ಗೆಲುವಿನಲ್ಲಿ ಮೈಮರೆಯಬೇಡಿ, ಇದು ಹೋರಾಟದ ಕಾಲ: ಸಿದ್ದರಾಮಯ್ಯ ಎಚ್ಚರಿಕೆ

Recommended Video

      Assembly election 2018 : ಗೆಲುವಿನಲ್ಲಿ ಮೈಮರೆಯಬೇಡಿ, ಇದು ಹೋರಾಟದ ಕಾಲ: ಸಿದ್ದರಾಮಯ್ಯ ಎಚ್ಚರಿಕೆ

      ಬೆಂಗಳೂರು, ಡಿಸೆಂಬರ್ 11: ಪಂಚ ರಾಜ್ಯ ಚುನಾವಣೆ ಕಾಂಗ್ರೆಸ್ ನಾಯಕರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ. ಎಲ್ಲ ಕಾಂಗ್ರೆಸ್ ಮುಖಂಡರು ಪಂಚ ರಾಜ್ಯ ತೀರ್ಪನ್ನು ಸ್ವಾಗತಿಸುತ್ತಿದ್ದಾರೆ.

      ವಿದೇಶ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರು ಸಹ ಈ ವಿಜಯದ ಬಗ್ಗೆ ಸಂತಸವನ್ನುವನ್ನು ಟ್ವೀಟ್‌ ಮೂಲಕ ಹಂಚಿಕೊಳ್ಳುತ್ತಿದ್ದು, ಪಂಚ ರಾಜ್ಯ ಚುನಾವಣಾ ಫಲಿತಾಂಶ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದಿದ್ದಾರೆ.

      ದೇಶದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಪ್ರಚಾರದ ಗಾಳಿಪಟಗಳು ನೆಲಕ್ಕೆ ಉದುರುತ್ತಿವೆ ಎಂದು ಸಿದ್ದರಾಮಯ್ಯ ಅವರು ಬಿಜೆಪಿಯ ಕಾಲೆಳೆದಿದ್ದಾರೆ.

      Siddaramaiah tweets and said people lost faith in BJP

      ಆದರೆ ಫಲಿತಾಂಶದ ಬಗ್ಗೆ ಅತಿಯಾಗಿ ಸಂತಸ ಪಡುವ ಸಮಯ ಇದಲ್ಲ ಎಂಬುದನ್ನೂ ಎಚ್ಚರಿಸಿರುವ ಅವರು, 'ಇದು ಗೆದ್ದು ಬೀಗುವ ಸಮಯ ಅಲ್ಲ. ಸೈದ್ಧಾಂತಿಕವಾಗಿ ಗಟ್ಟಿಗೊಂಡು ನೆಲದಲ್ಲಿ ಕಾಲೂರಿ ಹೋರಾಟದಲ್ಲಿ ತೊಡಗಬೇಕಾದ ಕಾಲ' ಎಂದಿದ್ದಾರೆ.

      ಸಿದ್ದರಾಮಯ್ಯ ಅವರು ನಿನ್ನೆಯಷ್ಟೆ ಮಲೇಷ್ಯಾಕ್ಕೆ ತೆರಳಿದ್ದಾರೆ. ಆದರೆ ಪ್ರವಾಸದ ನಡುವೆಯೂ ಚುನಾವಣೆ ಫಲಿತಾಂಶದ ಮೇಲೆ ನಿಗಾ ಇರಿಸಿ ತಮ್ಮ ಫಲಿತಾಂಶದ ಬಗ್ಗೆ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಆರ್‌ಬಿಐ ಗವರ್ನರ್‌ ಊರ್ಜಿತ್ ಪಟೇಲ್ ಅವರ ರಾಜೀನಾಮೆ ಬಗ್ಗೆ ಕೂಡ ಅವರು ನಿನ್ನೆ ಟ್ವೀಟ್‌ ಮಾಡಿ ಮೋದಿ ಅವರಿಗೆ ಪ್ರಶ್ನೆಗಳನ್ನು ಕೇಳಿದ್ದರು.

      ಪಂಚ ರಾಜ್ಯಗಳಲ್ಲಿ ಮಿಜೋರಂ ಹಾಗೂ ತೆಲಂಗಾಣದಲ್ಲಿ ಕಾಂಗ್ರೆಸ್‌ ಹಿನ್ನಡೆ ಅನುಭವಿಸಿದೆ. ಆದರೆ ಪ್ರಮುಖ ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಮೂರೂ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯುವ ಸಾಧ್ಯತೆ ದಟ್ಟವಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+