35 ಸಾವಿರ ಹುದ್ದೆಗಳಿಗೆ ಅನುಮೋದನೆ; ‌ಯುವನಿಧಿ ನಿಲ್ಲಿಸ್ತೀವಿ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಮೈಸೂರು, ಅಕ್ಟೋಬರ್17: ನಾವು ನುಡಿದಂತೆ ನಡೆದಿರುವ, ನಡೆಯುತ್ತಿರುವ ಸರ್ಕಾರ. ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಿಸ್ತಾರೆ ಎನ್ನುವ ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ. ಉದ್ಯೋಗ ಸಿಕ್ಕ ಬಳಿಕ ಮಾತ್ರ ಉದ್ಯೋಗ ಪಡೆದವರ ಯುವನಿಧಿ ನಿಲ್ಲಿಸಲಾಗುವುದು ಎಂದು ಮುಖ್ಯ‌ಮಂತ್ರಿ ಸಿದ್ದರಾಮಯ್ಯ ಮತ್ತೆ ಸ್ಪಷ್ಟಪಡಿಸಿದರು.

ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಮೈಸೂರಿನಲ್ಲಿ ಆಯೋಜಿಸಿದ್ದ ಯುವ ಸಮೃದ್ಧಿ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಕೊಟ್ಟ ಮಾತು ತಪ್ಪಿ ನಡೆಯಲು ನಾನು ಪ್ರಧಾನಿ ಮೋದಿ ಅಲ್ಲ. ಮೋದಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಮಾತು ತಪ್ಪಿದರು. ಈ 11 ವರ್ಷದಲ್ಲಿ 22 ಕೋಟಿ ಉದ್ಯೋಗ ಸೃಷ್ಟಿಸಬೇಕಿದ್ದ ಮೋದಿಯವರು ಸುಳ್ಳು ಹೇಳಿದರು. ನಾವು ಅವರಂತೆ ಸುಳ್ಳು ಹೇಳುವುದಿಲ್ಲ ಎಂದು ಸರ್ಕಾರದಿಂದ ಭರ್ತಿಯಾದ ಹುದ್ದೆಗಳ ಮತ್ತು ಉದ್ಯೋಗ ಮೇಳದಲ್ಲಿ ಭರ್ತಿಯಾದ ಹುದ್ದೆಗಳ ವಿವರಗಳನ್ನು ನೀಡಿದರು.

Siddaramaiah We Will Stop Their yuva nidhi Only After They Get A Job

ಕಳೆದ ಎರಡೂವರೆ ವರ್ಷಗಳಲ್ಲಿ ನಮ್ಮ‌ ಸರ್ಕಾರ ಬೆಂಗಳೂರಿನಲ್ಲಿ ನಡೆಸಿದ ಉದ್ಯೋಗ ಮೇಳದಿಂದಾಗಿ 58892 ಮಂದಿ ಉದ್ಯೋಗಾಕಾಂಕ್ಷಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗಿ ಅನುಕೂಲ, ಅರಿವು ಪಡೆದುಕೊಂಡಿದ್ದಾರೆ. ಇವರಲ್ಲಿ 11507 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗಿದೆ, 22819 ಅಭ್ಯರ್ಥಿಗಳ ಹೆಸರನ್ನು short list ಮಾಡಲಾಗಿದೆ ಎಂದು ವಿವರಿಸಿದರು. ಜಿಲ್ಲೆಗಳಲ್ಲಿ ನಡೆದ ಉದ್ಯೋಗ ಮೇಳದಲ್ಲಿ 120563 ಅಭ್ಯರ್ಥಿಗಳು ಭಾಗವಹಿಸಿ, 24391 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗಿದೆ, 48232 ಅಭ್ಯರ್ಥಿಗಳ ಹೆಸರನ್ನು short list ಮಾಡಲಾಗಿದೆ ಎಂದು ಪಟ್ಟಿ ನೀಡಿದರು.

ಹಿಂದಿನ ಸರ್ಕಾರ ಉದ್ಯೋಗಾಕಾಂಕ್ಷಿಗಳನ್ನು ಸಂಪೂರ್ಣ ನಿರ್ಲಕ್ಷಿಸಿತ್ತು. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಈ ಎರಡೂವರೆ ವರ್ಷಗಳಲ್ಲಿ ಸರ್ಕಾರದಲ್ಲಿ ಖಾಲಿ ಇದ್ದ 28000 ಉದ್ಯೋಗಗಳನ್ನು ಈಗಾಗಲೇ ಭರ್ತಿ ಮಾಡಿದೆ. 35 ಸಾವಿರ ಹುದ್ದೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ವಿವರಿಸಿದರು. ಇನ್ನೂ ಉದ್ಯಮಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯ ತರಬೇತಿ ನೀಡಿ ಉದ್ಯೋಗ ಸೃಷ್ಟಿಸುವ ಮಹತ್ತರ ಕಾರ್ಯದಲ್ಲಿ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+