ಕಾಂಗ್ರೆಸ್‌ ಗೆದ್ದರೆ ಸಿಎಂ ಯಾರು? ಒಕ್ಕಲಿಗರ ಬೆಂಬಲದಿಂದ ಟ್ರಬಲ್‌ ಶೂಟರ್‌ಗೆ ದಕ್ಕಲಿದೆಯೇ ಸಿಎಂ ಸ್ಥಾನ? ಹೀಗೊಂದು ವಿಶ್ಲೇಷಣೆ

ಬೆಂಗಳೂರು, ಮೇ 11: ರಾಜ್ಯ ವಿಧಾನಸಭೆ ಚುನಾವಣೆ ಮತದಾನಕ್ಕೆ ತೆರೆ ಬೀಳುತ್ತಿದ್ದಂತೆ ಎಕ್ಸಿಟ್‌ ಪೋಲ್‌ ಸಮೀಕ್ಷೆಗಳ ಭರಾಟೆ ಶುರುವಾಗಿದೆ. ರಾಷ್ಟ್ರೀಯ, ಸ್ಥಳೀಯ ಏಜೆನ್ಸಿಗಳಿಂದ ಥರಹೇವಾರಿ ಸಮೀಕ್ಷೆಗಳು ಹೊರಬಿದ್ದಿದ್ದು, ಬಹುತೇಕ ಸಮೀಕ್ಷೆಯಲ್ಲಿ ಕಾಂಗ್ರೆಸ್‌ ಗೆ ಜೈ ಎಂದಿವೆ.

ಈಗಾಗಲೇ ಬಹುತೇಕ ಎಕ್ಸಿಟ್ ಪೋಲ್‌ಗಳಲ್ಲಿ ಕಾಂಗ್ರೆಸ್‌ಗೆ ಮುನ್ನಡೆ ದೊರಕಿದ ಕಾರಣ, ಕಾಂಗ್ರೆಸ್‌ ಪಾಳಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಮುಖ್ಯಮಂತ್ರಿ ಹುದ್ದೆಯ ಮೇಲೆ ಹಲವು ನಾಯಕರು ಕಣ್ಣಿಟ್ಟಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡುವೆ ಮುಖ್ಯಮಂತ್ರಿ ಕುರ್ಚಿಗಾಗಿ ಪೈಪೋಟಿ ನಡೆಯಲಿದೆ.

Siddaramaiah vs DK Shivakumar

ಈ ಕುರಿತು ಇಂಡಿಯಾ ಟುಡೇ ಸಂದರ್ಶನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾತನಾಡಿ, 224 ವಿಧಾನಸಭಾ ಸ್ಥಾನಗಳ ಪೈಕಿ ಸುಮಾರು 120 ಸ್ಥಾನಗಳೊಂದಿಗೆ ದಕ್ಷಿಣ ರಾಜ್ಯದಲ್ಲಿ ಪಕ್ಷವು ಅದ್ಭುತ ಗೆಲುವು ಸಾಧಿಸಲಿದೆ ಎಂದು ಎಕ್ಸಿಟ್ ಪೋಲ್‌ಗಳು ತೋರಿಸಿವೆ. ಅದರಂತೆ ನಾವು 141 ಸ್ಥಾನವನ್ನ ಪಡೆದು ಸರ್ಕಾರವನ್ನ ರಚಿಸುತ್ತೇವೆ ಎಂದು ಹೇಳಿದ್ದಾರೆ.

ಇನ್ನೂ ಕಾಂಗ್ರೆಸ್ ಈ ಬಾರೀ ಚುನಾವಣಾ ಫಲಿತಾಂಶದಲ್ಲಿ ಮ್ಯಾಜಿಕ್‌ ಗಿಂತ ಹೆಚ್ಚು ಸ್ಥಾನ ಗಳಿಸಲಿದೆ ಎಂದು ಕಾಂಗ್ರೆಸ್‌ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ನಲ್ಲಿ ಯಾರು ಮುಖ್ಯಮಂತ್ರಿಯಾಗುತ್ತಾರೆ ಎನ್ನುವ ಪ್ರಶ್ನೆ ಉದ್ಭವಿಸಿದೆ. ಈ ಬಗ್ಗೆ ಡಿ ಕೆ ಶಿವಕುಮಾರ್‌ ಪಕ್ಷದ ಹೈಕಮಾಂಡ್‌ ನಾಯಕರು ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.

Siddaramaiah vs DK Shivakumar

ಈ ಬಾರೀ ಹಳೇ ಮೈಸೂರು ಭಾಗದ ಮೇಲೆ ಕಣ್ಣೀಟ್ಟರುವ ಕಾಂಗ್ರೆಸ್‌ ಹೆಚ್ಚು ಸ್ಥಾನಗಳನ್ನ ಗೆಲ್ಲಲಿದೆ ಎಂದು ಹಲವು ಸಮೀಕ್ಷೆಗಳಿಂದ ತಿಳಿದು ಬಂದಿದ್ದು, ಒಕ್ಕಲಿಗ ಬೆಲ್ಟ್‌ ನಲ್ಲಿ ಕಾಂಗ್ರೆಸ್‌ ಗೆ ಹೆಚ್ಚಿನ ಸ್ಥಾನಗಳು ಬಂದರೇ ಅದಕ್ಕೆ ಮೂಲ ಕಾರಣ ಡಿ ಕೆ ಶಿವಕುಮಾರ್‌ ಆಗಲಿದ್ದಾರೆ ಎನ್ನಲಾಗಿದ್ದು, ಒಕ್ಕಲಿಗ ನಾಯಕರ ಬೆಂಬಲದಿಂದ ಮುಖ್ಯಮಂತ್ರಿ ಸ್ಥಾನವನ್ನ ಕೇಳಬಹುದು ಎನ್ನುವ ಲೆಕ್ಕಾಚಾರಗಳು ಶುರುವಾಗಿದೆ.

ಒಕ್ಕಲಿಗ ಬೆಲ್ಟ್‌ ನಲ್ಲಿ ಕಾಂಗ್ರೆಸ್‌ 23 ರಿಂದ 24 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್‌ ನನಗೆ ಉತ್ತಮ ಸ್ಥಾನಮಾನವನ್ನ ನೀಡಿದ್ದು, ರಾಜ್ಯಾಧ್ಯಕ್ಷರನ್ನಾಗಿ ಮಾಡಿದೆ. ನಾವೆಲ್ಲರೂ ಒಟ್ಟಾಗಿ ಕುಳಿತು ನಿರ್ಧರಿಸುತ್ತೇವೆ ಎಂದು ಶಿವಕುಮಾರ್ ಇಂಡಿಯಾ ಟುಡೇ ಗೆ ತಿಳಿಸಿದ್ದಾರೆ.

sonia-rahul-kharge

ಒಟ್ಟಾರೆಯಾಗಿ ಕರುನಾಡ ಅಧಿಕಾರದ ಗದ್ದುಗೆ ಹಿಡಿಯಲು ಕಾಂಗ್ರೆಸ್‌ , ಬಿಜೆಪಿ ಹಾಗೂ ಜೆಡಿಎಸ್‌ ಹಲವು ಪ್ರಯತ್ನ, ತಂತ್ರ ಪ್ರತಿತಂತ್ರಗಳನ್ನು ನಡೆಸಿದೆ. ಆದರೆ ಹಲವು ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ ಎಂದು ಹೇಳಲಾಗಿದ್ದು, ಸದ್ಯ ಕಾಂಗ್ರೆಸ್‌ ಪಾಳಯದಲ್ಲಿ ಸಿಎಂ ಯಾರು ಎನ್ನುವ ಚರ್ಚೆ ಜೋರಾಗಿದೆ. ಇತ್ತ ಈ ಬಾರೀ ಗೆಲುವು ಸಾಧಿಸಲಿರುವ ಕಾಂಗ್ರೆಸ್‌ ನಾಯಕರನ್ನ ದೂರವಾಣಿ ಮೂಲಕ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಸಂಪರ್ಕಿಸಿದ್ದು, ಪರೋಕ್ಷವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಸಾಥ್‌ ಕೊಡಿ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಈಗಾಗಲೇ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂದು ಸಮೀಕ್ಷೆ ನಡೆಸಿದ್ದು, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನು ಬಹುಜನರು ಆಯ್ಕೆ ಮಾಡಿದ್ದಾರೆ, ಎರಡನೇ ಸ್ಥಾನದಲ್ಲಿ ಬಸವರಾಜ ಬೊಮ್ಮಾಯಿ, ಮೂರನೇ ಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ನಾಲ್ಕನೇ ಸ್ಥಾನದಲ್ಲಿ ಬಿಎಸ್‌ ಯಡಿಯೂರಪ್ಪ ಹಾಗೂ ಐದನೇ ಸ್ಥಾನದಲ್ಲಿ ಡಿಕೆ ಶಿವಕುಮಾರ್‌ ಅವರನ್ನು ಮತದಾರರು ಆಯ್ಕೆ ಮಾಡಿದ್ದಾರೆ ಎಂದು ಸಮೀಕ್ಷೆ ಬಹಿರಂಗಪಡಿಸಿದೆ.

ಇತ್ತ ಕಾಂಗ್ರೆಸ್‌ ನ ಬಹುತೇಕ ನಾಯಕರಿಗೂ ಸಿದ್ದರಾಮಯ್ಯ ಸಿಎಂ ಆಗ್ಬೇಕು ಎನ್ನುವ ಮಾತನ್ನ ಮಾಧ್ಯಮಗಲ ಮೂಲಕ ನೇರವಾಗಿ ಹೇಳಿದ್ದಾರೆ. ಇತ್ತ ಹೈಕಮಾಂಡ್‌ ನಾಯಕರು ಹಾಗೂ ರಾಜ್ಯ ಕಾಂಗ್ರೆಸ್‌ ನಾಯಕರ ಬೆಂಬಲ ಸಿದ್ದರಾಮಯ್ಯ ಅವರಿಗಿದ್ದರೇ, ಈ ಬಾರೀ ಒಕ್ಕಲಗ ಬೆಲ್ಟ್‌ ನಲ್ಲಿ ಗೆಲ್ಲುವ ಅಭ್ಯರ್ಥಿಗಳು ಡಿ ಕೆ ಶಿವಕುಮಾರ್‌ ಬೆಂಬಲಕ್ಕೆ ನಿಲ್ಲಲಿದ್ದಾರೆ. ಆದರೇ ಈ ಬಾರಿ ಡಿ ಕೆ ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ನಡುವೆ ಸಿಎಂ ಖರ್ಚಿಗಾಗಿ ಬಾರೀ ಪೈಪೋಟಿ ನಡೆಯಲಿದ್ದು, ಮೇ 13 ರ ಫಲಿತಾಂಶದ ಬಳಿಕ ಕಾಂಗ್ರೆಸ್‌ ಗೆ ಮತದಾರ ಪ್ರಭು ಜೈ ಎಂದರೇ, ಹೈಕಮಾಂಡ್‌ ಸಿಎಂ ಸ್ಥಾನಕ್ಕೆ ಯಾರಿಗೆ ಮಣೆ ಹಾಕಲಿದೆ ಎಂಬುದನ್ನ ಕಾದುನೋಡ್ಬೇಕಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+