ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ?, ಸೋನಿಯಾಗೆ ಪತ್ರ!
Recommended Video

ಬೆಂಗಳೂರು, ಸೆಪ್ಟೆಂಬರ್ 19 : ಯಡಿಯೂರಪ್ಪ ಕ್ಷೇತ್ರ ಬದಲಾವಣೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಸದ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೋಲಾರದಿಂದ ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆಸಬೇಕು ಎಂದು ಸೋನಿಯಾ ಗಾಂಧಿಗೆ ಪತ್ರ ಬರೆಯಲಾಗಿದೆ.
ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಈ ಕುರಿತು ಪತ್ರ ಬರೆದಿದ್ದಾರೆ. ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರು ಚುನಾವಣೆಗೆ ಸ್ಪರ್ಧಿಸಬಹುದು. ಈ ಮನವಿಯನ್ನು ಪರಿಗಣಿಸಿ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಬಯಲು ಸೀಮೆಯ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಭಾಗಗಳನ್ನು ಅಭಿವೃದ್ಧಿ ಪಡಿಸಬೇಕು, ಪಕ್ಷವನ್ನು ಬಲವಾಗಿ ಸಂಘಟಿಸಬೇಕು. ಆದ್ದರಿಂದ, ಕೋಲಾರದಿಂದ ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಗೆ ನಿಲ್ಲುವಂತೆ ಮಾಡಿರುವ ಮನವಿ ಪರಿಗಣಿಸಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ.
ಈಗಾಗಲೇ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಉತ್ತರ ಕರ್ನಾಟಕದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಹಲವು ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಅವರಿಗೆ ಬಾಗಲಕೋಟೆಯಿಂದ ಸ್ಪರ್ಧಿಸುವಂತೆ ಆಹ್ವಾನವನ್ನು ನೀಡುತ್ತಿದ್ದಾರೆ.

ಈ ಚರ್ಚೆಗಳ ನಡುವೆಯೇ ವಿ.ಆರ್.ಸುದರ್ಶನ್ ಬರೆದ ಪತ್ರ ಹೊಸ ಚರ್ಚೆ ಹುಟ್ಟು ಹಾಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇದುವರೆಗೂ ಈ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.












Click it and Unblock the Notifications