ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಖ್ಯಮಂತ್ರಿ ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪೋಟಕ ಪತ್ರ!

|
Google Oneindia Kannada News

ಬೆಂಗಳೂರು, ಫೆ. 06: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸೌಲಭ್ಯ ಕೊಡಲು ರಾಜ್ಯ ಬಿಜೆಪಿ ಸರ್ಕಾರ ಮುಂದಾಗಿರುವುದು ಹಲವು ಬೆಳವಣಿಗೆಗಳಿಗೆ ಮುನ್ನುಡಿಯಾಗಿದೆ. ಪಂಚಮಸಾಲಿ ಸಮುದಾಯ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಮತ್ತು ಔದ್ಯೋಗಿಕವಾಗಿ ಹಿಂದುಳಿದಿದೆ ಎಂದು ಸರ್ಕಾರದ ಎದುರು ಆ ಜನಾಂದವರು ಬೇಡಿಕೆ ಇಟ್ಟಿದ್ದಾರೆ. ಇದೇ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ ಸಮುದಾಯಕ್ಕೆ 2ಎ ಮೀಸಲಾತಿ ಕೊಡಲು ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಅದ್ಯಯನ ಮಾಡಿ ವರದಿ ಕೊಡುವಂತೆ ಸಿಎಂ ಯಡಿಯೂರಪ್ಪ ಅವರು ಸೂಚಿಸಿದ್ದಾರೆ.

ಯಡಿಯೂರಪ್ಪ ಅವರು ಈ ಆದೇಶ ಮಾಡುತ್ತಿದ್ದಂತೆಯೆ ಮೀಸಲಾತಿಗಾಗಿ ಹಲವು ಜನಾಂಗಗಳು ಬೇಡಿಕೆ ಇಟ್ಟಿವೆ. ಇದೇ ಸಂದರ್ಭದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸ್ಪೋಟಕ ಪತ್ರವೊಂದನ್ನು ಬರೆದಿದ್ದಾರೆ. ಪತ್ರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಎದುರು ಸಿದ್ದರಾಮಯ್ಯ ಮಹತ್ವದ ಬೇಡಿಕೆ ಇಟ್ಟಿದ್ದಾರೆ. ಜೊತೆಗೆ ಬಿಜೆಪಿ ಸರ್ಕಾರದ ಮೇಲೆ ಗಂಭೀರ ಆರೋಪವನ್ನೂ ಸಿದ್ದರಾಮಯ್ಯ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಆರೋಪ ಏನು? ಯಡಿಯೂರಪ್ಪ ಅವರ ಎದುರು ಇಟ್ಟಿರುವ ಬೇಡಿಕೆ ಏನು? ಇಲ್ಲಿದೆ ಮಾಹಿತಿ!

ಸಿದ್ದರಾಮಯ್ಯ ನೇರ ಆರೋಪ!

ಸಿದ್ದರಾಮಯ್ಯ ನೇರ ಆರೋಪ!

ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಜಾತಿಗಳ ಹಿತಾಸಕ್ತಿಯನ್ನು ರಕ್ಷಿಸುವವರು ಇಲ್ಲದಂತಾಗಿದೆ. ಜನವರಿ 16, 2021ರಂದು ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯಿಂದ ಹೊರಡಿಸಿರುವ ಆದೇಶವೇ ಅದಕ್ಕೆ ಸಾಕ್ಷಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದ್ದಾರೆ.

ಸದರಿ ಆದೇಶದಲ್ಲಿ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) ನಿಯಮಗಳು 1992 ರ ಪ್ರಕಾರ ಸರ್ಕಾರದ ಇಲಾಖೆಗಳಿಗೆ/ ಸಂಸ್ಥೆಗಳಿಗೆ ನೌಕರರಾಗಿ ಆಯ್ಕೆಯಾದ ಸಂದರ್ಭಗಳಲ್ಲಿ ಜಾತಿ ಸಿಂಧುತ್ವ ಪ್ರಮಾಣ ಪತ್ರವನ್ನು ನೀಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಜಾತಿ ಪರಿಶೀಲನಾ ಸಮಿತಿಗೆ ಅಧಿಕಾರ ನೀಡಲಾಗಿತ್ತು ಎಂದು ವಿವರಿಸಿದ್ದಾರೆ.

ಬಿಜೆಪಿ ಸರ್ಕಾರದ ವಿವಾದಿತ ಆದೇಶ

ಬಿಜೆಪಿ ಸರ್ಕಾರದ ವಿವಾದಿತ ಆದೇಶ

ಆದರೆ ಈಗ ಕೆಲವು ನಿರ್ದಿಷ್ಟ ಜಾತಿಗಳಿಗೆ ಸಂಬಂಧಿಸಿದಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಜಾಗೃತ ಕೋಶ)ದಿಂದ ವರದಿ ಪಡೆದು ಜಾತಿ ಸಿಂಧುತ್ವ ಪ್ರಮಾಣ ಪತ್ರಗಳನ್ನು ನೀಡತಕ್ಕದ್ದು ಎಂದು ಜಿಲ್ಲಾ ಸಮಿತಿಗೆ ಆದೇಶ ಹೊರಡಿಸಲಾಗಿದೆ. ಈ ಆದೇಶದಲ್ಲಿ ಕೆಳಕಂಡ ಜಾತಿಗಳನ್ನು ನಮೂದಿಸಲಾಗಿದೆ.


ಕರ್ನಾಟಕ ಪರಿಶಿಷ್ಟ ಪಂಗಡದಲ್ಲಿರುವ ಜಾತಿ ಮತ್ತು ಅವುಗಳ ಕ್ರಮ ಸಂಖ್ಯೆ

1) ಗೊಂಡ, ರಾಜಗೊಂಡ, ನಾಯಕ್‍ಪೋಡ್

15) ಜೇನು ಕುರುಬ

16) ಕಾಡು ಕುರುಬ

17) ಕಮ್ಮಾರ (ದಕ್ಷಿಣ ಕನ್ನಡ, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ)

18) ಕಣಿಯನ್, ಕಣ್ಯನ್ (ಕೊಳ್ಳೇಗಾಲ)

21) ಕೊಂಕಣ, ಕೊಂಕಣಿ, ಕುಕನ

22) ಕೋಲಿಧೋರ್, ಟೋಕ್ರೆ ಕೇಳಿ, ಕೊಲ್ಚ, ಕೊಲಘ

28) ಕುರುಬ (ಕೊಡಗು ಜಿಲ್ಲೆ)

34) ಮಾಲೇರು

35) ಮರಾಠ (ಕೊಡಗು ಜಿಲ್ಲೆ)

36) ಮರಾಠಿ (ದಕ್ಷಿಣ ಕನ್ನಡ ಜಿಲ್ಲೆ)

37) ಪರಿವಾರ, ತಳವಾರ


ಕರ್ನಾಟಕ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಜಾತಿ ಮತ್ತು ಅವುಗಳ ಕ್ರಮ ಸಂಖ್ಯೆ


19) ಬೇಡ ಜಂಗಮ, ಬುಡ್ಗ ಜಂಗಮ

20) ಬೋವಿ

21) ಚನ್ನ ದಾಸರ್

41) ಹಂದಿ ಜೋಗಿ

55) ಕೋಟೆಗಾರ್, ಮೇತ್ರಿ

78) ಮೊಗೇರ್

ಸುಪ್ರೀಂ ಕೋರ್ಟ್‌ ಆದೇಶದ ನೆಪ

ಸುಪ್ರೀಂ ಕೋರ್ಟ್‌ ಆದೇಶದ ನೆಪ

ಪರಿಶಿಷ್ಟ ವರ್ಗದ ಜಾತಿಗಳಲ್ಲಿ 21 ಜಾತಿಗಳನ್ನು, ಪರಿಶಿಷ್ಟ ಜಾತಿಯಲ್ಲಿ 8 ಜಾತಿಗಳನ್ನು ಗುರಿಯಾಗಿಸಿಕೊಂಡು ಈ ಆದೇಶವನ್ನು ಹೊರಡಿಸಲಾಗಿದೆ. ಆದರೆ ಈ ಆದೇಶ ಹೊರಡಿಸಲು ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ಉಲ್ಲೇಖಿಸಲಾಗಿದೆ. ಸರ್ವೋಚ್ಛ ನ್ಯಾಯಾಲಯ ತನ್ನ ಆದೇಶದಲ್ಲಿ ಈ 29 ಜಾತಿಗಳನ್ನು ಮಾತ್ರ ಗುರಿಯಾಗಿಸಿಕೊಂಡು ಜಾಗೃತ ಕೋಶದವರು ಪರಿಶೀಲನೆ ಮಾಡಬೇಕೆಂದು ಖಂಡಿತ ಹೇಳಿಲ್ಲ. ಆದರೆ ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ತಪ್ಪು ವ್ಯಾಖ್ಯಾನ ಮಾಡಿ ಕೆಲವೇ ಜಾತಿಗಳನ್ನು ಗುರಿಯಾಗಿಸಿಕೊಂಡು ಈ ಸರ್ಕಾರ ಆದೇಶವನ್ನು ಹೊರಡಿಸಿದೆ ಎಂದು ಆರೋಪಿಸಿದ್ದಾರೆ.

ನಾಗರೀಕ ಹಕ್ಕು ಜಾತಿ ನಿರ್ದೇಶನಾಲಯ (ಜಾಗೃತ ಕೋಶ) ಮುಂದೆ ಹಲವು ವರ್ಷಗಳಿಂದ ಅಸಂಖ್ಯಾತ ಪ್ರಕರಣಗಳು ತನಿಖೆಗಾಗಿ ಅಥವಾ ವಿಚಾರಣೆಗಾಗಿ ಬಾಕಿ ಇವೆ. ಅವುಗಳನ್ನು ಇತ್ಯರ್ಥ ಪಡಿಸದೆ ಕೊಳೆ ಹಾಕಿಕೊಂಡು ಜನರನ್ನು ಸಂಕಷ್ಟಕ್ಕೆ ನೂಕಿ ಇಲ್ಲಿನ ಅಧಿಕಾರಿಗಳು ಕೂತಿದ್ದಾರೆ. ಇಂತಹ ಇಲಾಖೆಗೆ ಸರ್ಕಾರದ ನೌಕರಿಗೆ ಆಯ್ಕೆಯಾದ ಅಭ್ಯರ್ಥಿಗಳ ಜಾತಿಯ ಕುರಿತಾದ ವಿವರಗಳನ್ನು ನಿರ್ಧಿಷ್ಟ ಅವಧಿಯಲ್ಲಿ ತನಿಖೆ ಮಾಡಿ ಸಲ್ಲಿಸಲು ಸಾಧ್ಯವಿದೆಯಾ? ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಯಡಿಯೂರಪ್ಪ ಆದೇಶದಿಂದ ಭ್ರಷ್ಟಾಚಾರ

ಯಡಿಯೂರಪ್ಪ ಆದೇಶದಿಂದ ಭ್ರಷ್ಟಾಚಾರ

ಮೇಲಿನ ಸಮುದಾಯಗಳ ಅಭ್ಯರ್ಥಿಗಳಿಗೆ ಕಿರುಕುಳ ನೀಡಲು, ತೀವ್ರ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಡಲು ಮಾಡಿದ ಆದೇಶ ಇದಾಗಿದೆ. ಇಂತಹ ಸಂದರ್ಭದಲ್ಲಿ ಈ ವರ್ಗಗಳ, ಜಾತಿಗಳ ಹಿತಾಸಕ್ತಿಯನ್ನು ಕಾಪಾಡಬೇಕಾದ ಸಚಿವರುಗಳು ಮೌನವಾಗಿರುವುದು ವಿಷಾದನೀಯ ಸಂಗತಿ. ಇದೇ ವರ್ಗವನ್ನು ಪ್ರತಿನಿಧಿಸುವ ಸಮಾಜ ಕಲ್ಯಾಣ ಸಚಿವರು ಈ ಆದೇಶವನ್ನು ಹೊರಡಿಸಲು ಅನುಮೋದನೆ ನೀಡಿರುವುದನ್ನು ನೋಡಿದರೆ ಈ ವರ್ಗಗಳ ಕುರಿತಂತೆ ಅವರ ಕಾಳಜಿ ಎಂಥದ್ದು ಎಂದು ಅರ್ಥವಾಗುತ್ತದೆ.

ಆದುದರಿಂದ, ಈ ಕೂಡಲೇ ಈ ಜಾತಿ, ವರ್ಗಗಳ ಹಿತಾಸಕ್ತಿಯನ್ನು ಕಾಪಾಡಬೇಕಾದ ಸರ್ಕಾರ ಮತ್ತು ಸರ್ಕಾರದಲ್ಲಿನ ಸಚಿವರುಗಳು ಕೂಡಲೇ ಸೂಕ್ತ ಕ್ರಮ ಕೈಗೊಂಡು ಅವೈಜ್ಞಾನಿಕವಾದ ಮತ್ತು ಅಮಾಯಕರಿಗೆ ಕಿರುಕುಳ ನೀಡುವ ಈ ಸರ್ಕಾರಿ ಆದೇಶವನ್ನು ತಕ್ಷಣದಿಂದಲೇ ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

English summary
Leader of the Opposition Siddaramaiah has written an important letter to Chief Minister Yeddyurappa on Scheduled Castes and Scheduled Caste Certificates. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X