KRS Dam: ಭರ್ಜರಿ ಮಳೆಯಿಂದ ಕೆಆರ್‌ಎಸ್ ಜಲಾಶಯ ಭರ್ತಿ: ಸಿದ್ದರಾಮಯ್ಯ ಬಾಗಿನ ಸಮರ್ಪಣೆ ಯಾವಾಗ?
ಬೆಂಗಳೂರು, ಜೂನ್ 28: ಕಳೆದ ವರ್ಷಕ್ಕಿಂತ ಈ ವರ್ಷ ಮುಂಗಾರು ಆರಂಭಕ್ಕೂ ಮೊದಲೇ ರಾಜ್ಯದಲ್ಲಿ ಭರ್ಜರಿ ಮಳೆಯಿಂದಾಗಿ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೆಆರ್ ಎಸ್ ಅಣೆಕಟ್ಟು ಗರಿಷ್ಠ ಸಾಮರ್ಥ್ಯಕ್ಕೆ ಭರ್ತಿಯಾಗಿರುವುದರಿಂದ ಈ ಭಾಗದ ಜೀವನಾಡಿ ನದಿಗೆ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸುವುದು ವಾಡಿಕೆ. ಹೀಗಾಗಿ ಜೂನ್ 30 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನವನ್ನ ಸಮರ್ಪಣೆ ಮಾಡಲಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟಿನಲ್ಲಿ ಕಾವೇರಿ ನದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 30(ಸೋಮವಾರದಂದು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಾಗಿನ ಸಮರ್ಪಣೆ ಮಾಡಲಿದ್ದಾರೆ. ಸಿಎಂ ಗೆ ಬೆಂಗಳೂರು ನಗರಾಭಿವೃದ್ಧಿ ಹಾಗೂ ಜಲ ಸಂಪನ್ಮೂಲ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದ ಹೆಚ್ ಡಿ ಕುಮಾರಸ್ವಾಮಿ, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಸೇರಿದಂತೆ ಹಲವು ನಾಯಕರು ಸಾಥ್ ಕೊಡಲಿದ್ದಾರೆ.

ಈ ಕುರಿತು ಸಚಿವ ಎನ್.ಚಲುವರಾಯಸ್ವಾಮಿ ಅವರು ಮಾತನಾಡಿ, ಕೆಆರ್ ಎಸ್ (ಕೃಷ್ಣರಾಜ ಸಾಗರ) ಡ್ಯಾಂ ಭರ್ತಿಯಾಗಿದ್ದು, ಜೂನ್ 30 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಬಾಗಿನ ಅರ್ಪಿಸಲಿದ್ದಾರೆ ಎಂದು ಹೇಳಿದ್ದಾರೆ. ಕಾವೇರಿ ಅಚ್ಚುಕಟ್ಟಿನಲ್ಲಿ ತುಂಬಿ ತುಳುಕುತಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸೋಮವಾರ KRS ಡ್ಯಾಂ ಗೆ ಭಾಗಿನ ಅರ್ಪಿಸಲಿದ್ದಾರೆ ಎಂದರು.
ಸ್ವತಂತ್ರ ಪೂರ್ವ ಕೆಂಪೇಗೌಡರು ಬೆಂಗಳೂರು ಕಟ್ಟಿದ್ದಾರೆ. ಮುಂದಿನ ಉದ್ದೇಶ ಇಟ್ಟುಕೊಂಡು ಈ ಬೃಹತ್ ಬೆಂಗಳೂರು ಕಟ್ಟಿದ್ದಾರೆ. ಅವರನ್ನು ನಾವು ಪೂಜಿಸುವ ಕೆಲಸ ಮಾಡಬೇಕು. ಬೆಂಗಳೂರು ನಗರ ಇಲ್ಲದಿದ್ದರೆ ಕರ್ನಾಟಕಕ್ಕೆ ಮಹತ್ವ ಸಿಲ್ತಿರಲಿಲ್ಲ. ದೊಡ್ಡ ಮಟ್ಟದಲ್ಲಿ ಬೆಂಗಳೂರು ಬೆಳೆದಿರುವುದಕ್ಕೆ ಕೆಂಪೇಗೌಡರು ಕಾರಣ. ನಾಲ್ವಡಿ ಕೃಷ್ಣರಾಜ ಒಡೆಯರ್ ಹಳೆ ಮೈಸೂರು ಅಭಿವೃದ್ಧಿ ಆಗಿದ್ರೆ ಇವರೇ ಕಾರಣ.
1940 ರಿಂದ ಇಲ್ಲಿಯವರೆಗೆ 85 ವರ್ಷ ಜೂನ್ ತಿಂಗಳಲ್ಲಿ KRS ತುಂಬಿದ ಇತಿಹಾಸ ಇಲ್ಲ, ಇವತ್ತು ಡ್ಯಾಂ ತುಂಬಿ ಜನರ ಬದುಕಿಗೆ ಉಪಯೋಗವಾಗುತ್ತಿದೆ. ಕೆಂಪೇಗೌಡರು ಒಂದು ಸಮಾಜಕ್ಕೆ ಸೀಮಿತವಲ್ಲ ನಾಡಿನ ಜನರಿಗಾಗಿ ದುಡಿದಂತವರು. ರಾಜಕಾರಣ ಟೀಕೆ ಮಾಡೋದು ಸಹಜ. ಕೆಂಪೇಗೌಡ ಇಂಟರ್ನ್ಯಾಷನಲ್ ಏರ್ಪೋರ್ಟ್ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಕೆಂಪೇಗೌಡ ಪ್ರಾಧಿಕಾರ, ಕೆಂಪೇಗೌಡ ಜಯಂತಿ ಮಾಡಲು ಸಿದ್ದರಾಮಯ್ಯ ಕಾರಣ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಹೇಳಿದರು.












Click it and Unblock the Notifications