ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೊಸ ಬಾಂಬ್: ಸಿಡಿ ಪ್ರಕರಣದಲ್ಲಿ ಡಿಕೆಶಿ ಸಿಕ್ಕಿಸಿಹಾಕಲು ಸಿದ್ದರಾಮಯ್ಯ ತಂತ್ರ!

|
Google Oneindia Kannada News

ಬೆಂಗಳೂರು, ಏಪ್ರಿಲ್ 5: ಬಿಜೆಪಿ ಹಿರಿಯ ಮುಖಂಡ ರಮೇಶ್ ಜಾರಕಿಹೊಳಿಯವರದ್ದು ಎನ್ನಲಾಗುತ್ತಿರುವ ಸಿಡಿ ಪ್ರಕರಣದ ಕಾವು ದಿನದಿಂದ ದಿನಕ್ಕೆ ಕಮ್ಮಿಯಾಗುತ್ತಿದೆ. ವಿಶೇಷ ತನಿಖಾ ದಳ, ಸಂತ್ರಸ್ತೆ ಸಿಡಿಲೇಡಿಯ ವಿಚಾರಣೆಯನ್ನು ನಡೆಸುತ್ತಿದ್ದಾರೆ.

ಇವೆಲ್ಲದರ ನಡುವೆ ರಮೇಶ್ ಜಾರಕಿಹೊಳಿಯವರಿಗೆ ಕೋವಿಡ್ ಸೋಂಕು ಧೃಡಪಟ್ಟಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಾರಕಿಹೊಳಿಯವರು ಸೋಮವಾರ (ಏ 5) ತನಿಖಾ ದಳದ ಮುಂದೆ ವಿಚಾರಣೆಗೆ ಹಾಜರಾಗಬೇಕಿತ್ತು.

ಯುವತಿ 164 ಹೇಳಿಕೆ ರದ್ದುಕೋರಿ ಅರ್ಜಿ, ಎಸ್ಐಟಿಗೆ ಹೈಕೋರ್ಟ್ ಸಮನ್ಸ್ಯುವತಿ 164 ಹೇಳಿಕೆ ರದ್ದುಕೋರಿ ಅರ್ಜಿ, ಎಸ್ಐಟಿಗೆ ಹೈಕೋರ್ಟ್ ಸಮನ್ಸ್

ಇನ್ನು, ಸಿಡಿ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಕೆಸೆರೆರಚಾಟ ಮುಂದುವರಿದಿದೆ. ಬಿಜೆಪಿ ರಾಜ್ಯ ಘಟಕ ಇಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ವಿರುದ್ದ ಗಂಭೀರ ಆರೋಪವನ್ನು ಮಾಡಿದೆ.

 ರಮೇಶ್ ಜಾರಕಿಹೊಳಿಗೆ ಕೋವಿಡ್; ಐಸಿಯುನಲ್ಲಿ ಚಿಕಿತ್ಸೆ ರಮೇಶ್ ಜಾರಕಿಹೊಳಿಗೆ ಕೋವಿಡ್; ಐಸಿಯುನಲ್ಲಿ ಚಿಕಿತ್ಸೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸಿಕ್ಕಿಸಿಹಾಕಲು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ ಎನ್ನುವ ರೀತಿಯಲ್ಲಿ ಟ್ವೀಟ್ ಅನ್ನು ಮಾಡಿದೆ. ಕಾಂಗ್ರೆಸ್ ಮಾಡಿದ್ದ ಸಾಲುಸಾಲು ಟ್ವೀಟ್‌ಗೆ ಪ್ರತಿಯಾಗಿ ಬಿಜೆಪಿ ತಿರುಗೇಟು ನೀಡಿತ್ತು. ಟ್ವೀಟ್ ಮೂಲಕ ಬಿಜೆಪಿ ನೀಡಿದ ಪ್ರತಿಕ್ರಿಯೆ ಟ್ವೀಟ್ ಹೀಗಿದೆ:

ಬಿಜೆಪಿ ಮಾಡಿರುವ ಟ್ವೀಟ್

"ಮೇಟಿ ಪ್ರಕರಣದಲ್ಲಿ ಸಂತ್ರಸ್ಥೆ ಪ್ರಕರಣ ದಾಖಲಿಸಿದರೂ ಎಫ್‌ಐಆರ್ ಕೂಡಾ ಮಾಡಿರಲಿಲ್ಲ, ವಿಚಾರಣೆ ಕೂಡಾ ನಡೆಸಿರಲಿಲ್ಲ. ಈಗ @INCKarnataka ಧ್ವನಿ ಎತ್ತುತ್ತಿರುವುದು ಸಂತ್ರಸ್ಥೆಗಾಗಿ ಅಲ್ಲ, ಸಿದ್ದರಾಮಯ್ಯಗಾಗಿ. @DKShivakumar ಸಿಕ್ಕಿಸಿ ಹಾಕಲು @siddaramaiah ಪಕ್ಷದ ಅಧಿಕೃತ ಟ್ವಿಟರ್‌ ಖಾತೆ ಬಳಸಿಕೊಳ್ಳುತ್ತಿದ್ದಾರೆ". #DKSvsSiddu ಇದು ಬಿಜೆಪಿ ಮಾಡಿರುವ ಟ್ವೀಟ್.

 ರಮೇಶ್ ಜಾರಕಿಹೊಳಿಯ ಅತ್ಯಾಚಾರ ಪ್ರಕರಣ

ರಮೇಶ್ ಜಾರಕಿಹೊಳಿಯ ಅತ್ಯಾಚಾರ ಪ್ರಕರಣ

"ರಮೇಶ್ ಜಾರಕಿಹೊಳಿಯ ಅತ್ಯಾಚಾರ ಪ್ರಕರಣವೊಂದೇ ಸಾಕು ಬಿಜೆಪಿ ಆಡಳಿತದ ನಿಜಬಣ್ಣ ತಿಳಿಯಲು. ದೂರು ನೀಡಿದ ಸಂತ್ರಸ್ತೆಯನ್ನು ಆರೋಪಿಯಂತೆ ಸತತವಾಗಿ ವಿಚಾರಣೆ ನಡೆಸಲಾಗುತ್ತಿದೆ. ಅತ್ಯಾಚಾರ ಆರೋಪಿಯನ್ನು ರಾಜಮರ್ಯಾದೆಯಲ್ಲಿ ನೆಪಮಾತ್ರದ ವಿಚಾರಣೆ ನಡೆಸಲಾಗಿದೆ" ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು.

 ಚುನಾವಣಾ ಪ್ರಚಾರಕ್ಕೆ ಸ್ವತಃ ಮುಖ್ಯಮಂತ್ರಿ ಕರೆಯುತ್ತಾರೆ

ಚುನಾವಣಾ ಪ್ರಚಾರಕ್ಕೆ ಸ್ವತಃ ಮುಖ್ಯಮಂತ್ರಿ ಕರೆಯುತ್ತಾರೆ

"ಆರೋಪಿಯನ್ನು ಬಂಧಿಸದೇ ಚುನಾವಣಾ ಪ್ರಚಾರಕ್ಕೆ ಸ್ವತಃ ಮುಖ್ಯಮಂತ್ರಿ ಕರೆಯುತ್ತಾರೆ. ಸ್ವತಃ ಸಿಎಂ ತನಿಖೆ ನಡೆಸದೆ ಅವರದು ತಪ್ಪಿಲ್ಲ ಎಂದು ಕ್ಲೀನ್ ಚಿಟ್ ನೀಡುತ್ತಾರೆ. ನಾವೆಲ್ಲ ಆರೋಪಿ ಬೆಂಬಲಕ್ಕಿದ್ದೇವೆ ಎಂದು ಹಲವು ಸಚಿವರು ಹೇಳುತ್ತಾರೆ. ಇದೆಲ್ಲವೂ ಆರೋಪಿಯನ್ನು ಬಿಜೆಪಿ ರಕ್ಷಿಸುತ್ತಿದೆ ಎನ್ನಲು ನಿದರ್ಶನ"ಎಂದು ಸಿಎಂ ವಿರುದ್ದ ಕೆಪಿಸಿಸಿ ಟ್ವೀಟ್ ಮಾಡಿತ್ತು.

Recommended Video

ಸಾರಿಗೆ ಇಲಾಖೆ ಸಾಕಷ್ಟು ನಷ್ಟ ಅನುಭವಿಸಿದೆ, ಉಪಚುನಾವಣೆ ನಂತ್ರ ವೇತನ ಹೆಚ್ಚಿಸಲು ಸಿದ್ಧ' ಪ್ರತಿಭಟನೆ ಕೈಬಿಡುವಂತೆ ಲಕ್ಷ್ಮಣ ಸವದಿ ಮನವಿ | Oneindia Kannada
 ತಮ್ಮಲ್ಲಿ ಅದಕ್ಕಿರುವ ಸಾಕ್ಷ್ಯಗಳೇನು

ತಮ್ಮಲ್ಲಿ ಅದಕ್ಕಿರುವ ಸಾಕ್ಷ್ಯಗಳೇನು

#BJPprotectingRapists ಎನ್ನುವ ಹ್ಯಾಷ್ ಟ್ಯಾಗ್ ಹಾಕಿ, "ಮುಖ್ಯಮಂತ್ರಿ @BSYBJP ಅವರೇ, ಅತ್ಯಾಚಾರ ಆರೋಪಿಯದ್ದು ತಪ್ಪಿಲ್ಲ, ಷಡ್ಯಂತ್ರ ನಡೆಸಲಾಗಿದೆ ಎಂದು ಹೇಳಿದ್ದೀರಿ, ನಿಮಗೆ ಹೇಗೆ ಅದು ಷಡ್ಯಂತ್ರ ಎನಿಸಿತು, ತಮ್ಮಲ್ಲಿ ಅದಕ್ಕಿರುವ ಸಾಕ್ಷ್ಯಗಳೇನು ಎನ್ನುವುದನ್ನ ತಾವೂ SIT ಮುಂದೆ ಹಾಜರಾಗಿ ತಿಳಿಸಿಬಿಡಿ ಸ್ವಾಮಿ! ಪ್ರಕರಣ ಇತ್ಯರ್ಥವಾಗಿಬಿಡಲಿ!"ಎಂದು ಕೆಪಿಸಿಸಿ, ಬಿಜೆಪಿ ಕಾಲೆಳೆದಿತ್ತು.

English summary
Opposition Leader Siddaramaiah Using KPCC Twitter Handle to Give A Trouble To D K Shivakumar, Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X