ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಂಟಿಬಿ ಎದೆ ಬಗೆದು ನೋಡೋಕೆ ಆಗುತ್ತದೆಯೇ? : ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಜುಲೈ 12 : 'ನನ್ನ ಎದೆ ಬಗೆದರೆ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ಇರುತ್ತಾರೆ'. ಇದು ವಸತಿ ಸಚಿವ, ಹೊಸಕೋಟೆ ಶಾಸಕ ಎಂ. ಟಿ. ಬಿ. ನಾಗರಾಜ್ ಅವರು ಜನವರಿಯಲ್ಲಿ ನೀಡಿದ್ದ ಹೇಳಿಕೆ. ಈಗ ಜುಲೈ ತಿಂಗಳು ಎಲ್ಲವೂ ಬದಲಾಗಿದೆ. ಎಂ. ಟಿ. ಬಿ. ನಾಗರಾಜ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಆಪ್ತ ಶಿಷ್ಯನ ಈ ನಡೆ ಸಿದ್ದರಾಮಯ್ಯ ಅವರ ಆಕ್ರೋಶಕ್ಕೆ ಕಾರಣವಾಗಿದೆ. 'ಈಗ ನಾನು ಅವರ ಎದೆ ಬಗೆದು ನೋಡೋಕೆ ಆಗುತ್ತದೆಯೇ?' ಎಂದು ಶುಕ್ರವಾರ ಸಿದ್ದರಾಮಯ್ಯ ಅವರು ಮಾಧ್ಯಮಗಳ ಮುಂದೆ ಮಾತನಾಡುವಾಗ ಹೇಳಿದರು.

ಸರ್ಕಾರಕ್ಕೆ ಏನೂ ಆಗಲ್ಲ, ಹೊಸ ಸಿಎಂ ಬರ್ತಾರೆ: ಕಾಂಗ್ರೆಸ್ ಶಾಸಕ ಸರ್ಕಾರಕ್ಕೆ ಏನೂ ಆಗಲ್ಲ, ಹೊಸ ಸಿಎಂ ಬರ್ತಾರೆ: ಕಾಂಗ್ರೆಸ್ ಶಾಸಕ

ವಿಧಾನಸೌಧದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, 'ನನ್ನ ಎದೆ ಬಗೆದ್ರೆ ಸಿದ್ದರಾಮಯ್ಯ ಕಾಣ್ತಾರೆ ಅಂತ ಎಂ. ಟಿ. ಬಿ. ನಾಗರಾಜ್ ಹೇಳ್ತಿದ್ರು. ಅವ್ರೇ ರಾಜೀನಾಮೆ ಕೊಟ್ಟಿದ್ದಾರೆ, ಈಗ ನಾನು ಅವರ ಎದೆ ಬಗೆದು ನೋಡೋಕೆ ಆಗುತ್ತದೆಯೇ?' ಎಂದು ಪ್ರಶ್ನಿಸಿದರು.

Siddaramaiah upset with MTB Nagaraj

'ಶಾಸಕರ ಅನರ್ಹತೆಯ ಬಗ್ಗೆ ಸಭಾಧ್ಯಕ್ಷರು ನಿರ್ಣಯ ಕೈಗೊಳ್ಳುತ್ತಾರೆ. ಎರಡು ಪಕ್ಷಗಳ ನಾಯಕರು ಚರ್ಚಿಸಿ ವಿಶ್ವಾಸಮತ ಯಾಚನೆಯ ನಿರ್ಧಾರಕ್ಕೆ ಬಂದಿದ್ದೇವೆ, ಅದರಲ್ಲಿ ಯಶಸ್ವಿ ಕೂಡ ಆಗುತ್ತೇವೆ' ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

'ನಾವೇನು ಬಿಜೆಪಿಯವರಂತೆ ಅಪರೇಷನ್, ಸರ್ಜರಿ ಇಂತಹ ಹೀನ ರಾಜಕಾರಣ ಮಾಡುವವರಲ್ಲ. ವಿಶ್ವಾಸ ಮತ ಸಾಬೀತು ಹೇಗೆ ಮಾಡುತ್ತೇವೆ? ಎಂದು ಕಾದು ನೋಡಿ ಅಷ್ಟೆ' ಎಂದು ಖಡಕ್ ಆಗಿ ತಿಳಿಸಿದರು.

ಶಿಷ್ಯರ ವಿರುದ್ಧ ಸಿದ್ದರಾಮಯ್ಯ ಸಮರ, ಶಾಸಕರ ಅನರ್ಹತೆಗೆ ಮನವಿ! ಶಿಷ್ಯರ ವಿರುದ್ಧ ಸಿದ್ದರಾಮಯ್ಯ ಸಮರ, ಶಾಸಕರ ಅನರ್ಹತೆಗೆ ಮನವಿ!

'ರಾಜಕಾರಣ ಇರೋದು ಜನ ಸೇವೆ ಮಾಡಲು ಎಂಬುದನ್ನೇ ಕೆಲವರು ಮರೆತಿದ್ದಾರೆ. ಅಂಥವರಿಗೆ ಕಾಲವೇ ತಕ್ಕ ಉತ್ತರ ನೀಡಲಿದೆ. ರೋಷನ್ ಬೇಗ್ ಅವರನ್ನು ಅಮಾನತ್ತು ಮಾಡಲಾಗಿದೆ. ರಾಮಲಿಂಗಾ ರೆಡ್ಡಿ ಅವರ ಜೊತೆ ಮಾತುಕತೆ ನಡೆಸಲಾಗುತ್ತಿದೆ. ಅತೃಪ್ತ ಶಾಸಕರನ್ನ ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ ಸಹ ಮಾಡಿದ್ದೇವೆ' ಎಂದರು.

ಸಿದ್ದರಾಮಯ್ಯ ಮೇಲೆ ಬೇಟೆಯಾಡುತ್ತಿದೆ ಕಣ್ಣು, ಅದೇ ಕಣ್ಣು! ಸಿದ್ದರಾಮಯ್ಯ ಮೇಲೆ ಬೇಟೆಯಾಡುತ್ತಿದೆ ಕಣ್ಣು, ಅದೇ ಕಣ್ಣು!

'ಸಿದ್ದಾಂತವಿಲ್ಲದ ಜೊಳ್ಳುಗಳೆಲ್ಲ ಹಾರಿ ಹೋಗಿದ್ದು, ನಮ್ಮ ಪಕ್ಷ ಹಿಂದಿಗಿಂತ ಈಗ ಮತ್ತಷ್ಟು ಸದೃಢವಾಗಿದೆ ಎಂಬ ಖುಷಿಯಿದೆ' ಎಂದು ಸಿದ್ದರಾಮಯ್ಯ ಹೇಳಿದರು.

English summary
Former Chief Minister Siddaramaiah loyalist and Hoskote MLA M.T.B. Nagaraj resigned for the MLA post. Siddaramaiah upset with M.T.B.Nagaraj.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X