ಕುಮಾರಸ್ವಾಮಿಗೆ ಸಿದ್ದರಾಮಯ್ಯ ಬರೆದ ಪತ್ರದಲ್ಲಿ ಅಂಥಾ ವಿಶೇಷ ಏನಿದೆ?

Recommended Video

      ಎಚ್ ಡಿ ಕುಮಾರಸ್ವಾಮಿಗೆ ಮತ್ತೊಂದು ಪತ್ರ ಬರೆದಿದ್ದಾರೆ ಸಿದ್ದರಾಮಯ್ಯ | Oneindia Kannada

      ಬೆಂಗಳೂರು, ಜುಲೈ 14 : ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ. ಬಜೆಟ್ ಅಧಿವೇಶನ ಮುಗಿದ ಬಳಿಕ ಸಿದ್ದರಾಮಯ್ಯ ಈ ಪತ್ರವನ್ನು ಬರೆದಿದ್ದಾರೆ.

      ಕರ್ನಾಟಕದಲ್ಲಿ ಕಾಂಗ್ರೆಸ್‌-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಸರ್ಕಾರ ಸುಗಮವಾಗಿ ನಡೆಯಲು ಸಹಕಾರಿಯಾಗುವಂತೆ ಸಮನ್ವಯ ಸಮಿತಿಯನ್ನು ರಚನೆ ಮಾಡಲಾಗಿದೆ. ಈಗಾಗಲೇ ಸಮಿತಿ ಎರಡು ಸಭೆಗಳನ್ನು ನಡೆಸಿದೆ.

      ಆದರೆ, ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರದಿಂದಲೇ ಸಮನ್ವಯ ಸಮಿತಿ ರಚನೆ ಮಾಡುವುದಾಗಿ ಭರವಸೆ ನೀಡಿದ್ದರಂತೆ. ಇದುವರೆಗೂ ಸರ್ಕಾರ ಸಮಿತಿ ರಚನೆ ಮಾಡಿ ಅಧಿಕೃತವಾದ ಆದೇಶವನ್ನು ಹೊರಡಿಸಿಲ್ಲ. ಆದ್ದರಿಂದ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

      ಸಮನ್ವಯ ಸಮಿತಿ ರಚನೆ ಮಾಡಿ ಆದೇಶ ಹೊರಡಿಸಿ ಸಾಕು. ನನಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ಬೇಡ ಎಂದು ಸಿದ್ದರಾಮಯ್ಯ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಮನ್ವಯ ಸಮಿತಿ ಸೇರುವ ಬಗ್ಗೆ ಇನ್ನೂ ಅಂತಿಮ ಆದೇಶ ಹೊರಬಿದ್ದಿಲ್ಲ. ಈ ಹಿಂದೆ ಸಿದ್ದರಾಮಯ್ಯ ಅನ್ನಭಾಗ್ಯ, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿಚಾರದಲ್ಲಿ ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದರು...

      ಸಿದ್ದರಾಮಯ್ಯ ಪತ್ರದಲ್ಲಿ ಏನಿದೆ?

      ಸಿದ್ದರಾಮಯ್ಯ ಪತ್ರದಲ್ಲಿ ಏನಿದೆ?

      ಸಮನ್ವಯ ಸಮಿತಿಯನ್ನು ರಚನೆ ಮಾಡಿ ಅಧಿಕೃತವಾದ ಆದೇಶವನ್ನು ಹೊರಡಿಸಿ ಎಂದು ಸಿದ್ದರಾಮಯ್ಯ ಅವರು ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯ ಅವರ ಅಧ್ಯಕ್ಷತೆಯ ಸಮನ್ವಯ ಸಮಿತಿ ಈಗಾಗಲೇ ರಚನೆಯಾಗಿದೆ. ಆದರೆ, ಸರ್ಕಾರದಿಂದ ಅಧಿಕೃತವಾಗಿ ರಚನೆಯಾಗಿಲ್ಲ.

      ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರುವಾಗ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರದಿಂದಲೇ ಸಮನ್ವಯ ಸಮಿತಿ ರಚನೆ ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದರು ಎಂದು ತಿಳಿದುಬಂದಿದೆ. ಆದ್ದರಿಂದ, ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

      ನನಗೆ ಸಿಬ್ಬಂದಿ ಬೇಕು

      ನನಗೆ ಸಿಬ್ಬಂದಿ ಬೇಕು

      'ನನಗೆ ಕೆಲಸ ಮಾಡಲು ಆಗುತ್ತಿಲ್ಲ, ನನಗೆ ಸಿಬ್ಬಂದಿ ಬೇಕು. ಸಿಬ್ಬಂದಿ ಇದ್ದರೆ ತಾನೇ ಸಮನ್ವಯ ಸಮಿತಿ ಕೆಲಸ ನಡೆಯುವುದು. ಸಿಬ್ಬಂದಿ ನೇಮಕವಾಗಬೇಕು ಎಂದರೆ ಸರ್ಕಾರ ಅಧಿಕೃತವಾದ ಆದೇಶ ಹೊರಡಿಸಬೇಕು' ಆದ್ದರಿಂದ ಸಮಿತಿ ರಚನೆ ಮಾಡಿ ಎಂದು ಸಿದ್ದರಾಮಯ್ಯ ಅವರು ಕುಮಾರಸ್ವಾಮಿ ಅವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

      ಕ್ಯಾಬಿನೆಟ್ ದರ್ಜೆ ಬೇಡ

      ಕ್ಯಾಬಿನೆಟ್ ದರ್ಜೆ ಬೇಡ

      ಸರ್ಕಾರದಿಂದ ಸಮನ್ವಯ ಸಮಿತಿ ರಚನೆಯಾದರೆ ಸಮಿತಿ ಅಧ್ಯಕ್ಷರಿಗೆ ಕ್ಯಾಬಿನೆಟ್ ದರ್ಜೆ ಸಚಿವರ ಸ್ಥಾನಮಾನವನ್ನು ನೀಡಲು ಸರ್ಕಾರ ಚಿಂತನೆ ನಡೆಸಿತ್ತು. ಆದರೆ, ಸಿದ್ದರಾಮಯ್ಯ ಅವರು ಪತ್ರದಲ್ಲಿ ಸಮಿತಿ ರಚನೆ ಮಾಡಿದರೆ ಸಾಕು, ಕ್ಯಾಬಿನೆಟ್ ದರ್ಜೆ ಸ್ಥಾನಮಾನ ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.

      ಸಿದ್ದರಾಮಯ್ಯ ಸಮಿತಿ ಅಧ್ಯಕ್ಷರು. ಕಾಂಗ್ರೆಸ್‌ ಪಕ್ಷದಿಂದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸಮಿತಿಯಲ್ಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಸಮಿತಿಗೆ ಸೇರಿಸಬೇಕು ಎಂಬ ಚಿಂತನೆ ಇದೆ.

      5 ಸದಸ್ಯರ ಸಮನ್ವಯ ಸಮಿತಿ

      5 ಸದಸ್ಯರ ಸಮನ್ವಯ ಸಮಿತಿ

      ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಾಗ ಎರಡೂ ಪಕ್ಷಗಳು ಸೇರಿ ಸಮನ್ವಯ ಸಮತಿ ರಚನೆ ಮಾಡಿವೆ. ಸರ್ಕಾರ ಸುಗಮವಾಗಿ ನಡೆಯಲು ಅವಕಾಶ ಮಾಡಿಕೊಡುವುದು ಇದರ ಉದ್ದೇಶವಾಗಿದೆ.

      ಸಮಿತಿಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ ಇದ್ದಾರೆ. ಕಾಂಗ್ರೆಸ್‌ನಿಂದ ಮೂವರು ಸದಸ್ಯರಿದ್ದಾರೆ. ಈಗಾಗಲೇ ಸಮಿತಿ 2 ಸಭೆಗಳನ್ನು ಮಾಡಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+