ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದ ಸಿದ್ದರಾಮಯ್ಯ ಟ್ವೀಟ್!

ಬೆಂಗಳೂರು, ಮಾರ್ಚ್ 11 : ಮೈಸೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ವಿಚಾರದಲ್ಲಿ ಕಾಂಗ್ರೆಸ್ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಹಾಲಿ ಸಂಸದರು ಇರುವ ಕ್ಷೇತ್ರವನ್ನು ಬಿಟ್ಟುಕೊಡುವ ಬಗ್ಗೆಯೂ ಇನ್ನೂ ನಿರ್ಧಾರವನ್ನು ಕೈಗೊಂಡಿಲ್ಲ.
ನವದೆಹಲಿಯಲ್ಲಿ ಸೋಮವಾರ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯುತ್ತಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸ್ಪರ್ಧಿಸುವ ಕ್ಷೇತ್ರ ಅಂತಿಮ
ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಸೀಟು ಹಂಚಿಕೆಯ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ. ಹಾಲಿ ಸಂಸದರು ಇರುವ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಕಾಂಗ್ರೆಸ್ ಇನ್ನೂ ಅಂತಿಮ ಒಪ್ಪಿಗೆ ನೀಡಿಲ್ಲ. ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಕ್ಕಾಗಿ ಜೆಡಿಎಸ್ ಬೇಡಿಕೆ ಇಟ್ಟಿದೆ.
ಮೈಸೂರಿನಿಂದ ಸಿದ್ದರಾಮಯ್ಯ ಸ್ಪರ್ಧಿಸಿದರೂ ನಮ್ಮ ಬೆಂಬಲವಿದೆ:ಜಿಟಿಡಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಸುಮಲತಾ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸುವುದಿಲ್ಲ ಮತ್ತು ಯಾವ ಕಾಂಗ್ರೆಸ್ ನಾಯಕರು ಸುಮಲತಾ ಅವರನ್ನು ಬೆಂಬಲಿಸುತ್ತಿಲ್ಲ' ಎಂದು ಟ್ವೀಟ್ ಮಾಡಿದ್ದಾರೆ. ಈ ಮೂಲಕ ಮಂಡ್ಯ ರಾಜಕೀಯ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.....
ಲೋಕಸಭಾ ಸೀಟು ಹಂಚಿಕೆ : ಕಾಂಗ್ರೆಸ್ ನಾಯಕರಿಗೆ ಪಟ್ಟಿ ಕೊಟ್ಟ ಜೆಡಿಎಸ್
|
ಸಿದ್ದರಾಮಯ್ಯ ಟ್ವೀಟ್
ಕಾಂಗ್ರೆಸ್‌ನ ಹಾಲಿ ಸಂಸದರಿರುವ ಕ್ಷೇತ್ರ ಜೆಡಿಎಸ್‌ಗೆ ಬಿಟ್ಟುಕೊಡುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಕ್ಷೇತ್ರಗಳಿಗಾಗಿ ಜೆಡಿಎಸ್ ಬೇಡಿಕೆ ಇಟ್ಟಿದೆ.

ಮೈಸೂರು ಜೆಡಿಎಸ್‌ಗೆ?
ಮೈಸೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ವಿಚಾರ ಇಂದು ನಡೆಯುವ ಸಭೆಯ ನಂತರ ನಿರ್ಧಾರವಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಕ್ಷೇತ್ರ ಬಿಜೆಪಿ ವಶದಲ್ಲಿದ್ದು ಪ್ರತಾಪ್ ಸಿಂಹ ಹಾಲಿ ಸಂಸದರು. ಕಾಂಗ್ರಸ್, ಜೆಡಿಎಸ್ ಮೈತ್ರಿ ಮಾಡಿಕೊಂಡು ಕ್ಷೇತ್ರದಲ್ಲಿ ಚುನಾವಣೆ ಎದುರಿಸಲಿವೆ.

ಸುಮಲತಾ ಅಂಬರೀಶ್
ಸುಮಲತಾ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸುವುದಿಲ್ಲ ಮತ್ತು ಯಾವ ಕಾಂಗ್ರೆಸ್ ನಾಯಕರು ಸುಮಲತಾ ಅವರನ್ನು ಬೆಂಬಲಿಸುತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಜೆಡಿಎಸ್‌ಗೆ ಮಂಡ್ಯ ಕ್ಷೇತ್ರವನ್ನು ಬಿಟ್ಟುಕೊಡಲಾಗಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಅಭ್ಯರ್ಥಿಯಾಗಲಿದ್ದಾರೆ.
|
ಮಂಡ್ಯ ಕ್ಷೇತ್ರ
ಜೆಡಿಎಸ್‌ಗೆ ಬಿಟ್ಟ ಕ್ಷೇತ್ರದಲ್ಲಿ ಇಂತವರನ್ನೇ ಅಭ್ಯರ್ಥಿ ಮಾಡಿ ಎಂದು ನಾವು ಹೇಳೋಕೆ ಆಗುವುದಿಲ್ಲ. ಹಾಗೆಯೇ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಜೆಡಿಎಸ್‌ನವರು ನಮಗೆ ಹೇಳಲು ಆಗುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.