ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಕೆಶಿ ಜತೆ ಸಭೆ ಮುಗಿದ ಬಳಿಕ ಸಿದ್ದರಾಮಯ್ಯ ಮಾಡಿದ ಟ್ವೀಟ್‌ನಲ್ಲಿ ಏನಿದೆ?

|
Google Oneindia Kannada News

Recommended Video

ಡಿ ಕೆ ಶಿವಕುಮಾರ್ ರನ್ನ ಭೇಟಿಯಾದ ನಂತರ ಬಿಜೆಪಿ ವಿರುದ್ಧ ಟ್ವೀಟ್ ಮಾಡಿದ ಸಿದ್ದರಾಮಯ್ಯ | Oneindia kannada

ಬೆಂಗಳೂರು, ಸೆಪ್ಟೆಂಬರ್ 20: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಹೀನ ಕೆಲಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸಮ್ಮಿಶ್ರ ಸರ್ಕಾರದ ಪರವಾಗಿ ಮತ್ತು ಬಿಜೆಪಿಯ ವಿರುದ್ಧ ಅವರು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಡಿಕೆಶಿ ತೆರಳಿದ್ದು ಸಿದ್ದರಾಮಯ್ಯ ಮನೆಗೆಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಡಿಕೆಶಿ ತೆರಳಿದ್ದು ಸಿದ್ದರಾಮಯ್ಯ ಮನೆಗೆ

ಡಿ.ಕೆ. ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಜತೆ ತಮ್ಮ ಕಾವೇರಿ ನಿವಾಸದಲ್ಲಿ ಗುರುವಾರ ರಾತ್ರಿವರೆಗೂ ದಿಢೀರ್ ಸಭೆ ನಡೆಸಿದ್ದ ಅವರು, ಮಾತುಕತೆ ಮುಗಿಯುತ್ತಿದ್ದಂತೆಯೇ ಬಿಜೆಪಿ ವಿರುದ್ಧ ಹರಿಹಾಯ್ದು ಟ್ವೀಟ್ ಮಾಡಿದ್ದಾರೆ.

siddaramaiah tweet after meeting with dk shivakumar against bjp

ಸಿದ್ಧಾಂತ ಮಾತನಾಡುವ ಬಿಜೆಪಿಯವರು ಅಧಿಕಾರಕ್ಕಾಗಿ ಹೀನ ಮಟ್ಟದ ರಾಜಕೀಯಕ್ಕೆ ಇಳಿದಿದ್ದಾರೆ. ಚುನಾವಣೆಯಲ್ಲಿ ಸೋತವರು ವಿರೋಧ ಪಕ್ಷವಾಗಿ ಕೆಲಸ ಮಾಡಬೇಕು.ಅದನ್ನು ಬಿಟ್ಟು ಸರ್ಕಾರವನ್ನು ಅಸ್ಥಿರಗೊಳಿಸುವ ಅನೀತಿಯುತ ಪ್ರಯತ್ನ ಮಾಡಬಾರದು.

ರಾಜ್ಯದ ಜನ ಇದನ್ನು ಗಮನಿಸುತ್ತಾ ಇದ್ದಾರೆ. ಅವರೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದು ಸಿದ್ದರಾಮಯ್ಯ ಒಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಈ ಟ್ವೀಟ್‌ಗೆ ಅವರು ಬಿಜೆಪಿ ಮತ್ತು ಅವರ ಸುಳ್ಳುಗಳು ಎಂಬ ಹ್ಯಾಷ್‌ಟ್ಯಾಗ್ ಬಳಿಸಿದ್ದಾರೆ.

ಒಂದು ನಿಮಿಷದ ಬಳಿಕ ಮಾಡಿರುವ ಮತ್ತೊಂದು ಟ್ವೀಟ್‌ನಲ್ಲಿ, ಕಾಂಗ್ರೆಸ್‌ನ ಯಾವೊಬ್ಬ ಶಾಸಕನೂ ಮುಂಬೈಗೆ ಹೋಗಿಲ್ಲ, ಸರ್ಕಾರ ಸುಭದ್ರವಾಗಿದೆ.

ಪ್ರಪಂಚದ ದುಷ್ಟ ಮುಖ್ಯಮಂತ್ರಿ ಕುಮಾರಸ್ವಾಮಿ: ಈಶ್ವರಪ್ಪ ಟೀಕೆಪ್ರಪಂಚದ ದುಷ್ಟ ಮುಖ್ಯಮಂತ್ರಿ ಕುಮಾರಸ್ವಾಮಿ: ಈಶ್ವರಪ್ಪ ಟೀಕೆ

ನರೇಂದ್ರ ಮೋದಿಯವರು ಜನರ ಅಕೌಂಟ್‌ಗೆ ಹಾಕುತ್ತೇನೆ ಎಂದು ಹೇಳಿದ್ದ ಮೊತ್ತದ ನೂರು ಪಟ್ಟು ಹೆಚ್ಚು ಹಣ ನೀಡುತ್ತೇವೆ ಎಂದು ನಮ್ಮ ಶಾಸಕರಿಗೆ ಬಿಜೆಪಿಯವರು ಆಮಿಷವೊಡ್ಡುತ್ತಿದ್ದಾರೆ. ಆದರೆ ನಮ್ಮ ಶಾಸಕರು ಆಮಿಷಗಳಿಗೆ ಬಲಿಯಾಗಿ ಕೋಮುವಾದಿಗಳೊಂದಿಗೆ ಕೈಜೋಡಿಸುವುದಿಲ್ಲ ಎಂದಿದ್ದಾರೆ.

ಎರಡನೆಯ ಟ್ವೀಟ್‌ ಅನ್ನು ಅವರು ಮತ್ತೆ ಇಂಗ್ಲಿಷ್‌ನಲ್ಲಿಯೂ ಮಾಡಿದ್ದಾರೆ.

English summary
Siddaramaiah series tweets against BJP after the meeting with DK Shivakumar in his residence on Thursday night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X