ಜನಾರ್ದನ ಹೋಟೆಲ್‌ನಲ್ಲಿ ಬಿಸಿ-ಬಿಸಿ ದೋಸೆ ಸವಿದ ಸಿದ್ದರಾಮಯ್ಯ
Recommended Video

ಬೆಂಗಳೂರು, ಅಕ್ಟೋಬರ್ 10 : ಮೂರು ಲೋಕಸಭೆ, ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದ್ದು ಕಾಂಗ್ರೆಸ್ ಪಕ್ಷದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ಇದರ ನಡುವೆಯೇ ಸಿದ್ದರಾಮಯ್ಯ ಮತ್ತು ಇತರ ನಾಯಕರು ಜನಾರ್ದನ ಹೋಟೆಲ್‌ನಲ್ಲಿ ದೋಸೆ ಸವಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ಮುಂತಾದವರು ಮಂಗಳವಾರ ರಾತ್ರಿ ಶಿವಾನಂದ ಸರ್ಕಲ್ ಬಳಿ ಇರುವ ಜನಾರ್ದನ ಹೋಟೆಲ್‌ನಲ್ಲಿ ದೋಸೆ ತಿಂದರು.
ಜನಾರ್ದನ ಹೋಟೆಲ್ ಸಿದ್ದರಾಮಯ್ಯ ಅವರ ಬಹಳ ಇಷ್ಟದ ಹೋಟೆಲ್. ಮುಖ್ಯಮಂತ್ರಿಯಾಗಿದ್ದಾಗಲೂ ಅಲ್ಲಿಗೆ ಆಗಾಗ ಭೇಟಿ ನೀಡುತ್ತಿದ್ದರು. ಹೋಟೆಲ್‌ನಲ್ಲಿ ಮನಸಾಲೆ ದೋಸೆ ತಿಂದು, ಕಾಫಿ ಕುಡಿದು ಸಿಬ್ಬಂದಿಗಳ ಜೊತೆ ಅವರು ಮಾತುಕತೆಯನ್ನುನಡೆಸಿದರು.
ದೋಸೆ ತಿಂದ ಬಳಿಕ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಜೊತೆ ನಾಯಕರು ಸಭೆ ನಡೆಸಿದರು. ಶಿವಮೊಗ್ಗ, ಬಳ್ಳಾರಿ ಮತ್ತು ಮಂಡ್ಯ ಕ್ಷೇತ್ರದ ಉಪ ಚುನಾವಣೆ, ರಾಮನಗರ, ಜಮಖಂಡಿ ವಿಧಾನಸಭೆ ಚುನಾವಣೆ ಕುರಿತು ಚರ್ಚೆ ನಡೆಸಿದರು.

ಸರಣಿ ಸಭೆಗಳು
ಉಪ ಚುನಾವಣೆ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬೆಂಗಳೂರಿಗೆ ಬಂದಿದ್ದಾರೆ. ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಸರಣಿ ಸಭೆಗಳು ನಡೆದವು. ಎಲ್ಲಾ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸಿದ್ದರಾಮಯ್ಯ ಅವರು ಜನಾರ್ದನ ಹೋಟೆಲ್‌ನಲ್ಲಿ ದೋಸೆ ಸವಿದರು.

ಮಸಾಲೆ ದೋಸೆ, ಈರುಳ್ಳಿ ದೋಸೆ
ಕೆ.ಸಿ.ವೇಣುಗೋಪಾಲ್, ಡ್ಯಾನಿಷ್ ಅಲಿ ಸೇರಿದಂತೆ ಹಲವು ನಾಯಕರು ಸಿದ್ದರಾಮಯ್ಯ ಅವರು ಜೊತೆಗಿದ್ದರು. ಹೋಟೆಲ್‌ನಲ್ಲಿ ಮಸಾಲೆ ದೋಸೆ ಸವಿದ ಸಿದ್ದರಾಮಯ್ಯ ಅವರು ಕಾಫಿ ಕುಡಿದರು. ದಿನೇಶ್ ಗುಂಡೂರಾವ್, ವೇಣುಗೋಪಾಲ್ ಅವರು ಸಹ ದೋಸೆ ತಿಂದರು.

ಸಿದ್ದರಾಮಯ್ಯ ಇಷ್ಟದ ಹೋಟೆಲ್
ಜನಾರ್ದನ ಹೋಟೆಲ್ ಸಿದ್ದರಾಮಯ್ಯ ಅವರ ಇಷ್ಟದ ಹೋಟೆಲ್‌ಗಳಲ್ಲಿ ಒಂದು. ಹಲವಾರು ವರ್ಷಗಳಿಂದ ಅವರು ಅಲ್ಲಿಗೆ ಭೇಟಿ ನೀಡುತ್ತಿದ್ದಾರೆ. ಅಲ್ಲಿನ ಸಿಬ್ಬಂದಿಗಳ ಪರಿಚಯವೂ ಅವರಿಗೆ ಚೆನ್ನಾಗಿ ಇದೆ. ಮುಖ್ಯಮಂತ್ರಿಯಾಗಿದ್ದಾಗಲೂ ಹಲವು ಬಾರಿ ಹೋಟೆಲ್‌ಗೆ ಭೇಟಿ ನೀಡಿದ್ದರು.

ಜನವರಿಯಲ್ಲಿ ಬಂದಿದ್ದರು
2018ರ ಜನವರಿ 26ರಂದು ಸಿದ್ದರಾಮಯ್ಯ ಅವರು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಜನಾರ್ದನ ಹೋಟೆಲ್‌ಗೆ ಭೇಟಿ ನೀಡಿದ್ದರು. ಆಗ ಅವರು ಮುಖ್ಯಮಂತ್ರಿಯಾಗಿದ್ದರು. ಈಗ ಮಾಜಿ ಮುಖ್ಯಮಂತ್ರಿಯಾಗಿ ಭೇಟಿ ನೀಡಿದ್ದಾರೆ.
|
ದೋಸೆ ಸವಿದ ಕ್ಷಣಗಳು
ಸಿದ್ದರಾಮಯ್ಯ ಅವರು ದೋಸೆ ಸವಿದ ಬಗ್ಗೆ ಟ್ವೀಟ್ ಮಾಡಿದ್ದಾರೆ












Click it and Unblock the Notifications