ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪ, ರಾಜ್ಯಪಾಲರಿಗೆ ಸಿದ್ದರಾಮಯ್ಯ ಕುಟುಕು ಟ್ವೀಟ್‌

|
Google Oneindia Kannada News

Recommended Video

ಬಿ ಎಸ್ ಯಡಿಯೂರಪ್ಪ ಹಾಗು ರಾಜ್ಯಪಾಲರ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್ 03: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ಸಿದ್ದರಾಮಯ್ಯ ಅವರು ಟ್ವೀಟ್ ಬಾಣ ಬಿಟ್ಟಿದ್ದಾರೆ. ಸಿದ್ದರಾಮಯ್ಯ ಅವರ ಟೀಕಾ ಬಾಣುದ ಗುರಿ ರಾಜ್ಯಪಾಲರತ್ತಲೂ ನೆಟ್ಟಿದೆ.

ಇಂದು ಬೆಳಿಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಯಡಿಯೂರಪ್ಪ ಅವರು ಸಂಪುಟ ರಚನೆ ಮಾಡದೇ ಕೇವಲ ಅಧಿಕಾರಿಗಳ ವರ್ಗಾವಣೆಯಲ್ಲಿ ಕಾಲಹರಣ ಮಾಡುತ್ತಿರುವುದನ್ನು ಟೀಕಿಸಿದ್ದಾರೆ.

ಸಿದ್ದರಾಮಯ್ಯ ರಚಿಸಿದ್ದ ಎಸಿಬಿ ರದ್ದು?: ಬಿಎಸ್‌ವೈ ಪ್ಲ್ಯಾನ್ ಏನು? ಸಿದ್ದರಾಮಯ್ಯ ರಚಿಸಿದ್ದ ಎಸಿಬಿ ರದ್ದು?: ಬಿಎಸ್‌ವೈ ಪ್ಲ್ಯಾನ್ ಏನು?

'ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಯಡಿಯೂರಪ್ಪ ಅವರು ತೋರಿದ ಅವಸರವನ್ನು ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ? ಅತೀವೃಷ್ಟಿ-ಅನಾವೃಷ್ಟಿಯಿಂದ ರಾಜ್ಯದ ಜನರು ಸಂಕಟದಲ್ಲಿದ್ದಾರೆ. ಆಡಳಿತ ಯಂತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ?' ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Siddaramaiah tweet about CM Yeddyurappa and Governer Vajubhai Vala

'ಅತಿವೃಷ್ಟಿ-ಅನಾವೃಷ್ಟಿಗಳಿಗೆ ಸ್ಪಂದಿಸಬೇಕಾದ ಕಂದಾಯ, ಕೃಷಿ, ಗ್ರಾಮೀಣ ಅಭಿವೃದ್ದಿ ಇಲಾಖೆಗಳಿಗೆ ಸಚಿವರೇ ಇಲ್ಲ. ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೇ? ಸಂಪುಟ ವಿಸ್ತರಣೆಯದ್ದೇ? ' ಎಂದು ಸಿದ್ದರಾಮಯ್ಯ ಅವರು ಯಡಿಯೂರಪ್ಪ ಅವರ ವರ್ಗಾವಣೆ ಪರ್ವವನ್ನು ಟೀಕಿಸಿದ್ದಾರೆ.

ಟಿಪ್ಪು ಜಯಂತಿ ರದ್ದು: ಸದನದಲ್ಲಿ ವಿಪಕ್ಷಗಳ ಆಕ್ರೋಶ ಟಿಪ್ಪು ಜಯಂತಿ ರದ್ದು: ಸದನದಲ್ಲಿ ವಿಪಕ್ಷಗಳ ಆಕ್ರೋಶ

ರಾಜ್ಯಪಾಲರನ್ನೂ ಟ್ವೀಟ್‌ ಮೂಲಕ ಕುಟುಕಿರುವ ಸಿದ್ದರಾಮಯ್ಯ, 'ವಿಶ್ವಾಸ ಮತಯಾಚನೆಗೆ ಸಂದೇಶದ ಮೇಲೆ ಸಂದೇಶ ಕಳಿಸುತ್ತಿದ್ದ ಘನತೆವೆತ್ತ ರಾಜ್ಯಪಾಲರ ಗಮನಕ್ಕೆ, ಸಚಿವರಿಲ್ಲದ ಏಕವ್ಯಕ್ತಿ ಸಂಪುಟದಿಂದಾಗಿ ರಾಜ್ಯದ ಜನತೆ ಅನುಭವಿಸುತ್ತಿರುವ ಬವಣೆ ಕಾಣುತ್ತಿಲ್ಲವೇ?' ಎಂದು ಪ್ರಶ್ನಿಸಿದ್ದಾರೆ.

English summary
Former CM Siddaramaiah today tweeted that CM Yeddyurappa is busy transfering the officers and not forming his cabinet. He also critisize the governer also.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X