RSS 'ವಿಘ್ನ ಸಂತೋಷಿ'ಗಳ ಪ್ರಯೋಗದಿಂದ ಬಿಜೆಪಿಯ ಲಿಂಗಾಯತ ನಾಯಕರ ತಲೆದಂಡ: ಸಿದ್ದರಾಮಯ್ಯ ಟೀಕೆ

ಬೆಂಗಳೂರು, ಏಪ್ರಿಲ್ 2023: ಬಿಜೆಪಿಯಿಂದ ರಾಜ್ಯ ಸಾರ್ವತ್ರಿಕ ಚುನಾವಣೆಗೆ ಟಿಕೆಟ್ ಸಿಗದಿದ್ದಕ್ಕೆ ಪಕ್ಷ ತೊರೆದು ಕಾಂಗ್ರೆಸ್ ಸೇರಿದ ಇಬ್ಬರು ಲಿಂಗಾಯತ ನಾಯಕರನ್ನು ಸೋಲಿಸುವ ಜವಾಬ್ದಾರಿಯನ್ನು ಇನ್ನೊಬ್ಬ ಲಿಂಗಾಯತ ನಾಯಕರಿಗೆ ಕೇಂದ್ರ ಗೃಹ ಅಮಿತ್ ಶಾ ಸೂಚಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ನಡೆಯನ್ನು ಟೀಕಿಸಿದ್ದಾರೆ.

ಕರ್ನಾಟಕ ಬಿಜೆಪಿಯನ್ನು ಟ್ಯಾಗ್ ಮಾಡಿ ಪೋಸ್ಟ್ ಮಾಡಿರುವ ಸರಣಿ ಟ್ವೀಟ್‌ನಲ್ಲಿ ಸಿದ್ದರಾಮಯ್ಯನವರು, ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸುವ ಹೊಣೆಯನ್ನು ಈಗ ಬಿ.ಎಸ್.ಯಡಿಯೂರಪ್ಪನವರ ಮೇಲೆ ಹೊರಿಸಲಾಗಿದೆ. ಈ ದಾಯಾದಿಗಳ ಕಾದಾಟದಲ್ಲಿ ಯಾರು ಸೋತರೂ ಒಬ್ಬ ಲಿಂಗಾಯತ ನಾಯಕರು ಸೋತ ಹಾಗೆ ಅಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ. ಆರ್‌ಎಸ್‌ಎಸ್‌ 'ವಿಘ್ನ ಸಂತೋಷಿ'ಗಳ ಪ್ರಯೋಗದಿಂದಲೇ ಬಿಜೆಪಿಯ ಲಿಂಗಾಯತ ನಾಯಕರ ತಲೆದಂಡವಾಗಿದೆ ಎಂದು ಬಿ.ಎಲ್ ಸಂತೋಷ್ ವಿರುದ್ಧ ಪರೋಕ್ಷವಾಗಿ ಅವರು ವಾಗ್ದಾಳಿ ನಡೆಸಿದ್ದಾರೆ.

Siddaramaiah Tweet Reaction About BJP Decision To Defeat Lingayat Leaders Who Joined Congress

ರಾಜಕೀಯವಾಗಿ ತಮ್ಮನ್ನು ಮುಗಿಸಲು ಆರ್.ಎಸ್.ಎಸ್ 'ವಿಘ್ನಸಂತೋಷಿ'ಗಳು ಮಾಡುತ್ತಿರುವ ಸಂಚನ್ನು ಅರಿಯದ ಕರ್ನಾಟಕ ರಾಜ್ಯ ಬಿಜೆಪಿ ಪಕ್ಷವು ಪಕ್ಷದ ಲಿಂಗಾಯತ ನಾಯಕರು, ಕಾಂಗ್ರೆಸ್ ಪಕ್ಷ ಲಿಂಗಾಯತ ವಿರೋಧಿ ಎಂಬ ಸುಳ್ಳು ಆರೋಪ ಮಾಡುತ್ತಾ ಕಾಲ ಕಳೆಯುತ್ತಿರುವುದು ವಿಷಾದನೀಯ ಎಂದು ಅವರು ಲೇವಡಿ ಮಾಡಿದ್ದಾರೆ.

ಯಾರೇ ಸೋತರು ಲಿಂಗಾಯತ ನಾಯಕರೇ ಸೋತಂತೆ

ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸುವ ಹೊಣೆಯನ್ನು ಈಗ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಮೇಲೆ ಹೊರಿಸಲಾಗಿದೆ. ಇವರ ಕಾದಾಟದಲ್ಲಿ ಯಾರೇ ಸೋತರು ಒಬ್ಬ ಲಿಂಗಾಯತನ ಸೋಲಾಗುತ್ತದಲ್ಲವೇ?.

ಒಲ್ಲೆನೆಂದರೂ ಬಲತ್ಕಾರವಾಗಿ ವರುಣಾ ಕ್ಷೇತ್ರದಲ್ಲಿ ವಿ.ಸೋಮಣ್ಣ ಎಂಬ ಲಿಂಗಾಯತ ನಾಯಕನನ್ನು ಅಭ್ಯರ್ಥಿಯನ್ನಾಗಿ ಮಾಡಲಾಗಿದೆ. ಅಲ್ಲದೇ ಲಕ್ಷ್ಮಣ ಸವದಿ, ಸೊಗಡು ಶಿವಣ್ಣ, ಸಂಜಯ್ ಪಾಟೀಲ್ ಮೊದಲಾದ ಲಿಂಗಾಯತ ನಾಯಕರಿಗೆ ಟಿಕೆಟ್ ನಿರಾಕರಿಸಿ ಅವರನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಿದ್ದು ಕೂಡಾ ಆರ್ಎಸ್ಎಸ್‌ನ 'ವಿಘ್ನ ಸಂತೋಷಿ'ಗಳೇ ಎಂದರು.

ಹುನ್ನಾರದ ರೂವಾರಿ ಕಾಂಗ್ರೆಸ್ ಅಲ್ಲ: ಸಿದ್ದು

ರಾಜ್ಯದಲ್ಲಿ ನೆಲೆಯೇ ಇಲ್ಲದಿದ್ದ ಬಿಜೆಪಿ ಪಕ್ಷವನ್ನು ಅಧಿಕಾರದ ಪೀಠದಲ್ಲಿ ತಂದು ಕುಳ್ಳಿರಿಸಿದ ಲಿಂಗಾಯತ ನಾಯಕ ಬಿ.ಎಸ್.ಯಡಿಯೂರಪ್ಪನವರನ್ನು ಜೈಲಿಗೆ ಕಳಿಸಿದ್ದು, ಜಗದೀಶ್ ಶೆಟ್ಟರ್ ಅವರ ರಾಜಕೀಯ ಜೀವನವನ್ನು ಮುಗಿಸುವ ಹುನ್ನಾರದ ರೂವಾರಿಗಳು ಕೂಡಾ ಇದೇ 'ವಿಘ್ನ ಸಂತೋಷಿ' ಗಳು. ಅದಕ್ಕೆ ಕಾಂಗ್ರೆಸ್ ಅಲ್ಲ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕ ಬಿಜೆಪಿಯಲ್ಲಿರುವ ಲಿಂಗಾಯತ ಸಮುದಾಯದ ನಾಯಕರು ಕಾಂಗ್ರೆಸ್ ಪಕ್ಷದ ವಿರುದ್ಧ ಮಾಡುತ್ತಿರುವ ಆರೋಪಗಳನ್ನು ನೋಡಿದಾಗ 'ಹಾವಿನ ಹೆಡೆಯ ಮೇಲಿನ ಕಪ್ಪೆ ಹಾರುವ ನೊಣಕ್ಕೆ ಆಶಿಸಿದಂತೆ...' ಎಂಬ ಬಸವಣ್ಣನವರ ವಚನ ನೆನಪಾಗುತ್ತಿದೆ ಎಂದು ಅವರು ಮಾರ್ಮಿಕವಾಗಿ ಹೇಳಿದರು.

ವಿಘ್ನ ಸಂತೋಷಿಗಳ ಪ್ರಯೋಗದಿಂದ ಲಿಂಗಾಯತ ನಾಯಕರ ತಲೆದಂಡ

ಬದಲಾವಣೆಯ ಹೆಸರಿನಲ್ಲಿ ಕರ್ನಾಟಕ ಬಿಜೆಪಿ ಪಕ್ಷದೊಳಗಿನ ಆರ್ಎಸ್ಎಸ್ 'ವಿಘ್ನ ಸಂತೋಷಿ'ಗಳು ಮಾಡುತ್ತಿರುವ ಈ ಎಲ್ಲ ಪ್ರಯೋಗಗಳು ಅಂತಿಮವಾಗಿ ಪಕ್ಷದೊಳಗಿನ ಹಿರಿಯ ಮತ್ತು ಪ್ರಭಾವಿ ಲಿಂಗಾಯತ ನಾಯಕರ ತಲೆದಂಡ ತೆಗೆದುಕೊಳ್ಳುವ ರಾಜಕೀಯ ಕುತಂತ್ರವೇ ಆಗಿದೆ.

Siddaramaiah Tweet Reaction About BJP Decision To Defeat Lingayat Leaders Who Joined Congress

ರಾಜ್ಯ ಪಕ್ಷದಲ್ಲಿರುವ ಲಿಂಗಾಯತ ನಾಯಕರು ತಮ್ಮ ನಿಜವಾದ ಶತ್ರುಗಳು ಯಾರೆಂದು ಅರ್ಥಮಾಡಿಕೊಳ್ಳದೆ, ವೃಥಾ ಕಾಂಗ್ರೆಸ್ ನಾಯಕರ ಮೇಲೆ ಆರೋಪ ಮಾಡುವುದರಲ್ಲಿ ತಲ್ಲೀನರಾಗಿದ್ದಾರೆ. ಇದು ಕೂಡಾ ಆರ್ಎಸ್ಎಸ್ ನ 'ವಿಘ್ನ ಸಂತೋಷಿ'ಗಳ ಹುನ್ನಾರವೇ ಆಗಿದೆ

ಈಗಲೂ ಕಾಲ ಮಿಂಚಿಲ್ಲ ಕರ್ನಾಟಕ ಬಿಜೆಪಿ ಪಕ್ಷದೊಳಗಿನ ಲಿಂಗಾಯತ ನಾಯಕರು ಕಲ್ಪಿತ ಶತ್ರುವಿನ ಮೇಲೆ ಆರೋಪ ಮಾಡುವುದನ್ನು ನಿಲ್ಲಿಸಬೇಕು. ತಮ್ಮ ನಿಜವಾದ ಶತ್ರುಗಳನ್ನು ಗುರುತಿಸಿ ಹೋರಾಟ ನಡೆಸಬೇಕೆಂದು ಮನವಿ ಮಾಡುತ್ತೇನೆ. ಇದನ್ನು ಲಿಂಗಾಯತ-ವೀರಶೈವ ಸಮುದಾಯ ಕೂಡಾ ಅರ್ಥಮಾಡಿಕೊಳ್ಳಬೇಕಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+