Get Updates
Get notified of breaking news, exclusive insights, and must-see stories!

ಕಾವೇರಿ ಪರ ಹೋರಾಟಗಾರರೊಂದಿಗೆ ಸಿದ್ದರಾಮಯ್ಯ ಸಭೆ, ಶೀಘ್ರವೇ ನಿರ್ಧಾರದ ಭರವಸೆ

ಬೆಂಗಳೂರು, ಸೆಪ್ಟೆಂಬರ್‌ 29: ಕಾವೇರಿ ವಿವಾದ ಕುರಿತಂತೆ ರಾಜ್ಯ ಕಬ್ಬು ಬೆಳೆಗಾರರ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ಹಾಗೂ ಮುಖ್ಯಮಂತ್ರಿ ಚಂದ್ರು ಅವರ ನೇತೃತ್ವದ ಹೋರಾಟಗಾರರ ನಿಯೋಗದೊಂದಿಗೆ ನಡೆದ ಮಹತ್ವದ ಸಭೆಯನ್ನು ಸಿಎಂ ಸಿದ್ದರಾಮಯ್ಯ ಇಂದು ನಡೆಸಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದೆನ್ನುವುದೇ ನಮ್ಮ ನಿಲುವು. ಇಂದು ಸಂಜೆ ಕಾನೂನು ಮತ್ತು ನೀರಾವರಿ ತಜ್ಞರ ತಂಡದ ಜತೆಗಿನ ಸಭೆ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

siddaramaiahs-meeting

ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದ ವಿವಾದ ಬಗೆಹರಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಗಳನ್ನು ಸುಪ್ರೀಂ ಕೋರ್ಟ್ ಆದೇಶದಂತೆ ಕೇಂದ್ರ ಸರ್ಕಾರ ರಚನೆ ಮಾಡಿದೆ. ಅವುಗಳು ವಾಸ್ತವ ಸ‍್ಥಿತಿಯ ಅವಲೋಕನ ಮಾಡಿ ತನ್ನ ಅಭಿಪ್ರಾಯವನ್ನು ನೀಡುತ್ತವೆ ಎಂದು ಅವರು ಹೇಳಿದ್ದಾರೆ.

ನಾವು ತಮಿಳುನಾಡಿಗೆ ಹರಿಸುವ ನೀರನ್ನು ಬಿಳಿಗುಂಡ್ಲುವಿನಲ್ಲಿ ಕೇಂದ್ರ ಜಲ ಆಯೋಗದ ಸುಪರ್ದಿಯಲ್ಲಿರುವ ಜಲಮಾಪನ ಕೇಂದ್ರ ಲೆಕ್ಕ ಹಾಕುತ್ತದೆ. ಸಾಮಾನ್ಯ ಪರಿಸ್ಥಿತಿಯಲ್ಲಿ 177.25 ಟಿ ಎಂಸಿ ನೀರನ್ನು ಒಂದು ವರ್ಷದಲ್ಲಿ ಬಿಡಬೇಕೆಂದು ಆದೇಶವಿದೆ. ನಮ್ಮ ರಾಜ್ಯಕ್ಕೆ 284.85 ಟಿಎಂಸಿ ನೀರು ಅಗತ್ಯವಿದೆ. ಆದರೆ ಸಂಕಷ್ಟ ಕಾಲದಲ್ಲಿ ನೀರು ಹೇಗೆ ಹಂಚಿಕೊಳ್ಳುವ ಸೂತ್ರವನ್ನು ಸುಪ್ರೀಂಕೋರ್ಟ್ ಇಲ್ಲವೆ ಪ್ರಾಧಿಕಾರ ಸಿದ್ಧಪಡಿಸಿಲ್ಲ ಎಂದು ಸಿಎಂ ತಿಳಿಸಿದ್ದಾರೆ.

ಆಗಸ್ಟ್ ನಲ್ಲಿ ಮಳೆ ಕೈಕೊಟ್ಟಿದ್ದರಿಂದ ಸಮಸ್ಯೆ ಉಂಟಾಯಿತು. ಈ ತಿಂಗಳೂ ಕೂಡ ಮಳೆ ಅಷ್ಟೇನೂ ಆಗಿಲ್ಲ. ತಮಿಳುನಾಡಿಗೆ ಹಿಂಗಾರು ಮಳೆಯಿದೆ. ನಾವು ಇಲ್ಲಿಯ ವರೆಗೆ 123 ಟಿಎಂಸಿ ನೀರು ಬಿಡಬೇಕಾಗಿತ್ತು, ಈ ವರೆಗೆ 43 ಟಿಎಂಸಿ ನೀರು ಹೋಗಿದೆ. ಈಗ ನಮ್ಮ ರೈತರಿಗೂ ನೀರಿಲ್ಲ, ಕುಡಿಯಲು ಬೇಕಾದಷ್ಟು ಕೂಡಾ ನೀರಿಲ್ಲ.

ಕಾವೇರಿ ಪ್ರಾಧಿಕಾರ ಪ್ರತಿ ಬಾರಿ ಸಭೆ ಕರೆದಾಗಲೂ ನಮ್ಮ ಅಧಿಕಾರಿಗಳು ಮಳೆಯ ಕೊರತೆ, ಜಲಾಶಯಗಳ ನೀರಿನ ಸಂಗ್ರಹ ಇತ್ಯಾದಿ ವಿವರಗಳನ್ನು ಮುಂದಿಟ್ಟು ನಮ್ಮ ವಾದ ಮಂಡಿಸಿದ್ದಾರೆ. ಇದರ ಹೊರತಾಗಿಯೂ ನೀಡಿರುವ ಆದೇಶವನ್ನು ವಿರೋಧಿಸುತ್ತಾ ಬಂದಿದ್ದೇವೆ, ನೀರಿಲ್ಲ ಎಂದೇ ಹೇಳಿದ್ದೇವೆ. ಸುಪ್ರೀಂಕೋರ್ಟ್ ಮುಂದೆಯೂ ಅರ್ಜಿ ಹಾಕಿ ನಮಗೆ ಬೆಳೆ ಉಳಿಸಿಕೊಳ್ಳಲು 70 ಟಿಎಂಸಿ ನೀರು ನೀರಾವರಿಗೆ, 30 ಟಿಎಂಸಿ ಕುಡಿಯುವ ನೀರಿಗೆ ಹಾಗೂ ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಅಗತ್ಯವಿದೆ ಎಂದು ಹೇಳಿದ್ದೇವೆ.

ಒಟ್ಟು 106 ಟಿಎಂಸಿ ನೀರಿನ ಅವಶ್ಯಕತೆ ರಾಜ್ಯಕ್ಕೆ ಇದೆ. ಆದರೆ ನಮ್ಮ ಬಳಿ ಇರುವುದು ಕೇವಲ 50 ಟಿಎಂಸಿ ನೀರು. ನಮ್ಮ ಮೊದಲ ಆದ್ಯತೆ ಕುಡಿಯುವ ನೀರಾಗಿದೆ. ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳೊಂದಿಗೆ ನೀರಾವರಿ ತಜ್ಞರು, ಮಾಜಿ ಅಡ್ವೊಕೇಟ್ ಜನರಲ್ ಗಳೊಂದಿಗೆ ಇಂದು ಸಂಜೆ ಸಭೆ ಕರೆಯಲಾಗಿದ್ದು, ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು.

ನೀರು ಕೊಡಬಾರದೆಂಬುದು ನಮ್ಮ ನಿಲುವು. ಅಂತಹ ನಿರ್ಧಾರ ಕೈಗೊಂಡರೆ ಏನಾಗಬಹುದೆಂಬ ಬಗ್ಗೆ ಚರ್ಚೆ ಮಾಡುತ್ತೇವೆ. ನೀರು ಬಿಡದಿದ್ದರೆ, ಜಲಾಶಯಗಳನ್ನು ಕೇಂದ್ರ ಸರ್ಕಾರ ವಶಕ್ಕೆ ಪಡೆಯಬಹುದೇ? ನ್ಯಾಯಾಂಗ ನಿಂದನೆ ಆಗಬಹುದೇ? ಸರ್ಕಾರವನ್ನೇ ವಜಾ ಮಾಡಬಹುದೇ? ಈ ಎಲ್ಲ ಪರಿಣಾಮಗಳ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+