ಮಹಾರಾಷ್ಟ್ರ ಸಿ.ಎಂಗೆ ಪತ್ರ ಬರೆದು ಮನವಿ ಮಾಡಿದ ಸಿದ್ದರಾಮಯ್ಯ, ಯಾಕೆ ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಕರ್ನಾಟಕ ಹಾಗೂ ಮಹಾರಾಷ್ಟ್ರದ ನಡುವೆ ಇತ್ತೀಚಿನ ದಿನಗಳಲ್ಲಿ ಸಂಘರ್ಷ ಏರ್ಪಟ್ಟಿತ್ತು. ಇದೀಗ ಬೇಸಿಗೆ ಸಮಯದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಹೊಸ ಸಮಸ್ಯೆ ಎದುರಾಗಿದ್ದು. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಸರ್ಕಾರಕ್ಕೆ ಸುದೀರ್ಘ ಪತ್ರವನ್ನು ಬರೆದಿದ್ದಾರೆ. ಕರ್ನಾಟಕದ ವಿವಿಧ ಭಾಗದಲ್ಲಿ ಮಳೆಯಾಗುತ್ತಿದೆಯಾದರೂ ಉತ್ತರ ಕರ್ನಾಟಕದ ಭಾಗದಲ್ಲಿ ಬಿಸಿಲ ಝಳ ಜೋರಾಗಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳುವುದಕ್ಕೆ ರಾಜ್ಯ ಸರ್ಕಾರವು ಮುಂದಾಗಿದೆ.

ಕರ್ನಾಟಕದಲ್ಲಿ ಬಿರು ಬಿಸಿಲು ಜೋರಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಇದೀಗ ಕರ್ನಾಟಕದಲ್ಲಿ ಬಿಸಿಲು ಸ್ವಲ್ಪ ಕಡಿಮೆ ಇದೆ. ಆದರೆ ಬಿಸಿಲ ಝಳದಿಂದ ನೀರಿನ ಸಮಸ್ಯೆ ಎದುರಾಗುತ್ತಿದೆ. ಇನ್ನು ಕರ್ನಾಟಕದಾದ್ಯಂತ ಮಳೆ ಆಗುವವರೆಗೂ ಈಗ ಇರುವ ನೀರಿನಲ್ಲೇ ನಿರ್ವಹಣೆ ಮಾಡಬೇಕಿದೆ. ಆದರೆ, ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಸಮಸ್ಯೆ ಆಗುತ್ತಿದೆ. ಹೀಗಾಗಿ, ಕರ್ನಾಟಕ ಸರ್ಕಾರವು ಮಹಾರಾಷ್ಟ್ರದ ನೆರವು ಕೇಳಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಅವರಿಗೆ ಸುದೀರ್ಘ ಪತ್ರವನ್ನು ಬರೆದಿದ್ದಾರೆ.

Siddaramaiah Wrote letter to Maharashtra CM and Appealed For Water

ಬೇಸಿಗೆ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಭಾಗದ ಪ್ರಮುಖ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ಪ್ರಮುಖ ಜಿಲ್ಲೆಗಳಲ್ಲಿ ಮಾರ್ಚ್‌ ಮೊದಲ ವಾರದಿಂದಲೇ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ ಎಂದು ಸಿದ್ದರಾಮಯ್ಯ ಅವರು ವಿವರಿಸಿದ್ದಾರೆ. ಕುಡಿಯವ ನೀರಿನ ಸಮಸ್ಯೆ ಇರುವುದರಿಂದ ಕೃಷ್ಣಾ ಹಾಗೂ ಭೀಮಾ ನದಿಗೆ ನೀರು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಈ ಹಿಂದಿನ ಸಂದರ್ಭಗಳಲ್ಲಿ ಬೇಸಿಗೆಯ ಸಮಯದಲ್ಲಿ ಈ ಭಾಗದ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಅಗತ್ಯವನ್ನು ಪೂರೈಸುವ ಉದ್ದೇಶದಿಂದ ಕೃಷ್ಣಾ ನದಿಯಿಂದ ನೀರು ಬಿಡುಗಡೆ ಮಾಡಲು ಮಹಾರಾಷ್ಟ್ರ ಸರ್ಕಾರವು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿತ್ತು. ಕರ್ನಾಟಕ ಸರ್ಕಾರವು ಈ ಮೂಲಕ ಮಹಾರಾಷ್ಟ್ರ ರಾಜ್ಯಕ್ಕೆ ಪ್ರಾಮಾಣಿಕ ಧನ್ಯವಾದಗಳನ್ನು ತಿಳಿಸುತ್ತದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮುಂದುವರಿದು, ಕರ್ನಾಟಕದಲ್ಲಿ ಇದೀಗ ಹೆಚ್ಚುತ್ತಿರುವ ತಾಪಮಾನ ಮತ್ತು ಹಿಪ್ಪರಗಿ ಬ್ಯಾರೇಜ್ ಸೇರಿದಂತೆ ಇತರ ಸ್ಥಳೀಯ ಜಲಾಶಯಗಳಲ್ಲಿನ ನೀರಿನ ಪ್ರಮಾಣ ಕಡಿಮೆಯಾಗಿದೆ. ಹೀಗಾಗಿ, ಈ ಭಾಗದಲ್ಲಿ ಈ ವರ್ಷ ಮಳೆಗಾಲ ಪ್ರಾರಂಭವಾಗುವ ವರೆಗೆ ಕೃಷ್ಣಾ ಜಲಾನಯನ ಪ್ರದೇಶದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಅಗತ್ಯತೆಯನ್ನು ಪೂರೈಸಲು ಸಾಧ್ಯವಾಗುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಕಾರಣಗಳಿಂದಾಗಿ ಕರ್ನಾಟಕದ ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಗಳ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಅಗತ್ಯತೆಯನ್ನು ಪೂರೈಸಲು ಮಹಾರಾಷ್ಟ್ರದ ವಾಮ/ ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಲಾಗಿದೆ. ಕೃಷ್ಣಾ ನದಿಗೆ ಕನಿಷ್ಠ 2.00 ಟಿಎಂಸಿ ನೀರನ್ನು ಮತ್ತು ಉಜ್ಜಿನಿ ಜಲಾಶಯದಿಂದ ಭೀಮಾ ನದಿಗೆ 1.00 ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಮಹಾರಾಷ್ಟ್ರದ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಅವರು ಪತ್ರ ಬರೆದು ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+