KRS Dam: ಭರ್ಜರಿ ಮಳೆಯಿಂದ ಕೆಆರ್‌ಎಸ್‌ ಜಲಾಶಯ ಭರ್ತಿ: ಕಾವೇರಿ ನದಿಗೆ ಸಿದ್ದರಾಮಯ್ಯ ಬಾಗಿನ ಸಮರ್ಪಣೆ ಯಾವಾಗ?

ಮಂಡ್ಯ, ಜುಲೈ 27: ರಾಜ್ಯದಲ್ಲಿ ಭರ್ಜರಿ ಮಳೆಯಿಂದಾಗಿ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೆಆರ್ ಎಸ್ ಅಣೆಕಟ್ಟು ಗರಿಷ್ಠ ಸಾಮರ್ಥ್ಯಕ್ಕೆ ಭರ್ತಿಯಾಗಿರುವುದರಿಂದ ಈ ಭಾಗದ ಜೀವನಾಡಿ ನದಿಗೆ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸುವುದು ವಾಡಿಕೆ. ಹೀಗಾಗಿ ಜುಲೈ 29 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗ್ಗೆ 11 ಗಂಟೆಗೆ ಬಾಗಿನವನ್ನ ಸಮರ್ಪಣೆ ಮಾಡಲಿದ್ದಾರೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟಿನಲ್ಲಿ ಕಾವೇರಿ ನದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 29 ರಂದು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಾಗಿನ ಸಮರ್ಪಣೆ ಮಾಡಲಿದ್ದಾರೆ. ಸಿಎಂ ಗೆ ಬೆಂಗಳೂರು ನಗರಾಭಿವೃದ್ಧಿ ಹಾಗೂ ಜಲ ಸಂಪನ್ಮೂಲ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದ ಹೆಚ್ ಡಿ ಕುಮಾರಸ್ವಾಮಿ, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ, ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಪಶುಸಂಗೋಪನೆ ಮತ್ತು ರೇಷ್ಮೆ ಹಾಗೂ ಜಿಲ್ಲಾಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್ ಅವರ್‌ ಸಾಥ್‌ ನೀಡಲಿದ್ದಾರೆ.

Siddaramaiah To Offer Bagina At Krishnaraja Sagar Dam On July 29

ಇನ್ನೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಬೋಸರಾಜು, ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮೈಸೂರು ಜಂಗಲ್ ಲಾಡ್ಜ್ ಅಧ್ಯಕ್ಷರಾದ ಸಿ.ಅನಿಲ್ ಕುಮಾರ್ ರವರು ಘನ ಉಪಸ್ಥಿತಿ ವಹಿಸಲಿದ್ದಾರೆ. ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಎ.ಬಿ ರಮೇಶ್ ಬಂಡಿಸಿದ್ದೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.

ವಿಶ್ವದರ್ಜೆಯ ಕಾವೇರಿ ಬೃಂದಾವನ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ

ರಾಜ್ಯದ ಪ್ರಖ್ಯಾತ ಜಲಾಶಯವಾದ ಕೃಷ್ಣರಾಜಸಾಗರದಲ್ಲಿ (ಕೆ ಆರ್ ಎಸ್) ಪಿಪಿಪಿ ಮಾದರಿಯಲ್ಲಿ ವಿಶ್ವ ದರ್ಜೆಯ ಕಾವೇರಿ ಬೃಂದಾವನವನ್ನು ರೂಪಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇದಕ್ಕೆ ಅನುಮೋದನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಚೆಲುವರಾಯಸ್ವಾಮಿ ಅವರಿಗೆ ಕಾವೇರಿಕೊಳ್ಳದ ಹಾಗೂ ಜಿಲ್ಲೆಯ ಜನರ ಪರವಾಗಿ ಅಭಿನಂದನೆಯನ್ನು ಸಲ್ಲಿಸ ಬಯಸುತ್ತೇನೆ ಎಂದು ಶಾಸಕರಾದ ದಿನೇಶ್ ಗೂಳಿಗೌಡ ಅವರು ಹೇಳಿದ್ದಾರೆ.

ದೇಶದ ಏಳು ಪ್ರಮುಖ ನದಿಗಳಲ್ಲಿ ಕಾವೇರಿ ಸಹ ಒಂದು. ಕಾವೇರಿಗೆ ಪೂಜ್ಯನೀಯ ಸ್ಥಾನವಿದೆ. ಇಂತಹ ಒಂದು ಪವಿತ್ರ ನದಿಯಾಗಿರುವ ಕಾವೇರಿ ಹೆಸರಿನಲ್ಲಿ ವಿಶ್ವ ದರ್ಜೆಯ ಬೃಂದಾವನವನ್ನು ನಿರ್ಮಾಣ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಸಂಗತಿಯಾಗಿದೆ ಎಂದು ಶಾಸಕರಾದ ದಿನೇಶ್ ಗೂಳಿಗೌಡ ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರವಾಸೋದ್ಯಮಕ್ಕೆ ಉತ್ತೇಜನ, ಉದ್ಯೋಗ ಸೃಷ್ಟಿ

ವಿಶ್ವ ದರ್ಜೆಯ ಬೃಂದಾವನವನ್ನು ನಿರ್ಮಾಣ ಮಾಡುವುದರೊಂದಿಗ ಪ್ರವಾಸೋದ್ಯಮದ ಉತ್ತೇಜನದತ್ತ ಹೆಜ್ಜೆಯನ್ನಿಟ್ಟಂತಾಗುತ್ತದೆ. ಅಲ್ಲದೆ ಸ್ಥಳೀಯವಾಗಿ ಸಾಕಷ್ಟು ಪ್ರತ್ಯಕ್ಷ ಹಾಗೂ ಪರೋಕ್ಷ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತವೆ. ಹೀಗಾಗಿ ಜಿಲ್ಲೆಯ ಜನರ ಮಟ್ಟಿಗೆ ಇದೊಂದು ಉತ್ತಮವಾದ ನಡೆಯೆಂದು ಶಾಸಕ ದಿನೇಶ್ ಗೂಳಿಗೌಡ ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+