ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಮೋದಿಗೆ ಸಿಎಂ ಪತ್ರ

By Sachhidananda Acharya
|
Google Oneindia Kannada News

ಬೆಂಗಳೂರು, ಜನವರಿ 25: ತ್ರಿವಿಧ ದಾಸೋಹಿ, ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳಿಗೆ 'ಭಾರತ ರತ್ನ' ಪ್ರಶಸ್ತಿ ನೀಡಬೇಕು ಎಂಬ ಕೂಗು ದಿನದಿಂದ ದಿನಕ್ಕೆ ಬಲವಾಗುತ್ತಿದೆ.

ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ದಗಂಗಾ ಶ್ರೀಗಳಿಗೆ 'ಭಾರತ ರತ್ನ' ಪ್ರಶಸ್ತಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಿದ್ದಾರೆ. ಈ ಸಂಬಂಧ ಅವರು ಮೋದಿಗೆ ಪತ್ರ ಬರೆದಿದ್ದಾರೆ.

ಸಿದ್ದರಾಮಯ್ಯ ಪತ್ರ ಬರೆದಿರುವುದರಿಂದ ಇಂದು ಪ್ರಕಟವಾಗಲಿರುವ ಪದ್ಮ ಪ್ರಶಸ್ತಿ ವಿಜೇತರ ಪಟ್ಟಿಯಲ್ಲಿ ಶಿವಕುಮಾರ ಸ್ವಾಮೀಜಿಯವರಿಗೆ 'ಭಾರತ ರತ್ನ' ಪ್ರಶಸ್ತಿ ಸಿಗಲಿದೆಯಾ ಎಂಬ ಪ್ರಶ್ನೆ ಉದ್ಭವಿಸಿದೆ.

Siddaramaiah writes to Modi requesting him to confer the title of 'Bharat Ratna' to Sivakumara Swamiji

111 ವರ್ಷ ವಯಸ್ಸಿನ ಶಿವಕುಮಾರ ಸ್ವಾಮೀಜಿಯವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಈ ಹಿಂದೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಕೂಡ ಪ್ರಧಾನಿಯವರಿಗೆ ಪತ್ರದ ಮೂಲಕ ಮನವಿ ಮಾಡಿದ್ದರು.

ಸಿದ್ದಗಂಗಾ ಶ್ರೀಗಳು ಕಳೆದ 80ಕ್ಕೂ ಹೆಚ್ಚು ವರ್ಷಗಳಿಗಿಂದ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರ ದೈವಭಕ್ತಿ, ಆಂಗ್ಲ ಭಾಷೆಯ ಮೇಲಿನ ಹಿಡಿತ, ಕನ್ನಡ ಮತ್ತು ಸಂಸ್ಕೃತ ಸಾಹಿತ್ಯದ ಮೇಲಿನ ನೈಪುಣ್ಯತೆ ಅನನ್ಯವಾದುರು. ಸಾಮಾಜಿಕ ಪಿಡುಗುಗಳ ವಿರುದ್ಧದ ಹೋರಾಟದಲ್ಲಿ ಸ್ವಾಮೀಜಿ ಸೇವೆ ಸಲ್ಲಿಸಿದ್ದಾರೆ. ಬಡವ, ಬಲ್ಲಿದರ ಪರವಾಗಿ ನಿಂತಿದ್ದಾರೆ.

ಶಿವಕುಮಾರ ಸ್ವಾಮೀಜಿಯವರಿಗೆ ಭಾರತರತ್ನವನ್ನು ನೀಡಬೇಕು ಎನ್ನುವುದು ಲಕ್ಷಾಂತರ ಭಕ್ತರ ಮನವಿಯಾಗಿದೆ. ಅವರನ್ನು ನಡೆದಾಡುವ ದೇವರೆಂದೇ ಎಲ್ಲರು ನಂಬಿದ್ದಾರೆ. ಶ್ರೀಗಳಿಗೆ ಕೇಂದ್ರ ಸರ್ಕಾರ ಕೊಡ ಮಾಡುವ ಭಾರತ ರತ್ನ ಪ್ರಶಸ್ತಿಯನ್ನು ನೀಡಬೇಕು ಎಂದು ಅವರು ಪತ್ರದ ಮೂಲಕ ಮನವಿ ಮಾಡಿದ್ದರು.

English summary
Karnataka CM Siddaramaiah writes to Prime Minister Narendra Modi requesting him to confer the title of 'Bharat Ratna' to Sri Sri Sri Sivakumara Swamigalu.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X