Siddaramaiah Welcomed Jagadish Shettar: ನಿಮ್ಮ ಸ್ವಾಭಿಮಾನ ಧಕ್ಕೆ ತರುವ ರೀತಿ ನಾವು ನಡೆದುಕೊಳ್ಳಲ್ಲ: ಸಿದ್ದರಾಮಯ್ಯ
ಬೆಂಗಳೂರು,ಏಪ್ರಿಲ್17: ಜಗದೀಶ್ ಶೆಟ್ಟರ್ ಅವರ ಸೇರ್ಪಡೆಯಿಂದ ಕಾಂಗ್ರೆಸ್ ಗೆ ಬಲ ಬಂದಿದ್ದು, 150 ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ
ಸೋಮವಾರ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಪಕ್ಷಕ್ಕೆ ಬರಮಾಡಿಕೊಂಡು, ಜಗದೀಶ್ ಶೆಟ್ಟರ್ ಅವರನ್ನು ಆತ್ಮೀಯವಾಗಿ ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸುತ್ತೇನೆ. ಶೆಟ್ಟರ್ ಅವರು ಕರ್ನಾಟಕ ಕಂಡ ಸಜ್ಜನ ರಾಜಕಾರಣಿ. ಅವರು ಆರ್ ಎಸ್ಎಸ್ ನಿಂದ ಬಂದಿದ್ದರೂ ಜಾತ್ಯಾತೀತ ತತ್ವದ ಮೇಲೆಯೇ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ನಾನು ಅವರನ್ನು ಹತ್ತಿರದಿಂದ ಕಂಡಿದ್ದೇನೆ. ಅವರು ಮುಖ್ಯಮಂತ್ರಿಯಾಗಿದ್ದಾಗ ನಾನು ವಿರೋಧ ಪಕ್ಷದ ನಾಯಕನಾಗಿ, ನಾನು ಮುಖ್ಯಮಂತ್ರಿಯಾಗಿದ್ದಾಗ ಅವರು ವಿರೋಧ ಪಕ್ಷದ ನಾಯಕರಾಗಿದ್ದರು. ಅವರು ಎಂದಿಗೂ ತಮ್ಮ ವೈಯಕ್ತಿಕ ಕೆಲಸಕ್ಕಾಗಿ ಭೇಟಿ ಮಾಡಿದವರಲ್ಲ. ಐದು ವರ್ಷಗಳ ಕಾಲ ವಿಧಾನಸಭೆ ಒಳಗೆ ಹಾಗೂ ಹೊರಗೆ ಬಿಜೆಪಿ ಪರವಾಗಿ ಹೋರಾಟ ಮಾಡಿದ್ದರು. ಬಹಳ ನಿಷ್ಠಾವಂತರಾಗಿದ್ದರು. ಬಿಜೆಪಿಯ ನೀತಿ ಕಾರ್ಯಕ್ರಮಗಳ ಬಗ್ಗೆ ರಾಜೀ ಮಾಡಿಕೊಳ್ಳುತ್ತಿರಿಲಿಲ್ಲ. ಸ್ವಾರ್ಥಕ್ಕಾಗಿ ಅದನ್ನು ಬಲಿ ಕೊಟ್ಟಿರಲಿಲ್ಲ. ನಮ್ಮ ಸರ್ಕಾರದ ವಿರುದ್ಧ ಹೋರಾಟವನ್ನು ಮಾಡಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷದ ಕೆಲಸವನ್ನು ನಿರ್ಭಯವಾಗಿ ನಿಷ್ಟೂರವಾಗಿ ಕೆಲಸ ಮಾಡುತ್ತಿದ್ದರು. ಕೃಷ್ಣ ಅವರ ಕಾಲದಲ್ಲೂ ವಿರೋಧ ಪಕ್ಷದ ನಾಯಕರಾಗಿದ್ದರು. ಅವರು ಕೇವಲ ಉತ್ತರ ಕರ್ನಾಟ ನಾಯಕರಲ್ಲ, ಅವರು ಇಡೀ ರಾಜ್ಯದ ನಾಯಕರು. ಲಂಗಾಯತ ಸಮಾಜ ದೊಡ್ಡ ಸಮಾಜ. ಸಮಾನ್ಯವಾಗಿ ಯಡಿಯೂರಪ್ಪ ಅವರನ್ನು ಆ ಸಮಾಜದ ನಾಯಕ ಎಂದು ಬಿಂಬಿಸುತ್ತಾರೆ.
ಎರಡನೇ ಸ್ಥಾನದಲ್ಲಿ ನೋಡುತ್ತಿದ್ದದ್ದು ಶೆಟ್ಟರ್ ಅವರನ್ನು. ಬಿಜೆಪಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ನಿರ್ದಾಕ್ಷಣ್ಯವಾಗಿ ತೆಗೆದು ಅಪಮಾನ ಮಾಡಿದರು. ಅವರ ಕಣ್ಣೀರು ಹಾಕಿಸಿದರು. ಜಗದೀಶ್ ಶೆಟ್ಟರ್ ಅವರು ಲಿಂಗಾಯತ ಸಮಾಜದ ದೊಡ್ಡ ನಾಯಕರೆಂದು ಗುರುತಿಸಿಕೊಂಡಿದ್ದರು. ಅವರು ಬಹಳ ನೋವಿನಿಂದ ಮಾತನಾಡಿದ್ದಾರೆ. ಬಹುಶಃ ಬಿಜೆಪಿ ಅವರನ್ನು ನಡೆಸಿಕೊಂಡಿರುವ ರೀತಿ ಯಾವ ಪಕ್ಷದಲ್ಲಿ ಯಾವುದೇ ನಾಯಕರಿಗೆ ಆಗಬಾರದು.

ಯಾವುದೇ ಕಾರಣ ಇಲ್ಲದೇ, ಆರೋಪವಿಲ್ಲದೆ, ಬಿಜೆಪಿಯವರು ಅವರಿಗೆ ಟಿಕೆಟ್ ವಂಚಿಸಿದ್ದಾರೆ. ಇದು ದುರುದ್ದೇಶ ಎಂದು ಎಲ್ಲರಿಗೂ ಅರ್ಥವಾಗುತ್ತದೆ. ನಾನು ನೋಡಿದಾಗೆ ಶೆಟ್ಟರ್ ಅವರು ರಾಜ್ಯದ ರಾಜಕಾರಣಿಗಳಲ್ಲಿ ಸ್ವಾಭಿಮಾನಿ ರಾಜಕಾರಣಿ. ಅವರ ಸ್ವಾಭಿಮಾನಕ್ಕೆ ಧಕ್ಕೆಯಾಗುವಂತಹ ಕೆಲಸ ಮಾಡಿಲ್ಲ. ಈಗ ಅವರ ಸ್ವಾಭಿಮಾನ, ಸಮುದಾಯಕ್ಕೆ ಧಕ್ಕೆಯಾಗಿದೆ. ಅವರ ಅನುಯಾಯಿ, ಸ್ನೇಹಿತರಿಗೆ ಧಕ್ಕೆಯಾಗಿದೆ. ಇದು ಸಹಿಸಲಾಗದ ಅಪಮಾನ.
ನಾನು ಕೂಡ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ನಿಮಗೆ ಇಂತಹ ಅನ್ಯಾಯವಾಗುತ್ತದೆ ಎಂದು ಭಾವಿಸಿರಲಿಲ್ಲ ಎಂದು ಅವರನ್ನು ಭೇಟಿಯಾದಾಗ ಹೇಳಿದೆ. ಈ ರೀತಿ ಏಕಾಏಕಿ, ಯಾವುದೇ ಮುನ್ಸೂಚನೆ ಇಲ್ಲದೆ ಟಿಕೆಟ್ ತಪ್ಪಿಸಿರುವುದು ಘೋರ ಅಪರಾಧ. ಅವರು ತಮ್ಮ ಸ್ವಾಭಿಮಾನ ರಕ್ಷಣೆಗೆ ಪಕ್ಷ ಬಿಡಲು ತೀರ್ಮಾನಿಸಿದ್ದಾರೆ. ಅವರು ಎಲ್ಲರ ಜತೆ ಚರ್ಚಿಸಿ ಅಳೆದು ತೂಗಿ ಇದನ್ನು ಸವಾಲು ಎಂದು ಸ್ವೀಕರಿಸಿ ಅಂತಿಮವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ. ಎಐಸಿಸಿ ಅಧ್ಯಕ್ಷರು, ಪ್ರದಾನ ಕಾರ್ಯದರ್ಶಿಗಳ ಸಮ್ಮುಖದಲ್ಲಿ ಅವರು ಪಕ್ಷ ಸೇರುತ್ತಿದ್ದಾರೆ. ನಾವೆಲ್ಲರೂ ನಿಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ. ನಿಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ.
ಅಮರ ಸಿಂಗ್ ಪಾಟೀಲ್ ಅವರು ಕಾಂಗ್ರೆಸ್ ಪಕ್ಷದಿಂದ ಸಂಸದರಾಗಿದ್ದು, ಅವರನ್ನು ಪಕ್ಷಕ್ಕೆ ಸ್ವಾಗತಿಸುತ್ತೇನೆ. ಶೆಟ್ಟರ್ ಅವರ ಆಗಮನದಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದ್ದು, ಅವರ ಸೇರ್ಪಡೆಯಿಂದ ಕಾಂಗ್ರೆಸ್ 150ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications