• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆ ಯೋಜನೆ ಹೆಸರೇ ತಿಳಿದಿರಲಿಲ್ಲ!

|

ಬೆಂಗಳೂರು, ಮಾ. 01: ಕುರಿಗಳು ಸತ್ತರೆ ಐದು ಸಾವಿರ ರೂ.ಗಳ ಪರಿಹಾರ ನೀಡುವ 'ಅನುಗ್ರಹ ಯೋಜನೆ'ಯನ್ನು ಮತ್ತೆ ಜಾರಿಗೆ ತರದಿದ್ದರೆ ವಿಧಾನಸಭೆಯಲ್ಲಿ ಹೋರಾಟ ನಡೆಸುವುದಾಗಿ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಣೆದಾರರ ಮಹಾ ಮಂಡಳ ನಗರದ ಮೌರ್ಯ ವೃತ್ತದಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮಳೆ, ಸಿಡಿಲು, ಪ್ರವಾಹ ಹಾಗೂ ಅಪಘಾತದಲ್ಲಿ ಕುರಿಗಳು ಸಾವಿಗೀಡಾದರೆ ಐದು ಸಾವಿರ ರೂ.ಗಳ ಪರಿಹಾರ ನೀಡುವ ಅನುಗ್ರಹ ಯೋಜನೆಯನ್ನು ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತರಲಾಗಿತ್ತು.

ಕುರಿಗಳು ಮಾತ್ರವಲ್ಲ, ದನ ಮತ್ತು ಎಮ್ಮೆಗಳು ಸತ್ತರೆ 10 ಸಾವಿರ ರೂ.ಗಳ ಪರಿಹಾರ ನೀಡಲಾಗುತ್ತಿತ್ತು. ಆದರೆ, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಎರಡು ವರ್ಷದಿಂದ ಯೋಜನೆ ಸ್ಥಗಿತಗೊಳಿಸಿದೆ. 30 ಕೋಟಿ ರೂ.ಗಳ ಬಾಕಿಯನ್ನೂ ಪಾವತಿ ಮಾಡಿಲ್ಲ ಎಂದು ಇದೇ ಸಂದರ್ಭದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

 ಯಡಿಯೂರಪ್ಪಗೆ ಯೋಜನೆಯೇ ಗೊತ್ತಿಲ್ಲ

ಯಡಿಯೂರಪ್ಪಗೆ ಯೋಜನೆಯೇ ಗೊತ್ತಿಲ್ಲ

ವಿಧಾನಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದಾಗ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಯೋಜನೆ ಹೆಸರೇ ತಿಳಿದಿರಲಿಲ್ಲ. ಅಧಿಕಾರಿಗಳು ಮಾಹಿತಿ ನೀಡಿದರೂ ಪ್ರಯೋಜನವಾಗಲಿಲ್ಲ. ಕುರುಬರು ಮಾತ್ರವಲ್ಲ, ಹಲವಾರು ಸಮುದಾಯದವರು ಕುರಿಗಳ ಸಾಕಣೆ ಮಾಡುತ್ತಿದ್ದಾರೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ತಮ್ಮ ತೋಟದಲ್ಲಿ 500 ಕುರಿಗಳನ್ನು ಸಾಕಣೆ ಮಾಡುತ್ತಿದ್ದಾರೆ. ಕುರಿ ಸಾಕಣೆ ಒಂದು ಸಮುದಾಯಕ್ಕೆ ಈಗ ಸೀಮಿತವಾಗಿಲ್ಲ. ಕುರಿ ಸಾಕಣೆ ಎಂಬುದು ಬದುಕಿಗೆ ಒಂದು ದಾರಿಯಾಗಿದೆ ಎಂದು ಸಿದ್ದರಾಮಯ್ಯ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

 ಪರಿಹಾರದ ಮೊತ್ತ ಏರಿಕೆ

ಪರಿಹಾರದ ಮೊತ್ತ ಏರಿಕೆ

ಒಂದು ಕುರಿಗೆ ಹತ್ತರಿಂದ ಇಪ್ಪತ್ತು ಸಾವಿರ ರೂ.ಗಳ ಮೌಲ್ಯವಿದೆ. ಆ ಕುರಿ ಸತ್ತರೆ ಕುರಿಗಾರರ ಬದುಕಿನ ದಾರಿಯೇ ಮುಚ್ಚಿ ಹೋಗುತ್ತದೆ. ಮುಂದೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪರಿಹಾರದ ಮೊತ್ತವನ್ನು 10 ಸಾವಿರ ರೂ.ಗಳಿಗೆ ಏರಿಕೆ ಮಾಡಲಾಗುವುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

 ಕುರಿಗಾರರಿಗೆ ಸಹಾಯ

ಕುರಿಗಾರರಿಗೆ ಸಹಾಯ

ಕುರಿಗಳನ್ನು ಕಾಡಿನಲ್ಲಿ ಮೇಯಿಸಲು ಹಾಗೂ ಕಾಯಿಲೆ ಕಾಣಿಸಿಕೊಂಡಾಗ ಕುರಿಗಳಿಗೆ ಕಡ್ಡಾಯವಾಗಿ ಚಿಕಿತ್ಸೆ ಮತ್ತು ಔಷಧ ನೀಡಲು ತಮ್ಮ ಸರ್ಕಾರದ ಅವಧಿಯಲ್ಲಿ ಆದೇಶ ಮಾಡಲಾಗಿತ್ತು. ಕುರಿ ಮತ್ತು ಮೇಕೆ ಸಾಕಣೆದಾರರ ಮಹಾ ಮಂಡಳ ರಚನೆಯಾಗಿದ್ದೂ ನಮ್ಮ ಸರ್ಕಾರ ಇದ್ದಾಗ ಎಂದು ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

  ಕೈ ಕೊಟ್ಟ ಕೊರೊನಾ ವ್ಯಾಕ್ಸಿನ್‌ ಪೋರ್ಟಲ್‌..! ಸರ್ಕಾರದ ಅವ್ಯವಸ್ಥೆಗೆ ಹಿರಿಯನಾಗರಿಕರ ಬೇಸರ | Oneindia Kannada
   ವಿಧಾನಸಭೆಯಲ್ಲಿ ಹೋರಾಟ

  ವಿಧಾನಸಭೆಯಲ್ಲಿ ಹೋರಾಟ

  ಅನುಗ್ರಹ ಯೋಜನೆಯನ್ನು ಸರ್ಕಾರ ಮತ್ತೆ ಜಾರಿಗೆ ತರದಿದ್ದರೆ ವಿಧಾನಸಭೆಯಲ್ಲಿ ಮತ್ತೆ ತೀವ್ರ ಹೋರಾಟ ನಡೆಸುವುದಾಗಿ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದ್ದಾರೆ. ಮಾಜಿ ಸಚಿವರಾದ ಎಚ್.ಎಂ. ರೇವಣ್ಣ, ಟಿ.ಬಿ. ಜಯಚಂದ್ರ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

  English summary
  Leader of the Opposition Siddaramaiah has warned the state BJP government that they will fight in the assembly if the Anugraha Scheme, which offers a compensation of five thousand rupees for died sheep is not implemented again. Know more.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X