ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿಜಲಿಂಗಪ್ಪರಿಗೆ ಭಾರತರತ್ನ ಪ್ರಶಸ್ತಿ ನೀಡುವಂತೆ ಸಿದ್ದರಾಮಯ್ಯ ಆಗ್ರಹ

By Sachhidananda Acharya
|
Google Oneindia Kannada News

ಬೆಂಗಳೂರು, ಡಿಸೆಂಬರ್ 10: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರಿಗೆ ಭಾರತರತ್ನ ಪ್ರಶಸ್ತಿ ನೀಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದೆಂದು ಸಿದ್ದರಾಮಯ್ಯ ತಿಳಿಸಿದರು.

ಬಿಜೆಪಿ ವಿರುದ್ಧ ಟ್ವಿಟ್ಟರಿನಲ್ಲಿ ತೊಡೆತಟ್ಟಿದ ಸಿದ್ದರಾಮಯ್ಯಬಿಜೆಪಿ ವಿರುದ್ಧ ಟ್ವಿಟ್ಟರಿನಲ್ಲಿ ತೊಡೆತಟ್ಟಿದ ಸಿದ್ದರಾಮಯ್ಯ

ಎಸ್. ನಿಜಲಿಂಗಪ್ಪ ಅವರ 115 ನೇ ಜನ್ಮದಿನಾಚರಣೆಯ ಅಂಗವಾಗಿ ವಿಧಾನ ಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಅವರು ಈ ಭರವಸೆ ನೀಡಿದರು.

Siddaramaiah urges Centre to honour S Nijalingappa with Bharat Ratna

ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಸಲ್ಲಿಸಿದ ಮನವಿಗೆ ಸ್ಪಂದಿಸಿದ ಸಿಎಂ, ದೆಹಲಿ ಪಾರ್ಲಿಮೆಂಟ್ ಆವರಣದಲ್ಲಿ ಅವರ ಪ್ರತಿಮೆಯನ್ನು ಸ್ಥಾಪಿಸುವಂತೆಯೂ ಕೇಂದ್ರ ಸರಕಾರವನ್ನು ಒತ್ತಾಯಿಸಲಾಗುವುದು ಎಂದಿದ್ದಾರೆ.

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, "ನಿಜಲಿಂಗಪ್ಪ ಅವರು ದೇಶ ಕಂಡ ಒಬ್ಬ ಅಪ್ರತಿಮ ನಾಯಕ. ಅವರು ರಾಜಕೀಯ ಜೀವನದಲ್ಲಿ ಕೈ ಮತ್ತು ಬಾಯಿಯನ್ನು ಶುದ್ಧವಾಗಿಟ್ಟುಕೊಂಡಿದ್ದರು," ಎಂದು ಹೇಳಿದರು.

"ರಾಜ್ಯದ ಪ್ರಜೆಗಳ ಸಮಸ್ಯೆಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತಿದ್ದ ನಿಜಲಿಂಗಪ್ಪನವರು ರಾಜ್ಯದಲ್ಲಿ ನೀರಾವರಿಗೆ ನೀಡಿರುವ ಕೊಡುಗೆ ಅಪಾರ. ಅವರು ಬರೀ ರಾಜ್ಯಕ್ಕೆ ಮಾತ್ರ ನಾಯಕರಾಗಿರದೆ ರಾಷ್ಟ್ರಮಟ್ಟದ ನಾಯಕರೂ ಆಗಿದ್ದರು," ಅವರು ಅಭಿಪ್ರಾಯಪಟ್ಟರು.

English summary
Chief Minister of Karnataka Siddaramaiah said the Union government would be asked to give Bharat Ratna award to Nijalingappa, former Chief Minister of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X