ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಪುಟ ವಿಸ್ತರಣೆ; ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಟ್ವೀಟ್ ಬಾಣ!

|
Google Oneindia Kannada News

ಬೆಂಗಳೂರು, ಜುಲೈ 08; ' ನರೇಂದ್ರ ಮೋದಿ ಅವರು ಮೊದಲು ಅಧಿಕಾರಕ್ಕೆ ಬಂದಾಗ Minimum Government Maximum Governence ಎಂಬ ಘೋಷಣೆ ಕೂಗುತ್ತಿದ್ದರು. ಈಗಿನ ಸಚಿವ ಸಂಪುಟದಲ್ಲಿ 77 ಸದಸ್ಯರಿದ್ದಾರೆ. ಇದೇನಾ Minimum Government?. ಹೇಳುವುದೊಂದು, ಮಾಡುವುದೊಂದು. ಇದಕ್ಕಾಗಿಯೇ ನಾನು ಮೋದಿಯವರ ಮನೆದೇವರೇ ಸುಳ್ಳು ಎಂದು ಹೇಳುತ್ತಿರುವುದು' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಬುಧವಾರ ಪ್ರಧಾನಿ ನರೇಂದ್ರ ಮೋದಿ ಸಂಪುಟ ವಿಸ್ತರಣೆ ಮಾಡಿದ್ದಾರೆ. ಹಲವು ಸಚಿವರನ್ನು ಕೈ ಬಿಟ್ಟಿದ್ದು 43 ಸಚಿವರು ಹೊಸದಾಗಿ ಸೇರ್ಪಡೆಗೊಂಡಿದ್ದಾರೆ. ಸಂಪುಟದ ಸಚಿವರ ಒಟ್ಟು ಸಂಖ್ಯೆ 77ಕ್ಕೆ ಏರಿಕೆಯಾಗಿದೆ. ಈ ಕುರಿತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ.

ಮೋದಿ ಸಂಪುಟ ವಿಸ್ತರಣೆ: ಇಲ್ಲಿದೆ ಸಚಿವರುಗಳ ವಿದ್ಯಾರ್ಹತೆ ವಿವರಮೋದಿ ಸಂಪುಟ ವಿಸ್ತರಣೆ: ಇಲ್ಲಿದೆ ಸಚಿವರುಗಳ ವಿದ್ಯಾರ್ಹತೆ ವಿವರ

ಸಿದ್ದರಾಮಯ್ಯ ಟ್ವೀಟ್‌ನಲ್ಲಿ, 'ಸಚಿವರ ಕಾರ್ಯನಿರ್ವಹಣೆಯೇ ಸಂಪುಟ ಪುನಾರಚನೆಯ ಮಾನದಂಡವಾಗಿದ್ದರೆ ಮೊದಲು ನರೇಂದ್ರ ಮೋದಿ ಅವರನ್ನು ಪ್ರಧಾನಿ ಪಟ್ಟದಿಂದ ಕಿತ್ತುಹಾಕಬೇಕು. ನೋಟ್ ಬ್ಯಾನ್ ನಿಂದ ಹಿಡಿದು ಕೊರೊನಾ ನಿಯಂತ್ರಣದ ವರೆಗೆ ಈ ಸರ್ಕಾರ ವಿಫಲಗೊಂಡಿದ್ದರೆ ಅದಕ್ಕೆ ನೇರ ಹೊಣೆ ನರೇಂದ್ರ ಮೋದಿಯವರು" ಎಂದು ಆರೋಪಿಸಿದ್ದಾರೆ.

ಮೋದಿ ಸಂಪುಟದಲ್ಲಿ ಕರ್ನಾಟಕದ ಸಚಿವರು, ಖಾತೆಗಳು ಮೋದಿ ಸಂಪುಟದಲ್ಲಿ ಕರ್ನಾಟಕದ ಸಚಿವರು, ಖಾತೆಗಳು

"ಆಂತರಿಕ ಪ್ರಜಾಪ್ರಭುತ್ವವೇ ಇಲ್ಲದ ಏಕವ್ಯಕ್ತಿ ಪ್ರದರ್ಶನವಾಗಿರುವ ಸರ್ಕಾರದಲ್ಲಿ ಸಂಪುಟ ವಿಸ್ತರಣೆಗೆ ಯಾವ ಮಹತ್ವ ಇಲ್ಲ. ಯಾರು ಸಚಿವರಾದರೂ ಅವರೆಲ್ಲರೂ ನಾಮ್ ಕಾವಸ್ತೆ, ಹಣಕಾಸು, ಆರೋಗ್ಯ, ಶಿಕ್ಷಣ ಖಾತೆ ಯಾವುದೇ ಇರಲಿ, ನೀತಿ ನಿರ್ಧಾರಗಳನ್ನು ಪ್ರಕಟಿಸುವುದು ನರೇಂದ್ರ ಮೋದಿ ಅವರೇ ಆಗಿರುವ ಕಾರಣ ಆ ಖಾತೆಗಳ ವೈಫಲ್ಯಕ್ಕೆ ಅವರೇ ಹೊಣೆ" ಎಂದು ಸಿದ್ದರಾಮಯ್ಯ ದೂರಿದ್ದಾರೆ.

ಮೋದಿ ಸಂಪುಟ ವಿಸ್ತರಣೆಗೂ ಮುನ್ನ ರಾಜೀನಾಮೆ ಕೊಟ್ಟ ಸಚಿವರಿವರು ಮೋದಿ ಸಂಪುಟ ವಿಸ್ತರಣೆಗೂ ಮುನ್ನ ರಾಜೀನಾಮೆ ಕೊಟ್ಟ ಸಚಿವರಿವರು

ಮೋದಿ ರಾಜೀನಾಮೆ ನೀಡಬೇಕಲ್ಲ

'ಕೊರೊನಾ ನಿಯಂತ್ರಣದ ವೈಫಲ್ಯಕ್ಕೆ ಡಾ.ಹರ್ಷವರ್ಧನ್ ಎಂಬ ಆರೋಗ್ಯ ಸಚಿವರನ್ನು ಕಿತ್ತುಹಾಕಿದ್ದಾರಂತೆ. ನಿಜವಾಗಿ ಮೋದಿಯವರು ರಾಜೀನಾಮೆ ನೀಡಬೇಕಲ್ಲಾ' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ನಿರ್ಮಲಾ ಸೀತಾರಾಮನ್ ಕಿತ್ತು ಹಾಕಬೇಕಿತ್ತು

ನಿರ್ಮಲಾ ಸೀತಾರಾಮನ್ ಕಿತ್ತು ಹಾಕಬೇಕಿತ್ತು

'ಸಾಧನೆಯೇ ಮಾನದಂಡವಾಗಿದ್ದರೆ ಮೊದಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕಿತ್ತುಹಾಕಬೇಕಿತ್ತಲ್ವಾ? ಆರೋಗ್ಯ ಕ್ಷೇತ್ರಕ್ಕಿಂತಲೂ ಹೆಚ್ಚಿನ ವೈಫಲ್ಯ ಆಗಿರುವುದು ಆರ್ಥಿಕ ಕ್ಷೇತ್ರದಲ್ಲಿ. ನೋಟ್ ಬ್ಯಾನ್, GST, ಕೊರೊನಾ ಪರಿಹಾರ ಹೀಗೆ ಹಣಕಾಸು ಖಾತೆಗೆ ಸಂಬಂಧಿಸಿದ ವೈಫಲ್ಯಗಳಿಂದಾಗಿಯೇ ದೇಶ ದುಸ್ಥಿತಿಗೆ ಬಂದಿದೆ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಂಪುಟದಲ್ಲಿದ್ದರು ಎಂದು ಗೊತ್ತಾಗಿದ್ದು

ಸಂಪುಟದಲ್ಲಿದ್ದರು ಎಂದು ಗೊತ್ತಾಗಿದ್ದು

'ಬಹಳ ಮಂದಿ ಸಚಿವರನ್ನು ಕೈಬಿಟ್ಟಿರುವ ಸುದ್ದಿ ಕೇಳಿಯೇ ಅವರೆಲ್ಲ ಸಂಪುಟದಲ್ಲಿದ್ದರೆಂದು ದೇಶದ ಜನರಿಗೆ ಗೊತ್ತಾಗಿದ್ದು. ಇವರಲ್ಲಿ ಬಹಳಷ್ಟು ಮಂದಿ ಹೊಸಬರು. ದೇಶ ಎದುರಿಸುತ್ತಿರುವ ಇಂದಿನ ಸಂಕಷ್ಟದ ಕಾಲದಲ್ಲಿ ಈ ಹೊಸಬರು ಏನು ಮಾಡುತ್ತಾರೋ ಗೊತ್ತಿಲ್ಲ. ಸಾಮಾನ್ಯವಾಗಿ ಅಸಮರ್ಥರು ಅಸಮರ್ಥರನ್ನೇ ಆಯ್ಕೆ ಮಾಡಿಕೊಂಡು ಜೊತೆಯಲ್ಲಿಟ್ಟುಕೊಳ್ತಾರೆ' ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕರ್ನಾಟಕದ ನಾಲ್ವರು ಸಚಿವರು

ಕರ್ನಾಟಕದ ನಾಲ್ವರು ಸಚಿವರು

'ಕರ್ನಾಟಕದಿಂದ ಸಚಿವರು ಆರಾಗಲಿ, ಹನ್ನೆರಡಾಗಲಿ ಅದರಿಂದ ರಾಜ್ಯಕ್ಕೆ ಏನೂ ಲಾಭವಾಗದು ಎನ್ನುವುದು ಈಗಾಗಲೇ ಸಾಬೀತಾಗಿದೆ. ಹೊಸಬರಲ್ಲಿ ಯಾರೂ ಸಂಪುಟದರ್ಜೆಯ ಸಚಿವರಿಲ್ಲ. ಮಹತ್ವದ ಖಾತೆಗಳೂ ಇಲ್ಲ. ಮಹತ್ವದ ಖಾತೆಗಳನ್ನು ಕೊಟ್ಟರೂ ಇವರಿಗೆ ನಿಭಾಯಿಸುವ ಸಾಮರ್ಥ್ಯವೂ ಇಲ್ಲ ಎಂದು ನರೇಂದ್ರ ಮೋದಿ ಅವರಿಗೆ ಗೊತ್ತಾಗಿರಬೇಕು' ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

'ಕರ್ನಾಟಕದ 6 ಕೇಂದ್ರ ಸಚಿವರಲ್ಲಿ ಹಿಂದುಳಿದ ಜಾತಿಗೆ ಸೇರಿದವರಿಲ್ಲ. ಮೂವರು ಬ್ರಾಹ್ಮಣರು ಹಾಗೂ ಒಕ್ಕಲಿಗ, ಲಿಂಗಾಯತ ಮತ್ತು ಪರಿಶಿಷ್ಟ ಜಾತಿಗೆ ಸೇರಿದ ತಲಾ ಒಬ್ಬರು ಸಚಿವರಾಗಿದ್ದಾರೆ. ಯಾವ ಜಾತಿಗೆ ಕೊಟ್ಟರೂ ನನ್ನ ಆಕ್ಷೇಪ ಇಲ್ಲ. ಅರ್ಧಕ್ಕಿಂತ ಹೆಚ್ಚಿನ ಜನಸಂಖ್ಯೆಯ ಸಮುದಾಯಗಳಿಗೆ ಪ್ರಾತಿನಿಧ್ಯ ನಿರಾಕರಿಸುವುದು ಯಾವ ಸಾಮಾಜಿಕ ನ್ಯಾಯ?' ಎಂದು ಪ್ರಶ್ನಿಸಿದ್ದಾರೆ.

ಸಂಸದರು ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ

ಸಂಸದರು ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ

'ಯಡಿಯೂರಪ್ಪ ಅವರಿಗೆ ನರೇಂದ್ರ ಮೋದಿ ಎದುರು ಬಾಯಿಬಿಡುವ ಶಕ್ತಿ ಇಲ್ಲ, 25 ಸಂಸದರು ಬಾಯಿಗೆ ಬೀಗ ಹಾಕಿಕೊಂಡು ಕೂತಿದ್ದಾರೆ. ಹೀಗಿರುವಾಗ ಹೊಸದಾಗಿ ಸಚಿವ ಖಾತೆಯ ಕಿರೀಟ ಇಟ್ಟುಕೊಂಡು ಇವರೇನು ಮಾಡಬಹುದು?' ಎಂದು ಪ್ರಶ್ನೆ ಮಾಡಿದ್ದಾರೆ.

English summary
Leader of opposition Siddaramaiah tweet on Prime Minister Narendra Modi cabinet expansion. 43 ministers inducted to cabinet on July 7, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X