• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಶಾಸಕರಿಗೆ, ಸಂಸದರಿಗೆ ಭೋಜನಕೂಟ ಆಯೋಜಿಸಿದ ಸಿದ್ದರಾಮಯ್ಯ!

|
Google Oneindia Kannada News

ಬೆಂಗಳೂರು, ಮಾರ್ಚ್ 23: ರಮೇಶ್ ಜಾರಕಿಹೊಳಿ ಸಿಡಿ ವಿಚಾರದಲ್ಲಿ ಕಾಂಗ್ರೆಸ್ ಸದಸ್ಯರು ಬಿಗಿಪಟ್ಟನ್ನು ಮುಂದುವರೆಸಿದ್ದಾರೆ. ವಿಧಾನಸಭೆಯಲ್ಲಿ ಹೋರಾಟವನ್ನು ತೀವ್ರಗೊಳಿಸುವ ಬಗ್ಗೆ ಚರ್ಚಿಸಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಶಾಸಕರು, ಸಂಸದರಿಗೆ ಭೋಜನಕೂಟವನ್ನು ಆಯೋಜಿಸಿದ್ದಾರೆ.

ಬುಧವಾರ ಮಧ್ಯಾಹ್ನ ವಿಧಾನಸೌಧದಲ್ಲಿ ಭೋಜನ ಕೂಟವನ್ನು ಆಯೋಜನೆ ಮಾಡಲಾಗಿದೆ. ಎಲ್ಲಾ ಶಾಸಕರು, ಸಂಸದರಿಗೆ ಭೋಜನಕೂಟಕ್ಕೆ ಆಹ್ವಾನ ನೀಡಲಾಗಿದೆ. ವಿಧಾನಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಲು ಭೋಜನ ಕೂಟ ಕರೆಯಲಾಗಿದೆ.

ಸಿಡಿ ಗದ್ದಲಕ್ಕೆ ಮಂಗಳವಾರದ ವಿಧಾನಸಭೆ ಕಲಾಪ ಬಲಿ ಸಿಡಿ ಗದ್ದಲಕ್ಕೆ ಮಂಗಳವಾರದ ವಿಧಾನಸಭೆ ಕಲಾಪ ಬಲಿ

   ಇಂದು ಕೂಡ ಸದನದಲ್ಲಿ ಸಿಡಿ ವಿಚಾರ ಚರ್ಚೆ ಆರಂಭಿಸಿದ ಕಾಂಗ್ರೆಸ್ | Oneindia Kannada

   ರಮೇಶ್ ಜಾರಕಿಹೊಳಿ ಸಿಡಿ ವಿಚಾರದಲ್ಲಿ ಕಾಂಗ್ರೆಸ್ ಸದಸ್ಯರು ಹೋರಾಟವನ್ನು ನಡೆಸುತ್ತಿದ್ದಾರೆ. ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರರಕರಣ ದಾಖಲು ಮಾಡಬೇಕು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಉಸ್ತುವಾರಿಯಲ್ಲಿ ಸ್ವತಂತ್ರ ತನಿಖೆ ನಡೆಸಬೇಕು. ಕೋರ್ಟ್ ಮೊರೆ ಹೋಗಿರುವ 6 ಸಚಿವರು ರಾಜೀನಾಮೆ ನೀಡಬೇಕು ಎಂಬುದು ಕಾಂಗ್ರೆಸ್ ಬೇಡಿಕೆಯಾಗಿದೆ.

   ವಿಧಾನಸಭೆ ಕಲಾಪ; ಪಟ್ಟು ಬಿಡದ ಕಾಂಗ್ರೆಸ್‌, ಜೆಡಿಎಸ್‌ನಿಂದ ಸಭಾತ್ಯಾಗ ವಿಧಾನಸಭೆ ಕಲಾಪ; ಪಟ್ಟು ಬಿಡದ ಕಾಂಗ್ರೆಸ್‌, ಜೆಡಿಎಸ್‌ನಿಂದ ಸಭಾತ್ಯಾಗ

   ಕಾಂಗ್ರೆಸ್ ಸದಸ್ಯರ ಪ್ರತಿಭಟನೆ, ಗದ್ದಲದ ಹಿನ್ನಲೆಯಲ್ಲಿ ಸ್ಪೀಕರ್ ಮಂಗಳವಾರ ಕಲಾಪವನ್ನು ಎರಡು ಬಾರಿ ಮುಂದೂಡಿದರು. ಆದರೆ, ಮತ್ತೆ ಸದಸನ ಸಮಾವೇಶಗೊಂಡರೂ ಕಾಂಗ್ರೆಸ್ ಸದಸ್ಯರು ಹೋರಾಟವನ್ನು ಮುಂದುವರೆಸಿದರು. ಇದರಿಂದಾಗಿ ಬುಧವಾರ ಬೆಳಗ್ಗೆ 11 ಗಂಟೆಗೆ ಕಲಾಪವನ್ನು ಮುಂದೂಡಲಾಯಿತು.

   ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್‌ನಿಂದ ಇಡಿಗೆ ದೂರು? ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್‌ನಿಂದ ಇಡಿಗೆ ದೂರು?

   ಈ ಬಾರಿ ಬಜೆಟ್ ಅಧಿವೇಶನ ನಿಗದಿಯಂತೆ ಮಾರ್ಚ್ 31ರ ತನಕ ನಡೆಯಬೇಕು. ಆದರೆ, ಕಾಂಗ್ರೆಸ್ ಸದಸ್ಯರ ಗದ್ದಲದ ಹಿನ್ನಲೆಯಲ್ಲಿ ಸರ್ಕಾರ ಅಧಿವೇಶನ ಮೊಟಕುಗೊಳಿಸುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಕರೆದಿರುವ ಭೋಜನಕೂಟದಲ್ಲಿ ಅಧಿವೇಶನ ಮೊಟಕುಗೊಂಡರೆ ಮುಂದಿನ ಕಾರ್ಯತಂತ್ರದ ಬಗ್ಗೆಯೂ ಚರ್ಚಿಸಲಾಗುತ್ತದೆ.

   English summary
   Opposition leader of Karnataka Siddaramaiah organized lunch for party MLA's and MP's on March 24, 2021. Congress demanding for FIR against Ramesh Jarkiholi and protesting in assembly session.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X