ಸಿದ್ದರಾಮಯ್ಯ ನವೆಂಬರ್‌ವರೆಗೆ ಮಾತ್ರ ಸಿಎಂ: ಆರ್ ಅಶೋಕ್‌ ಹೀಗೆ ಹೇಳಿದ್ಯಾಕೆ?

ಮೈಸೂರು, ಫೆಬ್ರವರಿ 11: ಸಿದ್ದರಾಮಯ್ಯ ನವೆಂಬರ್ ವರೆಗೆ ಮಾತ್ರ ಸಿಎಂ ಆಗಿರುತ್ತಾರೆ. ಅಲ್ಲಿವರೆಗೂ ಸಿಎಂ ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡಲಿ. ಒಳಿತು ಮಾಡು ಮನುಷ್ಯ ನೀ ಇರೋದು ಮೂರು ದಿವಸ ಎಂದು ಹಾಡಿನ ಮೂಲಕ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲು ಎಳೆದಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರು ನಗರದಲ್ಲಿ ನಿನ್ನೆ ರಾತ್ರಿ ನಡೆದ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲುತೂರಾಟದ ಘಟನೆ ಡಿಜೆ ಹಳ್ಳಿ, ಕೇಜೆ ಹಳ್ಳಿ ಮಾದರಿಯಲ್ಲಿ ಪೊಲೀಸರ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಆರ್.ಅಶೋಕ್ ಈ ಘಟನೆಯನ್ನು ಖಂಡಿಸಿದ್ದು, ನವೆಂಬರ್ ವರೆಗೆ ಮಾತ್ರ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ ಅಲ್ಲಿವರೆಗೂ ಆದರೂ ಒಳ್ಳೆಯ ಆಡಳಿತ ಕೊಡಿ. ಸಿಎಂ ಸಿದ್ದರಾಮಯ್ಯ ಆಗೋದು ಬಿಟ್ಟು ಆಡಳಿತದತ್ತ ಗಮನಹರಿಸಬೇಕು ಎಂದು ಹೇಳಿದ್ದಾರೆ.

Siddaramaiah will be the CM only until November Says R Ashok

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದಕ್ಕೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದಿರುವ ಕಲ್ಲು ತೂರಾಟ ಪ್ರಕರಣವೇ ಸಾಕ್ಷಿಯಾಗಿದೆ. ಘಟನೆ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳ ಮೇಲೇ ದಾಳಿ ನಡೆದಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಅಡಳಿತ ಪಕ್ಷದ ಶಾಸಕರು, ಸಚಿವರೇ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರದ ಸಚಿವರೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಇಲಾಖೆಯ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ನಡೆಯುತ್ತಿದೆ ಎಂದು ಆರ್‌ ಅಶೋಕ್‌ ಹೇಳಿದರು.

ಮೈಸೂರಿನ ಘಟನೆ ತಲೆತಗ್ಗಿಸುವ ಘಟನೆಯಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ನಾಚಿಕೆಯಾಗಬೇಕು. ಗಲಭೆಗೆ ಕಾರಣರಾಗಿರುವ ತಪ್ಪಿತಸ್ಥ ಮತಾಂಧರನ್ನು ಆದಷ್ಟು ಬೇಗನೆ ಬಂಧಿಸಬೇಕು. ಗೃಹ ಸಚಿವರಿಗೆ ತಮ್ಮ ಇಲಾಖೆಯ ಬಗ್ಗೆಯೇ ಇಷ್ಟವಿಲ್ಲ.ಗೃಹ ಸಚಿವರಿಗೆ ಅವರದೇ ಇಲಾಖೆಯ ಮೇಲೆ ಆಸಕ್ತಿ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆರಾಮಯ್ಯ ಆಗುವುದನ್ನು ಬಿಟ್ಟು ಈಗಲಾದರೂ ಆಡಳಿತದತ್ತ ಗಮನಹರಿಸಬೇಕು. ನಿಮಗಿರುವ ನವೆಂಬರ್ ವರೆಗಿನ ಅವಧಿಯಲ್ಲಾದರೂ‌ ಒಳ್ಳೆಯ ಕೆಲಸ ಮಾಡಿ. ಇನ್ನುಳಿದ ಆರು ತಿಂಗಳ ಅವಧಿಯಲ್ಲಾದರೂ ಒಳಿತು ಮಾಡು ಮನುಷ್ಯ ನೀನಿರುವುದು ಮೂರು ದಿವಸ ಎಂದು‌ ಸಿಎಂ ಸಿದ್ದರಾಮಯ್ಯಗೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್‌ ಅವರು ಕುಟುಕಿದ್ದಾರೆ.

ಇನ್ನೂ ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಭದ್ರಾವತಿ ಕಾಂಗ್ರೆಸ್‌ ಶಾಸಕ ಬಿ.ಕೆ.ಸಂಗಮೇಶ್‌ ಅವರ ಪುತ್ರ, ಕಾಂಗ್ರೆಸ್ ಪಕ್ಷದ ನೀಚ ಸಂಸ್ಕೃತಿ ಎಂಥದ್ದು, ಮಹಿಳೆಯರ ಮೇಲೆ ಕಾಂಗ್ರೆಸ್ ಪಕ್ಷಕ್ಕೆ ಇರುವ ಧೋರಣೆ ಎಂಥದ್ದು ಎನ್ನುವುದನ್ನ ಮತ್ತೊಮ್ಮೆ ಪ್ರದರ್ಶನ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೇ, ತಮ್ಮ ಭ್ರಷ್ಟ ಸರ್ಕಾರದ ಕಿರುಕುಳಕ್ಕೆ ಈಗಾಗಲೇ ರಾಜ್ಯದಲ್ಲಿ 4-5 ಪ್ರಾಮಾಣಿಕ ಅಧಿಕಾರಿಗಳು, ಗುತ್ತಿಗೆದಾರರು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿಮ್ಮ ಭ್ರಷ್ಟಾಚಾರದ ದಾಹಕ್ಕೆ ರಾಜ್ಯದಲ್ಲಿ ಇನ್ನೆಷ್ಟು ಬಲಿಯಾಗಬೇಕು? ಎಂದು ಆರ್‌ ಅಶೋಕ್‌ ಪ್ರಶ್ನಿಸಿದ್ದಾರೆ.

ಇಷ್ಟಕ್ಕೂ ಶಾಸಕರ ಪುತ್ರನಿಗೆ ಅಧಿಕಾರಿಯೊಂದಿಗೆ ಮಾತನಾಡಲು ಯಾವ ಹಕ್ಕಿದೆ? ಭದ್ರಾವತಿ ಕ್ಷೇತ್ರಕ್ಕೆ ಸಂಗಮೇಶ್ ಅವರು ಶಾಸಕರೋ ಅಥವಾ ಪಾಳೆಗಾರರೋ? ಅಥವಾ ರಾಹುಲ್ ಗಾಂಧಿ ಅವರು ತೋರಿಸುವ ಸಂವಿಧಾನದ ಪುಸ್ತಕದಲ್ಲಿ ಶಾಸಕರ ಮಕ್ಕಳಿಗೆ, ಕುಟುಂಬಸ್ಥರಿಗೂ ಅಧಿಕಾರವಿದೆಯೋ? ಮಹಿಳೆಯರ ಮೇಲೆ ಕಾಂಗ್ರೆಸ್‌ ಪಕ್ಷದ ಈ ದಬ್ಬಾಳಿಕೆ, ದೌರ್ಜನ್ಯವನ್ನ ನಾಡಿನ ಜನತೆ ಗಮನಿಸುತ್ತಿದ್ದಾರೆ. ಇದಕ್ಕೆಲ್ಲ ನಾಡಿನ ಮಹಿಳೆಯರು ತಕ್ಕ ಉತ್ತರ ಕೊಡುವ ದಿನ ಬಹಳ ದೂರವಿಲ್ಲ ಎಂದು ಅಶೋಕ್‌ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+