ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೌದು, ನಾನು ಜಾತಿವಾದಿ ಏನೀಗ; ಸಿದ್ದರಾಮಯ್ಯ ಟ್ವೀಟ್

|
Google Oneindia Kannada News

ಬೆಂಗಳೂರು, ಅಕ್ಟೋಬರ್ 25; 'ಶೋಷಿತ ಜಾತಿಗಳು ತಮಗಾಗಿರುವ ಅನ್ಯಾಯವನ್ನು ಹೇಳಿಕೊಳ್ಳಲು ಸಂಘಟಿತರಾಗಿವುದು‌ ತಪ್ಪಲ್ಲ, ಅದು ಜಾತಿವಾದವೂ ಅಲ್ಲ. ಅಂತಹ ಜಾತಿ ಸಮಾವೇಶಗಳಲ್ಲಿ ಭಾಗವಹಿಸುವುದು ಜಾತಿವಾದವಾದರೆ. ಹೌದು, ನಾನು ಜಾತಿವಾದಿ ಏನೀಗ' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿಯನ್ನು ಪ್ರಶ್ನಿಸಿದರು.

ಸೋಮವಾರ ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ಬಂಜಾರ ಅಭಿವೃದ್ಧಿ ನಿಗಮ, ತಾಂಡಾ ಅಭಿವೃದ್ಧಿ ನಿಗಮ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ದೇವರಾಜ ಅರಸು ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

ಹಾನಗಲ್‌; ಮುಖ್ಯಮಂತ್ರಿಗಳಿಗೆ ಸವಾಲು ಹಾಕಿದ ಸಿದ್ದರಾಮಯ್ಯ ಹಾನಗಲ್‌; ಮುಖ್ಯಮಂತ್ರಿಗಳಿಗೆ ಸವಾಲು ಹಾಕಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಟೀಕೆ ಮಾಡಿರುವ ಸಿದ್ದರಾಮಯ್ಯ, 'ಕುರಿಗಾಯಿಗಳ ಓಟಿನ ಬೇಟೆಗಾಗಿ‌ ಕಂಬಳಿ ಹೊದ್ದು ಚುನಾವಣಾ ಪ್ರಚಾರ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಈ ನಾಟಕ ನಿಲ್ಲಿಸಿ. ನಿಮಗೆ ಕುರಿಗಾಯಿಗಳ ಬಗ್ಗೆ ಕಾಳಜಿ ಇದ್ದರೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಅನುಗ್ರಹ ಯೋಜನೆಗೆ ಹಣ ಒದಗಿಸಿ' ಎಂದು ಟ್ವೀಟ್ ಮೂಲ ಸವಾಲು ಹಾಕಿದ್ದಾರೆ.

ಟ್ವೀಟ್‌ನಲ್ಲೇ ಕಿರಿಯ ಬಸವರಾಜ ಬೊಮ್ಮಾಯಿ ಕಿವಿ ಹಿಂಡಿದ ಸಿದ್ದರಾಮಯ್ಯ! ಟ್ವೀಟ್‌ನಲ್ಲೇ ಕಿರಿಯ ಬಸವರಾಜ ಬೊಮ್ಮಾಯಿ ಕಿವಿ ಹಿಂಡಿದ ಸಿದ್ದರಾಮಯ್ಯ!

'ನಾನು ಜಾರಿಗೆ ತಂದಿದ್ದ ಅನುಗ್ರಹ ಯೋಜನೆಯನ್ನು ಸ್ಥಗಿತಗೊಳಿಸಿದ್ದ ಬಿಜೆಪಿ ಕರ್ನಾಟಕದ ಸರ್ಕಾರವನ್ನು ಕಟುಕರ ಸರ್ಕಾರ ಎನ್ನದೆ ಬೇರೆ ಹೇಗೆ ಕರೆಯೋಣ?' ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಆರ್‌ಎಸ್ಎಸ್ ಕಂಡರೆ ನನಗ್ಯಾಕೆ ಭಯ?; ಸಿದ್ದರಾಮಯ್ಯ ಆರ್‌ಎಸ್ಎಸ್ ಕಂಡರೆ ನನಗ್ಯಾಕೆ ಭಯ?; ಸಿದ್ದರಾಮಯ್ಯ

ಇದು ಜಾತಿವಾದವೇ?

'ನಾನು ಮುಖ್ಯಮಂತ್ರಿಯಾಗಿದ್ದಾಗ ಬಂಜಾರ ಅಭಿವೃದ್ಧಿ ನಿಗಮ, ತಾಂಡಾ ಅಭಿವೃದ್ಧಿ ನಿಗಮ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ದೇವರಾಜ ಅರಸು ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಅಭಿವೃದ್ಧಿ ನಿಗಮಗಳಲ್ಲಿದ್ದ ಬಡವರ ಸಾಲವನ್ನು ಮನ್ನಾ ಮಾಡಿದ್ದೆ. ಇದು ಜಾತಿವಾದವೇ ಬಿಜೆಪಿ ಕರ್ನಾಟಕ?' ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ನಾನು ಜಾತಿವಾದಿ ಏನೀಗ?

'ಶೋಷಿತ ಜಾತಿಗಳು ತಮಗಾಗಿರುವ ಅನ್ಯಾಯವನ್ನು ಹೇಳಿಕೊಳ್ಳಲು ಸಂಘಟಿತರಾಗಿವುದು‌ ತಪ್ಪಲ್ಲ, ಅದು ಜಾತಿವಾದವೂ ಅಲ್ಲ. ಅಂತಹ ಜಾತಿ ಸಮಾವೇಶಗಳಲ್ಲಿ ಭಾಗವಹಿಸುವುದು ಜಾತಿವಾದವಾದರೆ. ಹೌದು, ನಾನು ಜಾತಿವಾದಿ ಏನೀಗ ಬಿಜೆಪಿ ಕರ್ನಾಟಕ' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸಂತ ಸೇವಾಲಾಲ್ ಜಯಂತಿ

'ನಮ್ಮ ಸರ್ಕಾರ ಬಂಜಾರ ಸಮಾಜದ ಅಭಿವೃದ್ಧಿಗೆ ವಾರ್ಷಿಕ 200 ಕೋಟಿ ರೂಪಾಯಿಗಳನ್ನು ನೀಡಿತ್ತು. ರಾಜ್ಯ ಬಿಜೆಪಿ ಸರ್ಕಾರ ಈ ಅನುದಾನವನ್ನು ಬರೀ 10 ಕೋಟಿಗೆ ಇಳಿಸಿದೆ. ಸರ್ಕಾರವೇ ಸಂತ ಸೇವಾಲಾಲ್ ಜಯಂತಿಯನ್ನು ಆಚರಿಸಬೇಕೆಂದು ಆದೇಶ ಹೊರಡಿಸಿದವನು ನಾನೆ. ಇದು ಜಾತಿವಾದವೇ?' ಎಂದು ಸಿದ್ದರಾಮಯ್ಯ ಟ್ವೀಟ್ ಬಾಣ ಬಿಟ್ಟಿದ್ದಾರೆ.

'ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬಂದರೆ ಬಂಜಾರ ಸಮುದಾಯದ ಕುಲಕಸುಬಾದ ಕಸೂತಿ ವೃತ್ತಿಯನ್ನು ಅಭಿವೃದ್ಧಿ ಪಡಿಸಲು ರೂ.100 ಕೋಟಿ ಅನುದಾನ ನೀಡುತ್ತೇವೆ ಮತ್ತು ಕಸೂತಿ ಉತ್ಪನ್ನಗಳಿಗೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆ ಸೌಲಭ್ಯ ಒದಗಿಸುತ್ತೇವೆ. ಬಿಜೆಪಿ ತಾಕತ್ತಿದ್ದರೆ ವಿರೋಧಿಸಲಿ' ಎಂದು ಸವಾಲು ಹಾಕಿದ್ದಾರೆ.

ತಿದ್ದುಪಡಿ ತಂದಿದ್ದು ನಮ್ಮ ಸರ್ಕಾರ

'ತಾಂಡಾಗಳು, ಹಟ್ಟಿಗಳು, ಮಜರೆಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸುವ ಕ್ರಾಂತಿಕಾರಕ "ಕರ್ನಾಟಕ ಭೂಸುಧಾರಣಾ ತಿದ್ದುಪಡಿ ಕಾಯಿದೆ" ಯನ್ನು ಜಾರಿಗೊಳಿಸಿ, ಲಕ್ಷಾಂತರ ಬಡ ಜನರಿಗೆ ಭೂಮಿಯ ಒಡೆತನದ ಹಕ್ಕು ನೀಡಿದ್ದು ನಮ್ಮ ಸರ್ಕಾರ. ಇದು ಜಾತಿವಾದವೇ?' ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಬಸವರಾಜ ಬೊಮ್ಮಾಯಿ ವಿರುದ್ಧ ಆಕ್ರೋಶ

'ಶಿವಮೊಗ್ಗದಲ್ಲಿ ಚಿಕ್ಕೋಡಿ ತಾಲೂಕಿನ ಕುರಿಗಾಯಿ ನಾಯಿಂಗ್ಲಾಜ್ ವಾಸಪ್ಪ ಮಾನಿಯವರಿಗೆ ಸೇರಿದ ಸುಮಾರು 40 ಕುರಿಗಳು ಸಾವನ್ನಪ್ಪಿವೆ. ಇಂತಹವರಿಗೆ ನೆರವಾಗಲೆಂದೇ ನಾನು ಜಾರಿಗೆ ತಂದಿದ್ದ 'ಅನುಗ್ರಹ' ಯೋಜನೆಯನ್ನು ಸ್ಥಗಿತಗೊಳಿಸಿದ್ದ ಬಿಜೆಪಿ ಸರ್ಕಾರವನ್ನು ಕಟುಕರ ಸರ್ಕಾರ ಎನ್ನದೆ ಬೇರೆ ಹೇಗೆ ಕರೆಯೋಣ?' ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

'ಕುರಿಗಾಯಿಗಳ ಓಟಿನ ಬೇಟೆಗಾಗಿ‌ ಕಂಬಳಿ ಹೊದ್ದು ಚುನಾವಣಾ ಪ್ರಚಾರ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಈ ನಾಟಕ ನಿಲ್ಲಿಸಿ. ನಿಮಗೆ ಕುರಿಗಾಯಿಗಳ ಬಗ್ಗೆ ಕಾಳಜಿ ಇದ್ದರೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ 'ಅನುಗ್ರಹ' ಯೋಜನೆಗೆ ಹಣ ಒದಗಿಸಿ ಪಶುಗಳನ್ನು‌‌ ಕಳೆದುಕೊಂಡ ರೈತರಿಗೆ ಪರಿಹಾರ ನೀಡಿ' ಎಂದು ಒತ್ತಾಯಿಸಿದ್ದಾರೆ.

English summary
Leader of opposition Siddaramaiah tweet against Karnataka BJP government and asked about what they made for Banjara and other community.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X