'ಸಾಧನೆಯ ಸಂಭ್ರಮ' ಸಿದ್ದರಾಮಯ್ಯ ರಾಜ್ಯ ಪ್ರವಾಸಕ್ಕೆ ಡಿ.13ರಂದು ಚಾಲನೆ

Posted By: Gururaj
Subscribe to Oneindia Kannada

ಬೆಂಗಳೂರು, ಡಿಸೆಂಬರ್ 04 : ರಾಜ್ಯ ಸರ್ಕಾರದ ಸಾಧನೆಗಳ ಬಗ್ಗೆ ಜನರಿಗೆ ತಿಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸೆಂಬರ್ 13ರಿಂದ ರಾಜ್ಯ ಪ್ರವಾಸ ಆರಂಭಿಸಲಿದ್ದಾರೆ. 'ಸಾಧನೆಯ ಸಂಭ್ರಮ' ಹೆಸರಿನಲ್ಲಿ ಈ ಪ್ರವಾಸ ನಡೆಯಲಿದೆ.

ಬೀದರ್ ಜಿಲ್ಲೆಯ ಬಸವಕಲ್ಯಾಣದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಪ್ರವಾಸ ಆರಂಭಿಸಲಿದ್ದು, 100 ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ. ಇದೊಂದು ಸರ್ಕಾರಿ ಕಾರ್ಯಕ್ರಮವಾಗಿದ್ದು, ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಸಿದ್ದರಾಮಯ್ಯ ಜೊತೆಗೆ ಇರಲಿದ್ದಾರೆ.

ಪರಿವರ್ತನಾ ಯಾತ್ರೆ : 17ದಿನದಲ್ಲಿ ಬಿಜೆಪಿ ಸಾಧಿಸಿದ್ದೇನು?

ಕಾಂಗ್ರೆಸ್ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಿದ್ದರಾಮಯ್ಯ ಪ್ರವಾಸಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಬಿಜೆಪಿ ಯಾತ್ರೆಗೆ ಸೆಡ್ಡು ಹೊಡೆಯಲು, ಸಿದ್ದರಾಮಯ್ಯ ಪ್ರತಿತಂತ್ರ!

Siddaramaiah to start state tour form December 13, 2017

ಡಿ.5, 6ರಂದು ಸಭೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜ್ಯ ಪ್ರವಾಸ, ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ತಯಾರು ಮಾಡುವುದು ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ಡಿ.5 ಮತ್ತು 6ರಂದು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಯಲಿದೆ.

ಬಿಜೆಪಿಯ ಪರಿವರ್ತನಾ ಯಾತ್ರೆ : ಕಾಂಗ್ರೆಸ್ಸಿಗೆ ಆಗುವ ಲಾಭಗಳು

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರ ಅಧ್ಯಕ್ಷತೆಯಲ್ಲಿ ಈ ಮಹತ್ವದ ಸಭೆ ನಡೆಯಲಿದೆ. ಬೆಳಗಾವಿ, ಮೈಸೂರು, ಕಲಬುರಗಿ, ಬೆಂಗಳೂರು ವಿಭಾಗದ ಸಹ ಉಸ್ತುವಾರಿಗಳು, ಕೆಪಿಸಿಸಿ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಕರ್ನಾಟಕ ಬಿಜೆಪಿ 2018ರ ವಿಧಾನಸಭೆ ಚುನಾವಣೆಗೆ ಪ್ರಚಾರ ನಡೆಸಲು 'ನವ ಕರ್ನಾಟಕ ಪರಿವರ್ತನಾ ಯಾತ್ರೆ' ಆರಂಭಿಸಿದೆ. ಯಾತ್ರೆ 23 ದಿನಗಳನ್ನು ಪೂರೈಸಿದ್ದು, ಕಲಬುರಗಿಯಲ್ಲಿ ಸದ್ಯ ಯಾತ್ರೆ ಸಂಚಾರ ನಡೆಸುತ್ತಿದೆ. ಜೆಡಿಎಸ್‌ ಸಹ 'ಕುಮಾರಪರ್ವ' ಹೆಸರಿನಲ್ಲಿ ಒಂದು ಹಂತದ ಪ್ರಚಾರ ಕಾರ್ಯ ನಡೆಸಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Chief Minister Siddaramaiah has drawn up a plan to visit about 100 assembly constituencies during his state tour scheduled from December 13, 2017. Siddaramaiah is scheduled to launch his tour form Basavakalyana, Bidar in the name of Sadhaneya Sambrama.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ