ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತಕ್ಷಣ ಹಿಂದಕ್ಕೆ ಪಡೆಯಿರಿ: ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ!

ಬೆಂಗಳೂರು, ಸೆ. 03: ದೇಶದಲ್ಲಿ ಎಲ್ಲರಿಗಿಂತ ಮೊದಲು ನೂತನ ರಾಷ್ಟ್ರೀಯ ನೀತಿ ಜಾರಿಗೆ ಹೊರಟ್ಟಿದ್ದ ರಾಜ್ಯ ಉನ್ನತ ಶಿಕ್ಷಣ ಇಲಾಖೆಗೆ ತೀವ್ರ ಹಿನ್ನಡೆಯಾಗಿದೆ. ನೂತನ ಶಿಕ್ಷಣ ನೀತಿಯ ಕುರಿತು ಸಣ್ಣದಾಗಿ ಶುರುವಾಗಿದ್ದ ಆಕ್ಷೇಪಕ್ಕೆ, ಇದೀಗ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಧ್ವನಿಗೂಡಿಸುವುದರೊಂದಿಗೆ ದೊಡ್ಡ ಬಲ ಬಂದಂತಾಗಿದೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದು ಒತ್ತಾಯ ಮಾಡಿದ್ದಾರೆ.

ಜೊತೆಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಅವರು ಮಾಡಿರುವ ತಪ್ಪನ್ನು ವಿಕ್ಷ ನಾಯಕ ಸಿದ್ದರಾಮಯ್ಯ ಎತ್ತಿ ತೋರಿಸಿದ್ದಾರೆ. ಜೊತೆಗೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತಕ್ಷಣ ಹಿಂದಕ್ಕೆ ಪಡೆಯಿರಿ ಎಂದು ಸಿದ್ದರಾಮಯ್ಯ ಅವರು ಪತ್ರ ಬರೆದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಅವರನ್ನು ಒತ್ತಾಯಿಸಿದ್ದಾರೆ.

ತಕ್ಷಣ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಿಂದಕ್ಕೆ ಪಡೆಯಿರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿರುವುದರ ಹಿಂದಿನ ಮಹತ್ವದ ಕಾರಣಗಳೇನು? ಮುಂದಿದೆ ಮಾಹಿತಿ!

ಆದೇಶ ಕೂಡಲೇ ವಾಪಾಸ್ ಪಡೆಯಿರಿ!

ಆದೇಶ ಕೂಡಲೇ ವಾಪಾಸ್ ಪಡೆಯಿರಿ!

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆಯುವಂತೆ ವಿಧಾನಸಭೆ ಪ್ರತಿಪಕ್ಷ ನಾಯಕ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಹೊಸ ಶಿಕ್ಷಣ ನೀತಿ ಕುರಿತಾದ ಚರ್ಚೆಯಲ್ಲಿ ತಾವು ಭಾಗವಹಿಸುವುದಿಲ್ಲ ಎಂದಿದ್ದಾರೆ. ಅದಕ್ಕೆ ಕಾರಣವನ್ನೂ ಕೊಟ್ಟಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ 2020ನ್ನು ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಅನುಷ್ಠಾನಗೊಳಿಸಲು ಚಾಲನೆ ನೀಡಲಾಗಿದೆಯೆಂದು ಹಾಗೂ ಈ ಕುರಿತು ಚರ್ಚಿಸಲು ದಿನಾಂಕವನ್ನು ನೀಡುವಂತೆ ತಮ್ಮ ಕಛೇರಿಯಿಂದ ಪತ್ರ ಬರೆದು ಕೋರಲಾಗಿದೆ. ಕರ್ನಾಟಕದಲ್ಲಿ ಈಗಾಗಲೆ ತರಾತುರಿಯಲ್ಲಿ ವಿದ್ಯಾರ್ಥಿಗಳು, ತಜ್ಞರು, ಪ್ರಾಧ್ಯಾಪಕರು, ಪೋಷಕರುಗಳ ಜೊತೆ ಚರ್ಚಿಸದೆ, ಸಾಧಕ-ಬಾಧಕಗಳನ್ನು ಪರಿಶೀಲಿಸದೆ ಈ ಶೈಕ್ಷಣಿಕ ವರ್ಷದಿಂದಲೆ ಅನುಷ್ಠಾನ ಮಾಡುವುದಾಗಿ ಹೇಳಿ ಉದ್ಘಾಟನೆಯನ್ನೂ ಮಾಡಲಾಗಿದೆ. ಉದ್ಘಾಟನೆಯನ್ನೂ ಮುಗಿಸಿ ಚರ್ಚೆ ಮಾಡಬೇಕು ಎಂದು ಕರೆಯುವುದು ಸಂಸದೀಯವಾಗಿ ಸರಿಯಲ್ಲ ಎಂದು ಸಿದ್ದರಾಮಯ್ಯ ಅವರು ಅಶ್ವಥ್ ನಾರಾಯಣ ಅವರನ್ನು ತರಾಟೆಗೆ ತಗೆದುಕೊಂಡಿದ್ದಾರೆ.

ಅಶ್ವಥ್ ನಾರಾಯಣ ಹಿನ್ನೆಲೆ ನೆನಪಿಸಿದ ಸಿದ್ದರಾಮಯ್ಯ!

ಅಶ್ವಥ್ ನಾರಾಯಣ ಹಿನ್ನೆಲೆ ನೆನಪಿಸಿದ ಸಿದ್ದರಾಮಯ್ಯ!

ಒಂದು ಶಿಕ್ಷಣ ನೀತಿಯ ಅನುಷ್ಠಾನವೆಂದರೆ ಸಣ್ಣ ಸಂಗತಿಯೆ? ತಾವೂ ಕೂಡ ಬೆವರಿನ ಸಂಸ್ಕೃತಿಯ ಹಿನ್ನೆಲೆಯ ಸಮುದಾಯದಿಂದ ಬಂದಿದ್ದೀರಿ. ರಾಷ್ಟçಕವಿ ಕುವೆಂಪು ಅವರು ಶಿಕ್ಷಣ, ಅದರ ಗುಣಮಟ್ಟವನ್ನು ಸುಧಾರಣೆ, ಕಲಿಕೆಯ ಮಾಧ್ಯಮ ಹಾಗೂ ಸರ್ಕಾರದ ಜವಾಬ್ಧಾರಿಗಳ ಬಗ್ಗೆ ಮಾತನಾಡಿದ್ದಾರೆ. ಶಿಕ್ಷಣದ ಕುರಿತಂತೆ ಕೆಲಸ ಮಾಡುತ್ತಿರುವವರೆಲ್ಲರೂ ಕುವೆಂಪು ಅವರ ವಿಚಾರಗಳನ್ನು ಓದಿ, ಅದರಂತೆ ನಡೆದುಕೊಳ್ಳಬೇಕಾಗಿದೆ.

ಮುಂದುವರೆದ ದೇಶಗಳಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಸರ್ಕಾರಗಳೆ ನಿರ್ವಹಿಸುತ್ತವೆ. ಯಾವುದೇ ನಾಡಿನಲ್ಲಿ ಉನ್ನತ ಶಿಕ್ಷಣ ವ್ಯವಸ್ಥೆ ಸಮರ್ಪಕವಾಗಿದ್ದರೆ ಆ ನಾಡಿನ ಸಮಸ್ತ ಆರೋಗ್ಯವೂ ಸರಿಯಾಗಿರುತ್ತದೆ. ಇಂದು ಭಾರತದ ಸಮಾಜಗಳು ತೀವ್ರ ರೂಪದ ಬಿಕ್ಕಟ್ಟುಗಳನ್ನು ಎದುರಿಸುತ್ತಿವೆ. ಅದಕ್ಕೆ ಕಾರಣಗಳು ಹಲವಿವೆ.

ಹೊಸ ಶಿಕ್ಷಣ ನೀತಿಯಲ್ಲಿನ ಸಮಸ್ಯೆಗಳು!

ಹೊಸ ಶಿಕ್ಷಣ ನೀತಿಯಲ್ಲಿನ ಸಮಸ್ಯೆಗಳು!

ಮೊದಲನೆಯದಾಗಿ ವಿದ್ಯಾರ್ಥಿಗಳಿಗೆ ತಕ್ಕಂತೆ ಶಿಕ್ಷಕರ ಸಂಖ್ಯೆಯಿರಬೇಕು. ಶಿಕ್ಷಣ ಕ್ಷೇತ್ರಕ್ಕೆ ಅತಿ ಕಡಿಮೆ ಅನುದಾನ ನೀಡಲಾಗುತ್ತಿದೆ. ಈ ನೀತಿಯ ಶಿಫಾರಸ್ಸುಗಳ ಪ್ರಕಾರ ಜಿಡಿಪಿಯಲ್ಲಿ ಕನಿಷ್ಠ ಶೇಕಡಾ 6 ರಷ್ಟು ಮೀಸಲಿರಿಸಬೇಕು. ಇದಾಗಬೇಕೆಂದರೆ ಕರ್ನಾಟಕದಲ್ಲಿ ಕನಿಷ್ಠ 1.08 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿರಿಸಬೇಕಾಗುತ್ತದೆ.

ಹೊಸ ಶಿಕ್ಷಣ ನೀತಿಯ ಹೇರಿಕೆಯು ಹಲವು ಸಮಸ್ಯೆಗಳನ್ನು ಒಳಗೊಂಡಿದೆ ಎಂದು ಹೇಳುತ್ತಿದೆ. ಒಕ್ಕೂಟ ವ್ಯವಸ್ಥೆಯ ಮೂಲ ಸ್ಫೂರ್ತಿಯ ನಿರಾಕರಣೆ, ಖಾಸಗೀಕರಣ, ತರಗತಿಗಳನ್ನು ನಿರಾಕರಿಸಿ ಕಾಲೇಜು, ವಿಶ್ವ ವಿದ್ಯಾಲಯಗಳ ಪಾವಿತ್ರ್ಯದ ನಿರಾಕರಣೆ, ಬಡವರು, ಹಿಂದುಳಿದವರು, ದಮನಿತರ ಸಿಗಬಹುದಾದ ಸುಲಭ ಶಿಕ್ಷ,ಣದ ನಿರಾಕರಣೆ, ಕೋಮು ಅಜೆಂಡಾಗಳನ್ನು ತಂದು ಅವೈಜ್ಞಾನಿಕತೆಯನ್ನು, ದ್ವೇಷವನ್ನು ತುಂಬಿ ಭಾರತವನ್ನು ಶಾಶ್ವತ ಅಂಧಕಾರಕ್ಕೆ ತಳ್ಳಲಾಗುತ್ತಿದೆ ಮುಂತಾದ ಗಂಭೀರ ಆರೋಪಗಳಿವೆ.

Recommended Video

    ಸಿಎಂ ಬೊಮ್ಮಾಯಿಯನ್ನ ಹಾಡಿಹೊಗಳಿದ ಅಮಿತ್ ಶಾ | Oneindia Kannada
    ನೂತನ ಶಿಕ್ಷಣ ನೀತಿಯ ಹೆಸರಲ್ಲಿ ಮಕ್ಕಳು ಬಲಿಪಶು

    ನೂತನ ಶಿಕ್ಷಣ ನೀತಿಯ ಹೆಸರಲ್ಲಿ ಮಕ್ಕಳು ಬಲಿಪಶು

    ಸರ್ಕಾರ ಈ ಎಲ್ಲದರ ಕುರಿತು ಚರ್ಚೆ ನಡೆಸಬೇಕಾಗಿತ್ತು. ಇದೇನನ್ನೂ ನೀವು ಮಾಡಿಲ್ಲ. ನನ್ನ, ನಿಮ್ಮ ಆಯಸ್ಸು, ರಾಜಕೀಯ ವೃತ್ತಿ ಎಲ್ಲವೂ ಮುಂದೆ ಎಂದೊ ಒಂದು ದಿನ ಮುಗಿಯುತ್ತದೆ. ಆದರೆ ಶಿಕ್ಷಣ ನೀತಿಯ ಹೆಸರಲ್ಲಿ ಬಲಿಪಶುಗಳಾಗುವ ಮಕ್ಕಳ ಮುಂದೆ ೭೦- ೮೦ ವರ್ಷಗಳ ಭವಿಷ್ಯವಿದೆ. ಶಿಕ್ಷಣದ ಹಂತದಲ್ಲಿ ಅವರ ಭವಿಷ್ಯ ಅಲ್ಲೋಲ, ಕಲ್ಲೋಲವಾದರೆ ಅದರ ಶಾಪವನ್ನು ಹೊರುವವರು ಯಾರು? ಈ ನಾಡಿನ , ರೈತರ, ಪಶುಪಾಲಕರ, ಕುಶಲಕರ್ಮಿಗಳ, ಸಣ್ಣ ಪುಟ್ಟ ವ್ಯಾಪಾರಿಗಳ, ಕಾರ್ಮಿಕರ ಮನೆಗಳಿಂದ ಬಂದ ಮಕ್ಕಳು ಗುಣ ಮಟ್ಟದ ಶಿಕ್ಷಣ ಪಡೆದು ಜಾಗತಿಕ ಮಟ್ಟದ ಉದಾರ ಮಾನವತಾವಾದಿ, ವೈಜ್ಞಾನಿಕ ಶಿಕ್ಷಣ ಪಡೆಯಬಾರದೆ?

    ತಾವು ನಿಜವಾಗಿಯೂ ನೈಜ ಸ್ಫೂರ್ತಿಯಲ್ಲಿ ಚರ್ಚೆಮಾಡಬಯಸಿದರೆ, ಕೂಡಲೆ ಈ ಹೊಸ ಶಿಕ್ಷಣ ನೀತಿಯನ್ನು ಹಿಂದಕ್ಕೆ ಪಡೆಯಿರಿ. ಚರ್ಚೆ ನಡೆಸಿದ ಮೇಲೆ ನಿಜವಾಗಿಯೂ ಈ ನೀತಿ ಆರೋಗ್ಯಕರವೆನ್ನಿಸಿ ಅನುಷ್ಠಾನ ಸೂಕ್ತವೆನ್ನಿಸಿದರೆ, ಈ ಶತಮಾನಕ್ಕೆ ಅತ್ಯಗತ್ಯ ಎನ್ನಿಸಿದರೆ ನಾವೆ ನಿಂತು ಅನುಷ್ಠಾನ ಮಾಡಲು ಬೆಂಬಲಿಸುತ್ತೇವೆ. ಇಲ್ಲದಿದ್ದರೆ ಮಕ್ಕಳ ಭವಿಷ್ಯದ ಕುತ್ತಿಗೆ ಕೊಯ್ಯುವಂಥ ಪಾಪದ ಕೆಲಸದಲ್ಲಿ ಭಾಗಿಯಾದೆವು ಎಂಬ ಪಶ್ಚಾತ್ತಾಪವನ್ನು ಹೊರಬೇಕಾಗುತ್ತದೆ ಎಂಬುದನ್ನು ತಮಗೆ ತಿಳಿಸ ಬಯಸುತ್ತೇನೆ ಎಂದು ಪತ್ರದಲ್ಲಿ ಸಿದ್ದರಾಮಯ್ಯ ವಿವರಿಸಿದ್ದಾರೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+