• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಗಣಿ ಹಗರಣ ವಿರೋಧಿ ಹೋರಾಟದ ಮಾದರಿ ಚಳುವಳಿ: ಸಿದ್ದರಾಮಯ್ಯ

|

ಬೆಂಗಳೂರು, ಜು. 16: ರಾಜ್ಯ ಸರ್ಕಾರ ಜನ ವಿರೋಧಿ ಕಾನೂನುಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದು, ಗಣಿ ಹಗರಣಕ್ಕಿಂತ ದೊಡ್ಡ ಹಗರಣಗಳನ್ನು ಕೊರೊನಾ ವೈರಸ್ ಸಂಕಷ್ಟದ ಕಾಲದಲ್ಲಿ ಮಾಡಿದೆ. ಬಳ್ಳಾರಿ ಗಣಿ ಹಗರಣ ವಿರೋಧಿಸಿ ಮಾಡಿದ್ದ ಹೋರಾಟದ ಮಾದರಿಯಲ್ಲಿಯೇ ರಾಜ್ಯ ಸರ್ಕಾರದ ವಿರುದ್ಧ ಹಳ್ಳಿ-ಹಳ್ಳಿಗಳಲ್ಲಿ ಚಳುವಳಿ ಮಾಡುತ್ತೇವೆ ಎಂದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ಬೆಂಗಳೂರಿನ ಕುಮಾರಕೃಪಾ ರಸ್ತೆಯ ಸರ್ಕಾರಿ ನಿವಾಸದಲ್ಲಿ ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

   ಕೋಟಿ ಬೆಲೆಯ ಕಾರುಗಳನ್ನು ಬಿಟ್ಟು ಟ್ರ್ಯಾಕ್ಟರ್ ಏರಿದ ಡಿ ಬಾಸ್.

   ಭೂ ಸುಧಾರಣಾ ಕಾನೂನಿನ ಸೆಕ್ಷನ್ 63ಕ್ಕೆ ತಿದ್ದುಪಡಿ ತರುವ ಮೂಲಕ ಒಂದು ಕುಟುಂಬಕ್ಕೆ ಇದ್ದ 118 ಎಕರೆ ಭೂಮಿ ಹೊಂದುವ ಮಿತಿಯನ್ನು, 436 ಎಕರೆಗೆ ಹೆಚ್ಚಿಸಿದ್ದಾರೆ. 436 ಎಕರೆ ಭೂಮಿಯನ್ನು ಯಾರು ತೆಗೆದುಕೊಳ್ತಾರೆ? ರೈತರು ಅಷ್ಟು‌ ಜಮೀನು ತೆಗೆದುಕೊಳ್ತಾರಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.

   ಡಿಕೆಶಿ-ಸಿದ್ದರಾಮಯ್ಯ ನಡುವೆ ಒಡಕು: ನಿಜವೇ ಸಚಿವರ ಈ ಮಾತು?

   ಭೂ ಸುಧಾರಣಾ ಕಾನೂನಿಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದಿರುವುರಿಂದ ಬಂಡವಾಳಶಾಹಿಗಳಿಗೆ ಅನುಕೂಲ ಆಗಲಿದೆ ಎಂದು. ಸುಗ್ರೀವಾಜ್ಞೆ ಮೂಲಕ ಇಡೀ ರೈತ ಸಮುದಾಯವನ್ನು ನಾಶ ಮಾಡಲು ಹೊರಟಿದ್ದಾರೆ. ಎಲ್ಲರೂ ಕಾರ್ಪೋರೆಟ್ ಸಂಸ್ಥೆಗಳ ಬಾಗಿಲು ಕಾಯಬೇಕಾದ ಸ್ಥಿತಿ ಬರುತ್ತದೆ. ಬಂಡವಾಳಶಾಹಿಗಳು ಭೂಮಿ ಖರೀದಿಸಿ ರಿಯಲ್ ಎಸ್ಟೇಟ್ ಮಾಡುತ್ತಾರೆ. ಆಹಾರ ಉತ್ಪಾದನೆ ಎಲ್ಲಿ ಆಗುತ್ತದೆ ಎಂದು ಸಿದ್ದರಾಮಯ್ಯ ವಿವರಿಸಿದ್ದಾರೆ.

   ರಾಜ್ಯ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಿದಾಗಲೇ ನಾವು ವಿರೋಧ ಮಾಡಿದ್ದೇವು. ಕೋವಿಡ್ ಸಂದರ್ಭದಲ್ಲಿ ಸರ್ಕಾರ ಸುಗ್ರೀವಾಜ್ಞೆ ತರಲ್ಲ ಎಂದು ಕೊಂಡಿದ್ದೆವು. ಕೊರೊನಾ ವೈರಸ್ ಸಂಕಷ್ಟದ ಸಂದರ್ಭ ಬಳಸಿಕೊಂಡು ರಾಜ್ಯ ಸರ್ಕಾರ ಸರ್ವಾಧಿಕಾರಿ ಧೋರಣೆ ಪ್ರದರ್ಶನ ಮಾಡಿದೆ. ಸುಗ್ರೀವಾಜ್ಞೆ ಹೊರಡಿಸಿದ ದಿನ ಕರ್ನಾಟಕಕ್ಕೆ ಕರಾಳವಾದ ದಿನ. ರೈತರ, ಕೂಲಿ ಕಾರ್ಮಿಕರ, ಹಿಂದುಳಿದವರ ವಿರೋಧಿಯಾದ ತಿದ್ದುಪಡಿ ಸುಗ್ರೀವಾಜ್ಞೆ ಎಂದು ಅವರು ಆರೋಪಿಸಿದ್ದಾರೆ.

   English summary
   Opposition leader Siddaramaiah has accused the state government of implementing anti-people laws through a slew of scandals, in the wake of the coronavirus situation. He was speaking at a press conference at a government residence on Kumarakrupa Road, Bengaluru.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X