಲಿನ ಕಡಿತ, ಯೋಜನೆಗಳಲ್ಲಿ ತಾರತಮ್ಯ, ತೆರಿಗೆ ಹಂಚಿಕೆಯಲ್ಲಿ ಕಡಿತ ಸೇರಿದಂತೆ ಹಲವು ಕಾರಣಗಳಿಂದ ರಾಜ್ಯಕ್ಕೆ ಆರ್ಥಿಕ ನಷ್ಟ ಉಂಟಾಗಿದೆ ಎಂದು ದೂರಿದರು.
ಹಣಕಾಸು ಆಯೋಗದಿಂದ ತೆರಿಗೆ ಪಾಲು ಕಡಿತ
14ನೇ ಹಣಕಾಸು ಆಯೋಗದ ಅವಧಿಯಲ್ಲಿ ಕರ್ನಾಟಕದ ತೆರಿಗೆ ಪಾಲು ಶೇ.4.713 ಇತ್ತಾದರೆ, 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಅದು ಶೇ.3.647ಕ್ಕೆ ಇಳಿದಿದೆ. ಇದು ಸುಮಾರು 23 ಶೇಕಡಾ ಕಡಿತವಾಗಿದ್ದು, ಆರು ವರ್ಷಗಳಲ್ಲಿ ರಾಜ್ಯಕ್ಕೆ ಸುಮಾರು 65,000 ಕೋಟಿ ರೂ.ಗಳ ನಷ್ಟ ಉಂಟಾಗಿದೆ. 15ನೇ ಹಣಕಾಸು ಆಯೋಗ ಶಿಫಾರಸು ಮಾಡಿದ 5,495 ಕೋಟಿ ರೂ. ವಿಶೇಷ ಅನುದಾನ ಹಾಗೂ 6,000 ಕೋಟಿ ರೂ. ರಾಜ್ಯಕೇಂದ್ರಿತ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.
ಉದ್ಯೋಗ ಖಾತ್ರಿ ಯೋಜನೆ ದುರ್ಬಲ
ಕೇಂದ್ರ ಸರ್ಕಾರವು ಮನರೇಗಾ ಯೋಜನೆಯನ್ನು ಕ್ರಮೇಣ ದುರ್ಬಲಗೊಳಿಸುತ್ತಿದೆ. ಇದರಿಂದ ಗ್ರಾಮೀಣ ಉದ್ಯೋಗದ ಹಕ್ಕುಗಳಿಗೆ ಧಕ್ಕೆಯಾಗುವ ಸಾಧ್ಯತೆಯಿದೆ ಎಂದು ಅವರು ಎಚ್ಚರಿಸಿದರು. 2025-26ನೇ ಸಾಲಿನಲ್ಲಿ ಕರ್ನಾಟಕದ ಜಿಎಸ್‌ಡಿಪಿ (GSDP) ಶೇ.8.1ರಷ್ಟು ನೈಜ ಬೆಳವಣಿಗೆ ದಾಖಲಿಸಿದ್ದು, ಇದು ದೇಶದ ಜಿಡಿಪಿ ಬೆಳವಣಿಗೆ ಪ್ರಮಾಣವಾದ ಶೇ.7.4ಕ್ಕಿಂತ ಹೆಚ್ಚು. ಕೇಂದ್ರ ಸರ್ಕಾರದ ಅಸಹಕಾರದ ನಡುವೆಯೂ ರಾಜ್ಯದಲ್ಲಿ ಆರ್ಥಿಕ ಬೆಳವಣಿಗೆ ಮತ್ತು ವಿತ್ತೀಯ ಶಿಸ್ತನ್ನು ಕಾಪಾಡಲು ಸರ್ಕಾರ ಯಶಸ್ವಿಯಾಗಿದೆ. ಈ ಬಜೆಟ್ ರಾಜ್ಯದ ಉಜ್ವಲ ಭವಿಷ್ಯ ನಿರ್ಮಾಣದ ದಿಕ್ಕಿನಲ್ಲಿ ರೂಪಿತವಾಗಿದ್ದು, ನಾಡಿನ ಅಭಿವೃದ್ಧಿಗೆ ಪಕ್ಷಾತೀತವಾಗಿ ಎಲ್ಲರೂ ಕೈಜೋಡಿಸಬೇಕೆಂದು ಕರೆ ನೀಡಿದರು.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications