ಬರಪೀಡಿತ ಜಿಲ್ಲೆಗಳ ಪ್ರವಾಸಕ್ಕೆ ಹೊರಟ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ 13 : ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪ್ರವಾಸದಲ್ಲಿ ಬದಲಾವಣೆ ಮಾಡಿದ್ದಾರೆ. ಸಂಪುಟ ಪುನಾರಚನೆ ಬಗ್ಗೆ ಚರ್ಚಿಸಲು ದೆಹಲಿಗೆ ಹೋಗಬೇಕಿದ್ದ ಸಿಎಂ, ಬರಪೀಡಿತ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ.

ಸಿದ್ದರಾಮಯ್ಯ ಅವರು ಏ.15 ಮತ್ತು 18 ಎಂದು ಎರಡು ಹಂತಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸ ಮಾಡಲಿದ್ದು, ಬರಪೀಡಿತ 12 ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಜಿಲ್ಲಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. [ಉತ್ತರ ಕರ್ನಾಟಕ ಭಾಗಕ್ಕೆ ಮಹಾರಾಷ್ಟ್ರದಿಂದ 4 ಟಿಎಂಸಿ ನೀರು]

drought

ಏ.10ರ ಬಳಿಕ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ನಡೆಸಲು ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಬೇಕಾಗಿತ್ತು. ಆದರೆ, ತಮ್ಮ ಪ್ರವಾಸದಲ್ಲಿ ಬದಲಾವಣೆ ಮಾಡಿರುವ ಮುಖ್ಯಮಂತ್ರಿಗಳು ಬರಪೀಡಿತ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ. ಈ ಮೂಲಕ ವಿಪಕ್ಷಗಳ ಟೀಕೆಗೆ ಉತ್ತರ ಕೊಡಲು ಸಜ್ಜಾಗಿದ್ದಾರೆ. [ಸುಡುತ್ತಿದೆ ಕರ್ನಾಟಕ, ಬಾ ಮಳೆಯೇ ಬೇಗ ಬಾ]

ಸಿದ್ದರಾಮಯ್ಯ ಪ್ರವಾಸದ ವಿವರ : ಸದ್ಯಕ್ಕೆ ಲಭ್ಯವಾಗಿರುವ ಮಾಹಿತಿಯಂತೆ ಏ.15ರಂದು ಸಿದ್ದರಾಮಯ್ಯ ಅವರು ಮೊದಲ ಹಂತದ ಪ್ರವಾಸ ಆರಂಭಿಸಲಿದ್ದಾರೆ. ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. [ಕರ್ನಾಟಕದಲ್ಲಿ ಭೀಕರ ಬರಗಾಲ, ಹೇಳುವವರಿಲ್ಲ ಕೇಳುವವರಿಲ್ಲ]

ಏ.18ರಂದು 2ನೇ ಹಂತದ ಪ್ರವಾಸ ಕೈಗೊಳ್ಳಲಿದ್ದು, ಬಳ್ಳಾರಿ, ಕೊಪ್ಪಳ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಅಲ್ಲಿನ ಜಿಲ್ಲಾಧಿಕಾರಿಗಳ ಜೊತೆ ಬರ ಪರಿಹಾರದ ಕುರಿತು ಸಭೆ ನಡೆಸಲಿದ್ದಾರೆ.

ಕರ್ನಾಟಕದಲ್ಲಿ ಈ ಬಾರಿ ಭೀಕರ ಬರಗಾಲದ ಪರಿಸ್ಥಿತಿ ಎದುರಾಗಿದ್ದು, 120ಕ್ಕೂ ಅಧಿಕ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ. ಪ್ರತಿಪಕ್ಷ ಬಿಜೆಪಿ ಬರ ಪೀಡಿತ ಜಿಲ್ಲೆಗಳ ಪ್ರವಾಸ ನಡೆಸುತ್ತಿದೆ. ಈ ಮುಖ್ಯಮಂತ್ರಿಗಳು ಪ್ರವಾಸ ಹೊರಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+