ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಸಿದ್ದರಾಮಯ್ಯ?

|
Google Oneindia Kannada News

ಬೆಂಗಳೂರು, ನ. 22: ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಅವರ ಕ್ಷೇತ್ರ ಆಯ್ಕೆಯ ಬಗ್ಗೆ ಹಲವರಲ್ಲಿ ಕುತೂಹಲ ಉಂಟಾಗಿದೆ. ಸಿದ್ದರಾಮಯ್ಯ ಕೂಡ ಈ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ಆದರೆ, ಇನ್ನೊಂದು ಮಾಹಿತಿ ಪ್ರಕಾರ ತಮ್ಮ ಮೂಲ ಕ್ಷೇತ್ರಕ್ಕೆ ಮರಳುವ ಇಂಗಿತವನ್ನೂ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಕಳೆದ ಬಾರಿಯ ಚುನಾವಣೆಯಲ್ಲಿ ಸಿದ್ದರಾಮಯ್ಯ ಬಾದಾಮಿ ಹಾಗೂ ಚಾಮುಂಡೇಶ್ವರಿ ಎರಡು ಕ್ಷೇತ್ರದಿಂದ ಸ್ಫರ್ಧಿಸಿ ಗಮನ ಸೆಳೆದಿದ್ದರು. ಚಾಮುಂಡೇಶ್ವರಿ ಕ್ಷೇತ್ರದ ಜನ ಕೈ ಬಿಟ್ಟರೆ ಬಾದಾಮಿ ಜನ ಕೈ ಹಿಡಿದಿದ್ದರು. ಆದರೆ, ಈ ಬಾರಿ ಎರಡು ಕ್ಷೇತ್ರದ ಬದಲು ಒಂದೆ ಕ್ಷೇತ್ರದಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅದಕ್ಕಾಗಿ ಈಗಾಗಲೇ ಮೂರು ಕ್ಷೇತ್ರಗಳನ್ನು ಗುರುತಿಸಿದ್ದಾರೆ.

ಬೆಳಗಾವಿ ಗಡಿ ವಿವಾದದ ಕುರಿತು ನ.23ಕ್ಕೆ ಸುಪ್ರಿಂನಲ್ಲಿ ವಿಚಾರಣೆ: ಸರ್ವಪಕ್ಷ ಸಭೆ ಕರೆಯಲು ಸಿದ್ದರಾಮಯ್ಯ ಆಗ್ರಹ ಬೆಳಗಾವಿ ಗಡಿ ವಿವಾದದ ಕುರಿತು ನ.23ಕ್ಕೆ ಸುಪ್ರಿಂನಲ್ಲಿ ವಿಚಾರಣೆ: ಸರ್ವಪಕ್ಷ ಸಭೆ ಕರೆಯಲು ಸಿದ್ದರಾಮಯ್ಯ ಆಗ್ರಹ

ಕುತೂಹಲ ಕೆರಳಿಸಿದ ಸಿದ್ದರಾಮಯ್ಯ ಸ್ಪರ್ಧಿಸುವ ಕ್ಷೇತ್ರದ ವಿಚಾರ

ಕುತೂಹಲ ಕೆರಳಿಸಿದ ಸಿದ್ದರಾಮಯ್ಯ ಸ್ಪರ್ಧಿಸುವ ಕ್ಷೇತ್ರದ ವಿಚಾರ

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಟಿಕೆಟ್ ಬೇಕಾದರೆ 2 ಲಕ್ಷ ಬಾಂಡ್ ಜೊತೆಗೆ ತಮ್ಮ ಸ್ವವಿವರ ಸಲ್ಲಿಸಬೇಕು. ಈಗಾಗಲೇ ಸಾವಿರಕ್ಕೂ ಹೆಚ್ಚು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ವಿಶೇಷವೆಂದರೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಅರ್ಜಿ ಸಲ್ಲಿಸಿದ್ದರೂ ಯಾವ ಕ್ಷೇತ್ರ ಎಂಬುದನ್ನು ನಮೂದಿಸಿಲ್ಲ. ಹಾಗಾಗಿ ಅವರು ಈ ಬಾರಿ ಯಾವ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಕುತೂಹಲ ಹಾಗೆಯೇ ಉಳಿದುಕೊಂಡಿದೆ.

ಕ್ಷೇತ್ರದ ವಿವರ ಭರ್ತಿ ಮಾಡಬೇಕಾದ ಜಾಗದಲ್ಲಿ 'ಹೈಕಮಾಂಡ್‌ ತೀರ್ಮಾನದಂತೆ'' ಎಂದು ಉಲ್ಲೇಖಿಸಿದ್ದಾರೆ. ಈ ಮೂಲಕ ಕ್ಷೇತ್ರ ಆಯ್ಕೆ ವಿಚಾರದಲ್ಲಿ ಅವರು ಇನ್ನೂ ತೀರ್ಮಾನಕ್ಕೆ ಬಂದಿಲ್ಲ ಎನ್ನುವುದು ಸ್ಪಷ್ಟವಾದಂತಾಗಿದೆ. ಅರ್ಜಿ ಸಲ್ಲಿಕೆಗೆ ನವೆಂಬರ್ 21ರ ಸೋಮವಾರ ಅಂತಿಮ ದಿನವಾಗಿತ್ತು.

ಕಳೆದ ಬಾರಿಯ ಚುನಾವಣೆಯಲ್ಲಿ ಸಿದ್ದರಾಮಯ್ಯ ಬಾದಾಮಿ ಹಾಗೂ ಚಾಮುಂಡೇಶ್ವರಿ ಎರಡು ಕ್ಷೇತ್ರದಿಂದ ಸ್ಫರ್ಧಿಸಿ ಗಮನ ಸೆಳೆದಿದ್ದರು. ಚಾಮುಂಡೇಶ್ವರಿ ಕ್ಷೇತ್ರದ ಜನ ಕೈ ಬಿಟ್ಟರೆ ಬಾದಾಮಿ ಜನ ಕೈ ಹಿಡಿದಿದ್ದರು. ಆದರೆ, ಈ ಬಾರಿ ಎರಡು ಕ್ಷೇತ್ರದ ಬದಲು ಒಂದೆ ಕ್ಷೇತ್ರದಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅದಕ್ಕಾಗಿ ಈಗಾಗಲೇ ಮೂರು ಕ್ಷೇತ್ರಗಳನ್ನು ಗುರುತಿಸಿದ್ದಾರೆ.

ಸಿದ್ದರಾಮಯ್ಯಗೆ ಮೂಲ ಕ್ಷೇತ್ರ ವರುಣದಿಂದಲೇ ಸ್ಪರ್ಧಿಸುವ ಇಚ್ಚೆ!?

ಸಿದ್ದರಾಮಯ್ಯಗೆ ಮೂಲ ಕ್ಷೇತ್ರ ವರುಣದಿಂದಲೇ ಸ್ಪರ್ಧಿಸುವ ಇಚ್ಚೆ!?

ಕಾಂಗ್ರೆಸ್ ಪಕ್ಷ ಯಾವ ಕ್ಷೇತ್ರದಿಂದ ಯಾರು ಗೆಲ್ಲಬಹುದು ಹಾಗೂ ಯಾರಿಗೆ ಟಿಕೆಟ್ ಕೊಡಬಹುದು ಎಂಬ ಸಮೀಕ್ಷೆ ನಡೆಸಿದೆ. ಇದರಲ್ಲಿ ಕೋಲಾರ ಹಾಗೂ ಬಾದಾಮಿ ಕ್ಷೇತ್ರ ಸಿದ್ದರಾಮಯ್ಯ ಅವರಿಗೆ ಸುರಕ್ಷಿತವಲ್ಲ ಎಂಬ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಮೂಲ ಕ್ಷೇತ್ರ ವರುಣದಿಂದಲೇ ಸ್ಪರ್ಧಿಸುವ ಇಚ್ಚೆ ಹೊಂದಿದ್ದಾರೆ ಎನ್ನಲಾಗುತ್ತಿದೆ.

ಸಿದ್ದರಾಮಯ್ಯ ಅವರ ಆಪ್ತ ವಲಯ ಕೂಡ ವರುಣದಿಂದಲೇ ಸ್ಪರ್ಧಿಸಿದರೆ ಉತ್ತಮ ಎಂಬ ಸಲಹೆ ನೀಡಿದ್ದಾರೆ. ವರುಣವನ್ನು ಪ್ರತಿನಿಧಿಸುವ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ಮುಂದಿನ ಲೋಕಸಭೆಗೆ ನಿಲ್ಲಿಸುವ ಚಿಂತನೆಯನ್ನು ಸಿದ್ದರಾಮಯ್ಯ ಮಾಡಿದ್ದಾರೆ ಎನ್ನಲಾಗಿದೆ.

ಕ್ಷೇತ್ರದ ವಿವರ ಭರ್ತಿ ಮಾಡಬೇಕಾದ ಜಾಗದಲ್ಲಿ 'ಹೈಕಮಾಂಡ್‌ ತೀರ್ಮಾನದಂತೆ'' ಎಂದು ಉಲ್ಲೇಖಿಸಿದ್ದಾರೆ. ಈ ಮೂಲಕ ಕ್ಷೇತ್ರ ಆಯ್ಕೆ ವಿಚಾರದಲ್ಲಿ ಅವರು ಇನ್ನೂ ತೀರ್ಮಾನಕ್ಕೆ ಬಂದಿಲ್ಲ ಎನ್ನುವುದು ಸ್ಪಷ್ಟವಾದಂತಾಗಿದೆ. ಅರ್ಜಿ ಸಲ್ಲಿಕೆಗೆ ನವೆಂಬರ್ 21ರ ಸೋಮವಾರ ಅಂತಿಮ ದಿನವಾಗಿತ್ತು.

ಬಾದಾಮಿಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದಿರುವ ಸಿದ್ದರಾಮಯ್ಯ

ಬಾದಾಮಿಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದಿರುವ ಸಿದ್ದರಾಮಯ್ಯ

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಮ್ಮ ಆಪ್ತರೆ ತಮ್ಮ ವಿರುದ್ಧ ಚುನಾವಣೆಯಲ್ಲಿ ಕೆಲಸ ಮಾಡಿದ ಪರಿಣಾಮ ಕಳೆದ ಬಾರಿ ಸಿದ್ದರಾಮಯ್ಯ ಸೋಲುವಂತಾಯಿತು. ಹಾಗಾಗಿ ಮತ್ತೆ ಚಾಮುಂಡೇಶ್ವರಿಯಲ್ಲಿ ಸ್ಪರ್ಧಿಸುವ ಮನಸ್ಸು ಸಿದ್ದರಾಮಯ್ಯ ಅವರಿಗೆ ಇಲ್ಲವಾಗಿದೆ. ಬಾದಾಮಿಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಈಗಾಗಲೇ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ, ಕೋಲಾರ ಹಾಗೂ ವರುಣ ಕ್ಷೇತ್ರ ಮೇಲೆ ಅವರಿಗೆ ಒಲವು ಇದೆ. ಆದರೂ ಕೋಲಾರಕ್ಕಿಂತ ವರುಣದಲ್ಲೇ ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆ ಎನ್ನುತ್ತದೆ ಬಲ್ಲ ಮೂಲಗಳು.

ರಾಯಚೂರು ನಗರದಲ್ಲಿ ಸ್ಪರ್ಧಿಸುವಂತೆ ಕಾರ್ಯಕರ್ತರ ಒತ್ತಾಸೆ

ರಾಯಚೂರು ನಗರದಲ್ಲಿ ಸ್ಪರ್ಧಿಸುವಂತೆ ಕಾರ್ಯಕರ್ತರ ಒತ್ತಾಸೆ

"ಸಿದ್ದರಾಮಯ್ಯ ಅವರು ಯಾವ ಕ್ಷೇತ್ರದಿಂದ‌ ಸ್ಪರ್ಧಿಸುತ್ತಾರೆ ಎಂಬುದು ನಿರ್ಧಾರವಾಗಿಲ್ಲ. ಪಕ್ಷದ ಹೈಕಮಾಂಡ್ ಅದನ್ನು ನಿರ್ಧಾರ ಮಾಡುತ್ತದೆ.‌ ಒಂದು ವೇಳೆ ವರುಣ ಕ್ಷೇತ್ರ ಕೇಳಿದರೆ ತಂದೆಗಾಗಿ ಬಿಟ್ಟುಕೊಡಲು ಸಿದ್ಧನಿದ್ದೇನೆ. ವರುಣಾದಿಂದಲೇ ಸ್ಪರ್ಧಿಸುವಂತೆ ಆಹ್ವಾನ ನೀಡಿದ್ದೇನೆ. ತಂದೆಯ ಮಾರ್ಗದರ್ಶನದಲ್ಲಿ ಕ್ಷೇತ್ರದಲ್ಲಿ ಜನರ ಪರ ಕೆಲಸ ಮುಂದುವರಿಸುತ್ತೇನೆ'' ಎಂದು ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇತ್ತ, ರಾಯಚೂರು ನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಏಕೆ ಸ್ಪರ್ಧಿಸಬಾರದು ಎಂಬ ಅಭಿಪ್ರಾಯ ಬರುತ್ತಿವೆ. ಅಲ್ಪಸಂಖ್ಯಾತ, ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗದ ಮತಾದರರೇ ಪ್ರಬಲವಾಗಿರುವ ಈ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸಿದರೇ, ಭಾರೀ ಅಂತರದಿಂದ ಗೆಲ್ಲಬಹುದು ಎನ್ನುವ ಲೆಕ್ಕಚಾರ ಕಾಂಗ್ರೆಸ್ ಪಕ್ಷದಲ್ಲಿ ಕೇಳಿ ಬರುತ್ತಿದೆ.

English summary
Karnataka Assembly elections 2023: Siddaramaiah to contest from Varuna Assembly constituency..?. Siddaramaiah did not talk about constituency selection. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X