'AnswerMadiModi' ಹ್ಯಾಷ್ ಟ್ಯಾಗ್ ಮೂಲಕ ಸಿದ್ದರಾಮಯ್ಯ ಟ್ವೀಟಾಸ್ತ್ರ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ಇನ್ನೇನು ಮೂರೇ ದಿನ ಬಾಕಿ ಇದೆ. ಈ ಮದ್ಯೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. 'AnswerMadiModi' ಹ್ಯಾಷ್ ಟ್ಯಾಗ್ ಆರಂಭಿಸಿರುವ ಸಿದ್ದರಾಮಯ್ಯ ಅವರು, ಪ್ರಧಾನಿ ಮೋದಿಯವರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.

'ಪ್ರಧಾನ ಮಂತ್ರಿಯವರು ಕರ್ನಾಟಕದಲ್ಲಿಯೇ ಠಿಕಾಣಿ ಹೂಡಿ ಬಾಯ್ತುಂಬಾ ಮಾತನಾಡುತ್ತಿದ್ದಾರೆ. ಆದರೆ ಇದೇ ಕರ್ನಾಟಕದ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರು ಪ್ರಧಾನಿಗಳಿಗೇ ಪತ್ರ ಬರೆಯುವಷ್ಟು ಇಲ್ಲಿ ಭ್ರಷ್ಟಾಚಾರ ತಾರಕಕ್ಕೇರಿದೆ. ಇದಕ್ಕೆಲ್ಲ ತಾರು ಹೊಣೆ' ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

Siddaramaiah tweeted through the hashtag AnswerMadiModi

'ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ಬೆಂಗಳೂರು ನಗರ ಉದ್ಯಾನಗಳ ನಗರ, ಸಿಲಿಕಾನ್ ಸಿಟಿ, ಐಟಿ-ಬಿಟಿ ರಾಜಧಾನಿ, ಸ್ಟಾರ್ಟ್‌ಅಪ್ ರಾಜಧಾನಿ ಎಂದೆಲ್ಲ ಖ್ಯಾತಿ ಗಳಿಸಿತ್ತು. ಬಿಜೆಪಿ ಸರ್ಕಾರದ ಕಾಲದಲ್ಲಿ ಗುಂಡಿಬಿದ್ದ ರಸ್ತೆಗಳು, ನೆರೆನೀರಿನಲ್ಲಿ ಮುಳುಗುವ ಮನೆಗಳು, ಅಪರಾಧಿಗಳ ಜಗತ್ತಿನ ರಾಜಧಾನಿ ಎಂಬ ಕುಖ್ಯಾತಿ ಗಳಿಸಿದೆ. ಇದಕ್ಕೆ ಯಾರು ಹೊಣೆ' ಎಂದು ಕಾಂಗ್ರೆಸ್ ಖಡಕ್ ಪ್ರಶ್ನೆ ಮಾಡಿದೆ.

ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸಲು ರೂಪಿಸಲಾಗಿರುವ ಮೇಕೆದಾಟು ಯೋಜನೆಗೆ ಅನುಮತಿ ನೀಡವೆ ಇರುವ ಕಾರಣದಿಂದಾಗಿ ನಗರದಲ್ಲಿ ಕುಡಿಯುವ ನೀರಿನ ಕೊರತೆ ಹೆಚ್ಚಾಗುತ್ತಿದೆ. ನಗರದ ಜನ ಕುಡಿಯುವ ನೀರಿಗಾಗಿ ಖಾಸಗಿ ಬೋರ್ ವೆಲ್ ಮತ್ತು ಟ್ಯಾಂಕರ್ ನೀರನ್ನು ಬಳಸುತ್ತಿದ್ದಾರೆ. ಇದಕ್ಕೆಲ್ಲ ಯಾರು ಹೊಣೆ ಪ್ರಧಾನಿ ಮೋದಿ ಅವರೆ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಶೇಕಡಾ 48ರಷ್ಟು ವಾಹನದಟ್ಟಣೆಯ ಪ್ರಮಾಣದಿಂದಾಗಿ ಬೆಂಗಳೂರು ನಗರ ದೇಶದಲ್ಲಿ ಎರಡನೇ ಅತ್ಯಂತ ಹೆಚ್ಚು ವಾಹನ ದಟ್ಟಣೆಯ ನಗರ ಎಂಬ ಕುಖ್ಯಾತಿಗೆ ಒಳಪಟ್ಟಿದೆ. ಇದರಿಂದಾಗಿ ನಗರವಾಸಿಗಳು ಮನೆಗಿಂತ ಹೆಚ್ಚಿನ ಸಮಯ ರಸ್ತೆಯಲ್ಲಿ ಕಳೆಯುವಂತಾಗಿದೆ. ಎನ್‌.ಸಿ.ಆರ್.ಬಿ ವರದಿ ಪ್ರಕಾರ ದೇಶದ ಮೆಟ್ರೋಪಾಲಿಟನ್ ನಗರಗಳಲ್ಲಿ ನಡೆಯುವ ಅಪರಾಧ ಪೈಕಿ 72% ಕಳ್ಳತನಗಳು ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಕಾರಣ ಬೆಂಗಳೂರು ನಗರ ಈಗ ಅಪರಾಧಗಳ ತಾಣವಾಗಿದೆ ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಅಪರಾಧ ಸಂಖ್ಯೆಗಳ ಹೆಚ್ಚಳ, ಕುಸಿದುಬಿದ್ದಿರುವ ಮೂಲಸೌಕರ್ಯ ವ್ಯವಸ್ಥೆ ಮತ್ತು ಗುಂಡಿಬಿದ್ದ ರಸ್ತೆಗಳಿಂದಾಗಿ ಜಾಗತಿಕ ವಾಸಯೋಗ್ಯ ಸೂಚ್ಯಂಕದಲ್ಲಿ ಬೆಂಗಳೂರು ಕನಿಷ್ಠ ಶ್ರೇಣಿಗೆ ತಲುಪಿದೆ. ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ಬೆಂಗಳೂರು ನಗರ ಉದ್ಯಮಶೀಲರ ಆಸಕ್ತಿಯ ನಂಬರ್ ಒನ್ ತಾಣವಾಗಿತ್ತು ಬಿಜೆಪಿ ಸರ್ಕಾರದ ಕಾಲದಲ್ಲಿ ಬೆಂಗಲೂರು ನಗರ ಉದ್ಯಮಶೀಲರ ಆಸಕ್ತಿಯ ನಗರಗಳ ಪಟ್ಟಿಯಲ್ಲಿ ಹದಿನೇಳನೇ ಸ್ಥಾನಕ್ಕೆ ಕುಸಿದಿದೆ. ಇದಕ್ಕೆಲ್ಲಾ ಯಾರು ಹೊಣೆ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಕೇವಲ ಗುಂಡಿಬಿದ್ದ ರಸ್ತೆಗಳಿಂದಾಗಿ 31 ಮಂದಿಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಬಿಬಿಎಂಪಿ ಕೇವಲ ರಸ್ತೆ ಗುಂಡಿಮುಚ್ಚಲು ರೂ.7121 ಖರ್ಚು ಮಾಡಿದರೂ ಇನ್ನೂ ನೂರಾರು ಹಳೆಯ ಗುಂಡಿಗಳು ಉಳಿದಿವೆ, ಹೊಸ ಗುಂಡಿಗಳು ತಯಾರಾಗುತ್ತಿವೆ ಎಂದು ಕೇಳಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೇಲಿನ ಸೌರ್ಜನ್ಯದ ಪ್ರಮಾಣ 2021ರಲ್ಲಿ ಶೇಕಡಾ 18ರಷ್ಟು ಹೆಚ್ಚಾಗಿದೆ. ಎನ್‌ಡಿ.ಪಿ.ಎಸ್ ಕಾಯ್ದೆಯಡಿ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆ 1493% ರಷ್ಟು ಹೆಚ್ಚಾಗಿವೆ. 2021ರಲ್ಲಿ ಇಮ್ಮೊರಲ್ ಟ್ರಾಪಿಕಿಂಗ್ ಶೇಕಡಾ 61ರಷ್ಟು ಹೆಚ್ಚಾಗಿದೆ ಇದಕ್ಕೆಲ್ಲ ಯಾರು ಹೊಣೆ ಪ್ರಧಾನಿ ಮೋದಿ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಒಟ್ಟಿನಲ್ಲಿ ಹಲವಾರು ಪ್ರಶ್ನೆಗಳನ್ನು ಮಾಡುವ ಮೂಲಕ ಬಿಜೆಪಿ ಸರ್ಕಾರದ ಭ್ರಷ್ಟಾಚಾರಗಳನ್ನು ಬಯಲಿಗೆಳೆದು ಜನರಿಗೆ ಮನವರಿಕೆ ಮಾಡಿದ್ದಾರೆ. ಈ ಪ್ರಶ್ನೆಗಳಿಗೆ ಉತ್ತರ ಸಿಗುವುದು ಅಷ್ಟಕಷ್ಟೇ ಆದರೆ ಜನರ ಮೇಲೆ ಈ ಪ್ರಶ್ನೆಗಳು ಪ್ರಭಾವ ಬೀರುತ್ತಾ ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+