Get Updates
Get notified of breaking news, exclusive insights, and must-see stories!

Lok Sabha Election: ಚಾಮರಾಜನಗರ ಕ್ಷೇತ್ರ ಸಿಎಂಗೆ ಪ್ರತಿಷ್ಠೆಯ ಕಣ

ದೇಶದಲ್ಲಿ ಎರಡನೇ ಹಂತದ ಮತದಾನಕ್ಕೆ ಕ್ಷಣಗನೇ ಆರಂಭವಾಗಿದೆ. ಏಪ್ರಿಲ್‌ 26 ರಂದು ಎರಡನೇ ಹಂತದ ಚುನಾವಣೆ ನಡೆಯಲಿದ್ದು, ಇಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಅಲ್ಲದೆ ಇಂದು ಸಂಜೆಯಿಂದಲೇ ನಿಷೇದಾಜ್ಷೆ ಜಾರಿಯಾಗುತ್ತದೆ. ಕರ್ನಾಟಕ ಸಹ ಮೊದಲ ಹಂತದ ಚುನಾವಣೆಗೆ ಸಕಲ ರೀತಿಯಿಂದಲೂ ಸಜ್ಜಾಗಿದೆ.

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಇನ್ನು ಉಳಿದ 14 ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ ಹಲವು ಪ್ರತಿಷ್ಠೆಯ ಕಣಗಳು ಕಾಣಿಸಿಕೊಳ್ಳುತ್ತವೆ. ಅದರಲ್ಲಿ ಹಳೆ ಮೈಸೂರು ಭಾಗದ ಚಾಮಾರಾಜನಗರ ಕ್ಷೇತ್ರವೂ ಒಂದು. ಈ ಕ್ಷೇತ್ರ ಕಾಂಗ್ರೆಸ್‌ ಪಕ್ಷದ ಭದ್ರ ಕೋಟೆಯಾಗಿತ್ತು. ಆದರೆ ಕಳೆದ ಚುನಾವಣೆಯಲ್ಲಿ ಈ ಕ್ಷೇತ್ರವನ್ನು ಬಿಜೆಪಿ ತನ್ನ ವಶಕ್ಕೆ ಪಡೆದಿತ್ತು. ಈ ಕ್ಷೇತ್ರದಲ್ಲಿ ಇರುವ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜಿಪಿ ಒಂದೇ ಒಂದು ಸ್ಥಾನ ಗೆಲ್ಲಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್ 7, ಜೆಡಿಎಸ್‌ 1 ಸ್ಥಾನ ಗೆದ್ದುಕೊಂಡಿದೆ.

Siddaramaiah s Prestige on the Line in Chamarajanagar Battle Congress Offers Strong Backing

ಗ್ಯಾರಂಟಿ vs ಮೋದಿ

ಕರ್ನಾಟಕದ ಮೂರನೇ ಕಡಿಮೆ ಜನಸಂಖ್ಯೆಯ ಜಿಲ್ಲೆಯಾಗಿರುವ ಚಾಮರಾಜನಗರದಲ್ಲಿ ಅಭಿವೃದ್ಧಿ ಕುಂಟಿತವಾಗಿದೆ. ಪರಿಶಿಷ್ಟ ಜಾತಿಗಳಿಗೆ ಮೀಸಲಾದ ಕ್ಷೇತ್ರವಾಗಿದೆ. ಅದರಲ್ಲಿ ಹೆಚ್ಚಿನವು ಅರಣ್ಯವನ್ನು ಹೊಂದಿದ್ದು, ನೂರಾರು ಬುಡಕಟ್ಟು ಕುಗ್ರಾಮಗಳನ್ನು ಒಳಗೊಂಡಿದೆ. ಇತ್ತೀಚಿಗೆ ಕೆಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳ ನಡುವೆ ತೀವ್ರ ಹೋರಾಟ ಏರ್ಪಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರತಿಷ್ಠೆಯ ಕಣದಲ್ಲಿ ಜಿದ್ದಾಜಿದ್ದಿನ ಫೈಟ್‌ ಇದೆ. ಚಾಮರಾಜನಗರವು ಅವರ ಸರ್ಕಾರದ ಗ್ಯಾರಂಟಿ ಮತ್ತು ನರೇಂದ್ರ ಮೋದಿ ಸರ್ಕಾರದ ಭರವಸೆಗಳ ನಡುವಿನ ಸ್ಪರ್ಧೆಯಾಗಿದೆ.

ಸಮಾಜ ಕಲ್ಯಾಣ ಸಚಿವ ಎಚ್‌ಸಿ ಮಹದೇವಪ್ಪ ಅವರ ಮಗ ಸುನಿಲ್‌ ಬೋಸ್‌ ಈ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿ ಆಗಿದ್ದಾರೆ. ಹೀಗಾಗಿ ಎಚ್‌ಸಿ ಮಹದೇವಪ್ಪರಿಗೂ ಇದು ಪ್ರತಿಷ್ಠೆಯ ವಿಚಾರ.

ರಾಷ್ಟ್ರೀಯ ಪಕ್ಷಗಳಿಗೆ ಕರ್ನಾಟಕ ಟಾರ್ಗೆಟ್

ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಕರ್ನಾಟಕದ ಮೇಲೆ ಒಂದು ಚಿತ್ತ ನೆಟ್ಟಿವೆ. ಕಳೆದ ಲೋಕಸಭಾ ಚುನವಣೆಯಲ್ಲಿ ಕಾಂಗ್ರೆಸ್‌ ಮುಖಭಂಗ ಅನುಭವಿಸಿತ್ತು. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ವಿದೆ. ಅಲ್ಲದೆ ಗ್ಯಾರಂಟಿಗಳು ಕಾಂಗ್ರೆಸ್‌ ಗೆಲುವಿಗೆ ದಾರಿ ಮಾಡಿಕೊಡುತ್ತದೆ ಎಂದು ಕಾಂಗ್ರೆಸ್‌ ಲೆಕ್ಕಾಚಾರವನ್ನ ಹಾಕಿಕೊಂಡಿದೆ. ಇನ್ನು ಬಿಜೆಪಿ ಸಹ ಈ ರಾಜ್ಯವನ್ನು ಗೆದ್ದು ದಕ್ಷಿಣದಲ್ಲಿ ತನ್ನ ಬೇರುಗಳನ್ನು ಇನ್ನಷ್ಟು ಪಸರಿಸಲು ಪ್ಲ್ಯಾನ್ ಮಾಡಿಕೊಂಡಿದೆ. ಕಳೆದ ಚುನಾವಣೆಗಳಲ್ಲಿ ಮಾಡಿದ ಸಾಧನೆಯನ್ನು ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ.

Siddaramaiah s Prestige on the Line in Chamarajanagar Battle Congress Offers Strong Backing

ಚಾಮರಾಜನಗರದಲ್ಲಿ ಬಿಜೆಪಿ 2019ರಲ್ಲಿ ಭರ್ಜರಿ ಗೆಲುವು ದಾಖಲಿಸಿತ್ತು. ಕಳೆದ ವರ್ಷ ನಡೆದ ಜಿದ್ದಾಜಿದ್ದಿನ ಕಾಳಗದಲ್ಲಿ ಆರ್‌ ಧ್ರುವನಾರಾಯಣ್‌ ಅವರನ್ನು ಸೋಲಿಸಿದ, ಬಿಜೆಪಿ ವಿ ಶ್ರೀನಿವಾಸ್ ಪ್ರಸಾದ್ ಅಬ್ಬರಿಸಿದ್ದರು. ಈ ಕ್ಷೇತ್ರದಲ್ಲಿ ಒಟ್ಟು 17.78 ಲಕ್ಷ ಮತದಾರರು ಇದ್ದಾರೆ. ಈ ಕ್ಷೇತ್ರದಲ್ಲಿ 8.99 ಲಕ್ಷ ಮಹಿಳಾ ಮತದಾರರು ಇದ್ದಾರೆ. ಫೆಬ್ರವರಿಯಲ್ಲಿ ಕ್ಷೇತ್ರದ 2.59 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಸೌಲಭ್ಯದ ಲಾಭ ಪಡೆದಿದ್ದಾರೆ. ಗೃಹ ಜ್ಯೋತಿ (ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್) ಮತ್ತು ಗೃಹ ಲಕ್ಷ್ಮಿ ಸೇರಿದಂತೆ ಕಾಂಗ್ರೆಸ್ ಸರ್ಕಾರದ 'ಗ್ಯಾರಂಟಿ' ಯೋಜನೆಗಳು ಮತಗಳ ಸೆಳೆಯುವಲ್ಲಿ ಸಫಲವಾಗುತ್ತವಾ ಎಂಬುದೇ ದೊಡ್ಡ ಪ್ರಶ್ನೆ ಆಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+