ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಿನಕ್ಕೊಂದು ದೇಶ ಸುತ್ತುವ ಪ್ರಧಾನಿ ಎಲ್ಲಿದ್ದಾರೆ?; ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 15 : "ಪ್ರವಾಹ ಪೀಡಿತ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ ನಯಾಪೈಸೆ ನೆರವು ಬಂದಿಲ್ಲ. ರಾಜ್ಯದ ಹೇಡಿ ಸರ್ಕಾರಕ್ಕೆ ಕೇಂದ್ರವನ್ನು ಪ್ರಶ್ನಿಸುವ ಧೈರ್ಯ ಇಲ್ಲ" ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಭಾನುವಾರ ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳನ್ನು ಮಾಡಿದರು. ಅತಿವೃಷ್ಟಿಯಿಂದ ಮನೆ-ತೋಟ-ಗದ್ದೆಯನ್ನು ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹಾವೇರಿ, ಗದಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಐವರು ರೈತರ ಕುಟುಂಬಕ್ಕೆ ಸಂತಾಪಗಳನ್ನು ಸಲ್ಲಿಸಿದರು.

ಪ್ರವಾಹ; ರಾಜ್ಯ ಕೇಳಿದ್ದು ಕೇವಲ 3 ಸಾವಿರ ಕೋಟಿ ಅನುದಾನಪ್ರವಾಹ; ರಾಜ್ಯ ಕೇಳಿದ್ದು ಕೇವಲ 3 ಸಾವಿರ ಕೋಟಿ ಅನುದಾನ

ಇದೇ ರೀತಿ ನೂರಾರು ರೈತರು ಅಸಹಾಯಕರಾಗಿ ಆತ್ಮಹತ್ಯೆಯ ದಾರಿಯಲ್ಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಇದ್ದೂ ಸತ್ತಂತಿವೆ ಎಂದು ಸಿದ್ದರಾಮಯ್ಯ ದೂರಿದರು. ಅತಿವೃಷ್ಟಿ ಪೀಡಿತ ರೈತರನ್ನು ಬ್ಯಾಂಕುಗಳಲ್ಲಿನ ಸಾಲ ಬಾಕಿಗಾಗಿ ನೋಟೀಸ್ ಜಾರಿ ಮಾಡಿ ಕಿರುಕುಳು ನೀಡುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಕರ್ನಾಟಕ ಪ್ರವಾಹ : ನಷ್ಟದ ಲೆಕ್ಕ ಕೊಟ್ಟ ಸರ್ಕಾರಕರ್ನಾಟಕ ಪ್ರವಾಹ : ನಷ್ಟದ ಲೆಕ್ಕ ಕೊಟ್ಟ ಸರ್ಕಾರ

ರಾಜ್ಯ ಸರ್ಕಾರಕ್ಕೇನಾದರೂ ಒಂದಿಷ್ಟು ಮಾನವೀಯತೆ ಎನ್ನುವುದಾದರೂ ಇದ್ದರೆ ಇಂತಹ ಕ್ರೌರ್ಯವನ್ನು ತಕ್ಷಣ ನಿಲ್ಲಿಸಬೇಕು. ರಾಜ್ಯಕ್ಕೆ ಬಂದೆರಗಿದ ಅತಿವೃಷ್ಟಿಯಿಂದ 38 ಸಾವಿರ ಕೋಟಿ ನಷ್ಟವಾಗಿದೆ ಎಂದು ಅಂದಾಜು ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ ಇಲ್ಲಿಯ ವರೆಗೆ ನಯಾಪೈಸೆ ನೆರವು ಬಂದಿಲ್ಲ. ರಾಜ್ಯದ ಹೇಡಿ ಸರ್ಕಾರಕ್ಕೆ ಕೇಂದ್ರವನ್ನು ಪ್ರಶ್ನಿಸುವ ಧೈರ್ಯ ಇಲ್ಲ ಎಂದು ಟೀಕಿಸಿದರು.

ಧಾರವಾಡದ ನೆರೆ ಸಂತ್ರಸ್ತರಿಗೆ ಆಹಾರ ಕಿಟ್‌ಗಳ ಆಸರೆಧಾರವಾಡದ ನೆರೆ ಸಂತ್ರಸ್ತರಿಗೆ ಆಹಾರ ಕಿಟ್‌ಗಳ ಆಸರೆ

ಘಳಿಗೆಗೊಂದು ವೇಷ ಬದಲಿಸುವ ಮೋದಿ

ಘಳಿಗೆಗೊಂದು ವೇಷ ಬದಲಿಸುವ ಮೋದಿ

2009ರಲ್ಲಿ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿದ್ದಾಗ ಸಂಭವಿಸಿದ ಅತಿವೃಷ್ಟಿಯ ಸಂದರ್ಭದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಧಾವಿಸಿ ಬಂದು ಸಮೀಕ್ಷೆ ನಡೆಸಿ ತಕ್ಷಣ ರೂ.1500 ಕೋಟಿ ಪರಿಹಾರ ಘೋಷಿಸಿದ್ದರು.

ಈಗಿನ ಪ್ರಧಾನಿ ಎಲ್ಲಿದ್ದಾರೆ? ದಿನಕ್ಕೊಂದು ದೇಶ ಸುತ್ತುವ, ಘಳಿಗೆಗೊಂದು ವೇಷ ಬದಲಿಸುವ ಈಗಿನ ಪ್ರಧಾನಿಗಳಿಗೆ ಒಂದು ಘಳಿಗೆ ಬಂದು ಸಂತ್ರಸ್ತರ ಗೋಳು ಕೇಳುವ ಕನಿಷ್ಠ ಮಾನವೀಯತೆ ಇಲ್ಲದಿರುವುದು ದುರಂತ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮೌಢ್ಯದಲ್ಲಿ ನಂಬಿಕೆ ಇಲ್ಲ

ಮೌಢ್ಯದಲ್ಲಿ ನಂಬಿಕೆ ಇಲ್ಲ

ನಮ್ಮ ಪ್ರತಿಭಾವಂತ ವಿಜ್ಞಾನಿಗಳು ಹಗಲಿರುಳು ಶ್ರಮಿಸಿ ನಡೆಸಿದ ಚಂದ್ರಯಾನ-2 ಪ್ರಯೋಗ, ನರೇಂದ್ರಮೋದಿ ಹಾಜರು ಹಾಕಿದರೂ ವಿಫಲವಾಯಿತು. ಪ್ರಧಾನಿಗಳು ಅಷ್ಟೇ ಸಮಯವನ್ನು ಅತಿವೃಷ್ಟಿ ಪೀಡಿತ ಪ್ರದೇಶದ ಭೇಟಿಗೂ ನೀಡಿದ್ದರೆ ಪ್ರಾಯಶ್ಚಿತ ಮಾಡಿಕೊಂಡಂತಾಗುತ್ತಿತ್ತು. ಕಾಲ್ಗುಣದಂತಹ ಮೌಢ್ಯದಲ್ಲಿ ನನಗೆ ನಂಬಿಕೆ ಇಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಸರ್ಕಾರಕ್ಕೆ ಇಚ್ಛಾಶಕ್ತಿಯೇ ಇಲ್ಲ

ಸರ್ಕಾರಕ್ಕೆ ಇಚ್ಛಾಶಕ್ತಿಯೇ ಇಲ್ಲ

2009ರಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗಲೇ ಅತಿವೃಷ್ಟಿ ಬಂದೆರಗಿತು. ನಮ್ಮ ಕಾಲದಲ್ಲಿ ನಡೆದ ರೈತರು ಆತ್ಮಹತ್ಯೆಯ ದಾರಿ ಹಿಡಿದಾಗ ತಕ್ಷಣ ಸ್ಪಂದಿಸಿದ ನಮ್ಮ ಸರ್ಕಾರ ಕೃಷಿಭಾಗ್ಯ, ಅನ್ನಭಾಗ್ಯ, ಕ್ಷೀರಧಾರೆಯಂತ ಯೋಜನೆಗಳು ಮತ್ತು ಸೂಕ್ತ ಪರಿಹಾರದ ಮೂಲಕ ನೆರವಾಗಿ ಆತ್ಮಹತ್ಯೆಯ ಸರಣಿಯನ್ನು ತಡೆದಿದ್ದೆವು. ಅಂತಹ ಇಚ್ಛಾಶಕ್ತಿಯೇ ಈ ಸರ್ಕಾರಕ್ಕೆ ಇಲ್ಲ ಎಂದು ದೂರಿದರು.

ಪ್ರಾಣದ ಜೊತೆ ಚೆಲ್ಲಾಟವಾಡಬೇಡಿ

ಪ್ರಾಣದ ಜೊತೆ ಚೆಲ್ಲಾಟವಾಡಬೇಡಿ

ಅತಿವೃಷ್ಠಿ ಪೀಡಿತ ಪ್ರದೇಶಕ್ಕೆ ಪರಿಹಾರಕ್ಕಾಗಿ ಒತ್ತಾಯಿಸಿದಂತೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ. ಕೇಂದ್ರ ಸರ್ಕಾರ ದಿವಾಳಿಯಾಗಿ ಹೋಗಿರುವ ಸೂಚನೆ ಇದು. ಇದು ನಿಜವಲ್ಲದೆ ಇದ್ದರೆ ಮೊದಲು ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು. ದೇಶದ ಜನತೆಯ ಪ್ರಾಣದ ಜೊತೆ ಚೆಲ್ಲಾಟವಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

English summary
Karnataka former chief minister Siddaramaiah alleged that both Central and State government are acting dead. They fail to help farmers who lost crop and house in recent floods.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X