ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ದೇಶ ಮುನ್ನಡೆಸುವ ಪ್ರಬಲ ಶಕ್ತಿಯಾಗಲಿದೆ; ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಮಾರ್ಚ್ 17; ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಬದಲಾವಣೆಗಳು ಆಗುತ್ತಿವೆ. ಹಲವು ರಾಜ್ಯಗಳಲ್ಲಿ ಸೋಲು ಅನುಭವಿಸಿರುವ ಪಕ್ಷ ಸಂಘಟನೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲು ಸಹ ಹೆಜ್ಜೆ ಇಟ್ಟಿದೆ.

5 ರಾಜ್ಯಗಳ ಚುನಾವಣೆ ಫಲಿತಾಂಶದ ಬಳಿಕ ಭಾನುವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ವಿಧಾನಸಭೆ ಚುನಾವಣೆ ಸೋಲಿನ ಕುರಿತು ವಿವರವಾದ ಚರ್ಚೆ ನಡೆಯಿತು. ಪಕ್ಷದಲ್ಲಿ ಹಲವಾರು ಬದಲಾವಣೆ ತರಲು ತೀರ್ಮಾನಿಸಲಾಯಿತು.

ಬದಲಾವಣೆ ಇಲ್ಲ: ಎಐಸಿಸಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಮುಂದುವರಿಕೆ ಬದಲಾವಣೆ ಇಲ್ಲ: ಎಐಸಿಸಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಮುಂದುವರಿಕೆ

ಸಭೆಯ ಬಳಿಕ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, "ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನಾಯಕತ್ವದ ಮೇಲೆ ನಮಗೆ ನಂಬಿಕೆ ಇದೆ. ಅವರು ಪಕ್ಷವನ್ನು ಮುನ್ನಡೆಸಲಿದ್ದು, ಮುಂದಿನ ಕ್ರಮಗಳನ್ನು ಅವರೇ ತೆಗೆದುಕೊಳ್ಳಲಿದ್ದಾರೆ" ಎಂದರು.

ಚುನಾವಣೆ ಸೋಲು; ಮಣಿಪುರ, ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರ ರಾಜೀನಾಮೆಚುನಾವಣೆ ಸೋಲು; ಮಣಿಪುರ, ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರ ರಾಜೀನಾಮೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷ, ನಾಯಕತ್ವದ ಕುರಿತು ಗುರುವಾರ ಸರಣಿ ಟ್ವೀಟ ಮಾಡಿದ್ದಾರೆ. 'ಕಾಂಗ್ರೆಸ್ ಪಕ್ಷ, ಇತ್ತೀಚಿನ ಕೆಲವು ಚುನಾವಣಾ ಸೋಲುಗಳ ತಾತ್ಕಲಿಕವಾದ ಹಿನ್ನಡೆಯನ್ನು ಎದುರಿಸಿ ಶ್ರೀಮತಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ದೇಶವನ್ನು ಮತ್ತೆ ಮುನ್ನಡೆಸುವ ಪ್ರಬಲ ರಾಜಕೀಯ ಶಕ್ತಿಯಾಗಿ ಎದ್ದು ಬರಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯ ಆ ಎರಡು ಸವಾಲ್ ಗೆ ಕಾಂಗ್ರೆಸ್ ಉತ್ತರ ನೀಡುತ್ತಾ? ಬಿಜೆಪಿಯ ಆ ಎರಡು ಸವಾಲ್ ಗೆ ಕಾಂಗ್ರೆಸ್ ಉತ್ತರ ನೀಡುತ್ತಾ?

ಕಾರ್ಯಕರ್ತರು ಬೆಂಬಲಿಸುತ್ತಾರೆ

ಕಾರ್ಯಕರ್ತರು ಬೆಂಬಲಿಸುತ್ತಾರೆ

ಕರ್ನಾಟಕ ಕಾಂಗ್ರೆಸ್ ಪಕ್ಷದ ನಾಯಕರಿಂದ ಹಿಡಿದು ಕಾರ್ಯಕರ್ತರವರೆಗೆ ಪ್ರತಿಯೊಬ್ಬರೂ ಶ್ರೀಮತಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ನಾಯಕತ್ವವನ್ನು ಬೆಂಬಲಿಸುತ್ತಿದ್ದಾರೆ. ಇದೇ ನಂಬಿಕೆ ಮತ್ತು ಆತ್ಮ ವಿಶ್ವಾಸದಿಂದ ರಾಜ್ಯದಲ್ಲಿ ಮುಂದಿನ ಚುನಾವಣೆಯನ್ನು ಎದುರಿಸಿ ಪಕ್ಷಕ್ಕೆ ಗೆಲುವಿನ ಉಡುಗೊರೆ ನೀಡುತ್ತೇವೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕೋಮುವಾದಿ ರಾಜಕಾರಣ, ಮಾಧ್ಯಮಗಳ ಮೂಲಕ‌ ನಡೆಸಲಾಗುತ್ತಿರುವ ಸುಳ್ಳುಗಳ ಅಪಪ್ರಚಾರ, ದುಡ್ಡಿನ ಬಲದ ಚುನಾವಣಾ ತಂತ್ರ-ಕುತಂತ್ರಗಳ ಎದುರು ಸೈದ್ಧಾಂತಿಕ ರಾಜಕಾರಣಕ್ಕೆ ಬದ್ಧವಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿರಬಹುದು. ಇದು ತಾತ್ಕಾಲಿಕ ಹಿನ್ನಡೆ, ಸತ್ಯವೇ ಗೆಲ್ಲುವುದು.
"ಸತ್ಯಮೇವ ಜಯತೆ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪಕ್ಷಕ್ಕೆ ಶಕ್ತಿ ತುಂಬಲು ಅರ್ಪಿಸಿಕೊಳ್ಳಿ

ಪಕ್ಷಕ್ಕೆ ಶಕ್ತಿ ತುಂಬಲು ಅರ್ಪಿಸಿಕೊಳ್ಳಿ

ಹೊರಗಿನ ವಿರೋಧ ಪಕ್ಷಗಳ ಅಪಪ್ರಚಾರ ಮತ್ತು ಕೆಲವು ಒಳಗಿನ ಹಿತಶತ್ರುಗಳ ಕುಟಿಲ ಕಾರಸ್ತಾನಗಳಿಂದ ವಿಚಲಿತರಾಗದೆ ಶ್ರೀಮತಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಭರವಸೆ ಇಟ್ಟು ಪಕ್ಷಕ್ಕೆ ಶಕ್ತಿತುಂಬಲು ಪ್ರತಿಯೊಬ್ಬ ಕಾಂಗ್ರೆಸಿಗನು ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದರು.

ಈಗ ಶ್ರೀಮತಿ ಸೋನಿಯಾ ಗಾಂಧಿಯವರ ನಾಯಕತ್ವವನ್ನು ಪ್ರಶ್ನಿಸುತ್ತಿರುವವರು, ಅವರದ್ದೇ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಸತತ ಎರಡು ಬಾರಿ ಲೋಕಸಭಾ ಚುನಾವಣೆಗಳನ್ನು ಗೆದ್ದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವುದನ್ನು ಮರೆತಿರುವುದು ಆತ್ಮದ್ರೋಹವಲ್ಲದೆ ಮತ್ತೇನು? ಎಂದು ಅವರು ಪ್ರಶ್ನಿಸಿದ್ದಾರೆ.

ನಾಯಕತ್ವ ಪ್ರಶ್ನಿಸುವುದು ವಿಷಾದನೀಯ

ನಾಯಕತ್ವ ಪ್ರಶ್ನಿಸುವುದು ವಿಷಾದನೀಯ

ಶ್ರೀಮತಿ ಸೋನಿಯಾ ಗಾಂಧಿಯವರ ನಾಯಕತ್ವದಲ್ಲಿಯೇ ಕೇಂದ್ರದಲ್ಲಿ ಮಾತ್ರವಲ್ಲ, ಹದಿನೈದಕ್ಕೂ ಹೆಚ್ಚು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿತ್ತು‌ ಎನ್ನುವುದನ್ನು ಇಂದು ಅವರ ನಾಯಕತ್ವವನ್ನು ಪ್ರಶ್ನಿಸುವವರು ನೆನಪು ಮಾಡಿಕೊಳ್ಳಬೇಕಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ದೇಶಕ್ಕೆ ಬಲಿದಾನಗೈದ ಪತಿಯ ಅಗಲಿಕೆಯ ಶೋಕ ಮತ್ತು ಎರಡು ಎಳೆಯ ಮಕ್ಕಳ ಭವಿಷ್ಯದ ಕಾಳಜಿಯಿಂದ ರಾಜಕೀಯದಿಂದ ದೂರ ಇದ್ದ ಸೋನಿಯಾ ಗಾಂಧಿಯವರನ್ನು ಕಾಂಗ್ರೆಸ್ ಪಕ್ಷವನ್ನು ಉಳಿಸಲಿಕ್ಕಾಗಿ ಒತ್ತಾಯದಿಂದ ಸಕ್ರಿಯ ರಾಜಕೀಯಕ್ಕೆ ಎಳೆದು ತಂದಿದ್ದ ಕೆಲವು ನಾಯಕರೇ ಈಗ ಸೋನಿಯಾಸೈದ್ಧಾಂತಿಕ ನಾಯಕತ್ವವನ್ನು ಪ್ರಶ್ನಿಸುತ್ತಿರುವುದು ವಿಷಾದನೀಯ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷ ಸೋತಿರಬಹುದು

ಕಾಂಗ್ರೆಸ್ ಪಕ್ಷ ಸೋತಿರಬಹುದು

2004ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದ ಶ್ರೀಮತಿ ಸೋನಿಯಾ ಗಾಂಧಿಯವರು ಹಕ್ಕಿನಿಂದ ಪಡೆಯಬಹುದಾದ ಪ್ರಧಾನಿ ಪಟ್ಟವನ್ನು ತ್ಯಾಗ ಮಾಡಿ ವಿಶ್ವಕ್ಕೆ ಮಾದರಿಯಾಗಿದ್ದನ್ನು ಇಡೀ ವಿಶ್ವ ಕಂಡಿದೆ. ಇಂದಿನ‌ ಟೀಕಾಕಾರರು ಈ ತ್ಯಾಗವನ್ನು ಕಂಡಿಲ್ಲವೇ?
ಕೆಲವು ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಸೋತಿರಬಹುದು.‌ ಆದರೆ ಆಹಾರ, ಶಿಕ್ಷಣ, ಉದ್ಯೋಗ ಮತ್ತು ಮಾಹಿತಿಯ ಶಾಸನಾತ್ಮಕ ಹಕ್ಕನ್ನು ನೀಡಿದ್ದ ಕಾರ್ಯಕ್ರಮಗಳ ರೂವಾರಿಯಾದ ಶ್ರಿಮತಿ ಸೋನಿಯಾ ಗಾಂಧಿಯವರು ದೇಶದ ಜನತೆಯ ಮನೆ-ಮನಗಳಲ್ಲಿ ಶಾಶ್ವತವಾಗಿ ನೆಲೆ ನಿಂತಿದ್ದಾರೆ. ಆ ಚಿತ್ರವನ್ನು ಅಳಿಸಲಾಗದು ಎಂದು ಸಿದ್ದರಾಮಯ್ಯ ಹೇಳಿದರು.

ಶ್ರೀಮತಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ‌ ಮತ್ತು ಪ್ರಿಯಾಂಕ ಗಾಂಧಿಯವರು ಒಂಟಿಯಲ್ಲ, ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರು ಮಾತ್ರವಲ್ಲ ದೇಶದ ಕೋಟ್ಯಂತರ ಜನ ಅವರ ಬೆನ್ನ ಹಿಂದಿದ್ದಾರೆ. ಇಂದಿನ‌ ಸಂಕಷ್ಟ ಸ್ಥಿತಿಯಿಂದ ದೇಶವನ್ನು ಕಾಂಗ್ರೆಸ್ ಪಕ್ಷ ಮಾತ್ರ ಪಾರುಮಾಡಲು ಸಾಧ್ಯ ಎನ್ನುವುದು ಪ್ರತಿಯೊಬ್ಬರೂ ಅರಿತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ಪಟ್ಟ ತ್ಯಾಗ ಮಾಡಿದ್ದು ವಿಶ್ವವೇ ಕಂಡಿದೆ

ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದ ಶ್ರೀಮತಿ ಸೋನಿಯಾ ಗಾಂಧಿಯವರು ಹಕ್ಕಿನಿಂದ ಪಡೆಯಬಹುದಾದ ಪ್ರಧಾನಿ ಪಟ್ಟವನ್ನು ತ್ಯಾಗ ಮಾಡಿ ವಿಶ್ವಕ್ಕೆ ಮಾದರಿಯಾಗಿದ್ದನ್ನು ಇಡೀ ವಿಶ್ವ ಕಂಡಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Recommended Video

Pakistan ಹಾರಿಸಿದ Missile ಅಲ್ಲೇ ಪಕ್ಕದಲ್ಲಿ ಠುಸ್ | Oneindia Kannada

English summary
Former chief minister Siddaramaiah tweet on Sonia Gandhi leader ship and Congress party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X