Siddeshwara Swamiji: ನಡೆದಾಡುವ ದೇವರು ಸಿದ್ದೇಶ್ವರ ಶ್ರಿಗಳ ಬಾಲ್ಯ, ಜೀವನ ಸಾಧನೆ
ವಿಜಯಪುರ, ಜ. 02: ಉತ್ತರ ಕರ್ನಾಟಕದ ನಡೆದಾಡುವ ದೇವರು, ಕೋಟ್ಯಾಂತರ ಮಂದಿಯ ಬಾಳಲ್ಲಿ ಬೆಳಕು ತಂದ ಆಧ್ಯಾತ್ಮಿಕ ಪ್ರವಚನಕಾರ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ (82) ಲಿಂಗೈಕ್ಯರಾಗಿದ್ದಾರೆ. ಅಪಾರ ಭಕ್ತ ಸಮೂಹವನ್ನು ಬಿಟ್ಟು ತೆರಳಿರುವ ಸಿದ್ದೇಶ್ವರ ಶ್ರೀಗಳ ಹುಟ್ಟು ಬಾಲ್ಯದ ವಿವರಗಳು ಇಲ್ಲಿವೆ.
ಸಿದ್ದೇಶ್ವರ ಸ್ವಾಮಿಜಿಯವರು ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಸಾಮಾನ್ಯ ರೈತ ಕುಟುಂಬದಲ್ಲಿ 1941 ಅಕ್ಟೋಬರ್ 24 ರಂದು ಜನಿಸಿದರು. ಸಿದ್ದೇಶ್ವರ ಶ್ರೀಗಳ ಬಾಲ್ಯದ ಹೆಸರು ಸಿದ್ದಗೊಂಡಪ್ಪ.

ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಶಾಲೆಯಲ್ಲಿಯೇ ನಾಲ್ಕನೇ ತರಗತಿವರೆಗೆ ಓದಿದರು. ಬಳಿಕ ಜ್ಞಾನದಾಸೋಹ ನೀಡುವ ವಿಜಯಪುರದ ಜ್ಞಾನಯೋಗಾಶ್ರಮಕ್ಕೆ ಬಂದರು. ಇಲ್ಲಿ ಗದುಗಿನ ಶಿವಾನಂದ ಶ್ರೀಗಳ ಪರಂಪರೆಯಲ್ಲಿ ಬಂದ ಈ ಆಶ್ರಮದ ಗುರುಗಳಾದ ವೇದಾಂತ ಕೇಸರಿ ಮಲ್ಲಿಕಾರ್ಜುನ ಸ್ವಾಮಿಗಳ ನೆರಳಲ್ಲಿ ವಿದ್ಯಾಬ್ಯಾಸ ಮಾಡಿದರು.

ಬೆಳೆಯುವ ಪೈರು ಮೊಳಕೆಯಲ್ಲೇ ಎಂಬಂತೆ ಬಾಲಕ ಸಿದ್ದೇಶ್ವರನ ಚುರುಕುತನ ಗಮನಿಸಿದ ಮಲ್ಲಿಕಾರ್ಜುನ ಸ್ವಾಮಿಗಳು, ತಾವು ಪ್ರವಚನ ಮಾಡುವ ಸ್ಥಳಗಳಿಗೆ ಅವರನ್ನು ಕರೆದೊಯ್ಯ ತೊಡಗಿದರು. ಜೊತೆಯಲ್ಲಿಯೇ ಅವರ ಶಾಲಾ ಕಾಲೇಜುಗಳ ವಿದ್ಯಾಭ್ಯಾಸವೂ ಮುಂದುವರಿಯುವಂತೆ ನೋಡಿಕೊಂಡರು.
ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ನಂತರ ಸಿದ್ದೇಶ್ವರ ಶ್ರೀಗಳು ಸ್ನಾತಕೋತ್ತರ ವಿದ್ಯಾಭ್ಯಾಸಕ್ಕೆ ಕೊಲ್ಹಾಪುರ ವಿಶ್ವವಿದ್ಯಾನಿಲಯಕ್ಕೆ ಹೋದರು. ತತ್ವಶಾಸ್ತ ವಿಷಯದಲ್ಲಿ ಎಂ.ಎ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ಪಾಸು ಮಾಡಿದರು. ಇವರು ಕನ್ನಡ, ಸಂಸ್ಕೃತ, ಇಂಗ್ಲಿಷ್, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ನಿಪುಣರಾಗಿದ್ದರು.
ಜ್ಞಾನಯೋಗಾಶ್ರಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಸಿದ್ದೇಶ್ವರ ಶ್ರೀಗಳು ತಮ್ಮ ಗುರುಗಳ ಮಾರ್ಗದರ್ಶನದಲ್ಲೇ ಆಶ್ರಮದ ಚಟುವಟಿಕೆಗಳನ್ನು ಮುಂದುವರಿಸುತ್ತಿದ್ದರು. ಸಿದ್ದೇಶ್ವರರ ಪ್ರವಚನ ಕೇಳಿದವರು ಅದರಲ್ಲೇ ಅನುರಕ್ತರಾಗಿ ಬಿಡುತ್ತಾರೆ. ಪ್ರವಚನ ಕಾರ್ಯಕ್ರಮ ಎಲ್ಲಿ ಏರ್ಪಡಿಸಿದರೂ ಸಹ ಅಲ್ಲಿಗೆ ಸಾವಿರಾರು ಸಂಖ್ಯೆಯಲ್ಲಿ ಜನ ಸೇರುತ್ತಾರೆ. ಅವರ ಪ್ರವಚನಗಳಿಗಿರುವ ಶಕ್ತಿ ಅಂತಹದ್ದು.
ಇನ್ನು, ಸಿದ್ದೇಶ್ವರ ಶ್ರೀಗಳು ಎಷ್ಟು ಸರಳತೆಯಿಂದ ಬದುಕುತ್ತಿದ್ದರು ಎಂಬುದಕ್ಕೆ ಅವರು ಪದ್ಮಶ್ರೀ ಪ್ರಶಸ್ತಿ ಹಿಂತಿರುಗಿಸಿರುವುದೇ ಸಾಕ್ಷಿ. 2018ರಲ್ಲಿ ಕೇಂದ್ರ ಸರ್ಕಾರ ಘೋಷಿಸಿದ್ದ ಪದ್ಮಶ್ರೀ ಪುರಸ್ಕಾರವನ್ನು ವಿನಯಪೂರ್ವಕವಾಗಿ ನಿರಾಕರಿಸಿದ್ದರು.
ಈ ಕುರಿತು ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಪತ್ರ ಬರೆದಿದ್ದ ಅವರು "ಭಾರತ ಸರಕಾರ ನೀಡುವ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿಗಳ ಮೇಲೆ ನನಗೆ ಅಪಾರ ಗೌರವವಿದೆ. ಪದ್ಮಶ್ರೀ ಪ್ರಶಸ್ತಿ ಘೋಷಿಸಿದ್ದಕ್ಕೆ ಧನ್ಯವಾದಗಳು. ನಾನೊಬ್ಬ ಸಾಮಾನ್ಯ, ಆಧ್ಯಾತ್ಮದೆಡೆಗೆ ಒಲವಿರುವ ವ್ಯಕ್ತಿ, ಸಾಮಾನ್ಯ ಜೀವನ ನಡೆಸುತ್ತ, ಆಧ್ಯಾತ್ಮಿಕ ಬೋಧನೆಯ ಮೂಲಕ ಜನರ ಜೀವನ ಉದಾತ್ತಗೊಳಿಸುವುದು ಉದ್ದೇಶ ನನ್ನದು. ಹಾಗಾಗಿ ಪ್ರಶಸ್ತಿಗಳ ಅವಶ್ಯತೆಯು ನನಗಿಲ್ಲ. ಎಲ್ಲ ಗೌರವಾಧರಗಳೊಂದಿಗೆ ಈ ಪ್ರಶಸ್ತಿಯನ್ನು ಹಿಂದಿರುಗಿಸುತ್ತಿದ್ದೇನೆ. ಅನ್ಯಥಾ ಭಾವಿಸದಿರಿ. ನನಗಿಂತ ಸಾಧನೆ ಮಾಡಿದ ಅನೇಕ ಸಾಧಕರಿದ್ದು ಅವರನ್ನು ಗುರುತಿಸಿ ಪುರಸ್ಕಾರ ನೀಡಿ" ಎಂದು ತಿಳಿಸಿದ್ದರು.
ಇನ್ನು, ಈ ಹಿಂದೆ ಒಲಿದು ಬಂದಿದ್ದ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಸೇರಿದಂತೆ ಅನೇಕ ಪ್ರಶಸ್ತಿಯನ್ನು ಶ್ರೀಗಳು ನಿರಾಕರಿಸಿದ್ದಾರೆ.
ಕಳೆದ 5 ದಿನಗಳಿಂದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರಿಗಳಿಗೆ ಮಠದಲ್ಲಿ ಚಿಕಿತ್ಸೆ ನಡೆಯುತ್ತಿತ್ತು. ವೈಕುಂಠ ಏಕಾದಶಿಯ ದಿನವೇ ಶ್ರಿಗಳು ಇಹಲೋಕ ತ್ಯಜಿಸಿದ್ದಾರೆ. ಜನವರಿ 3 ರಂದು ಬೆಳಿಗ್ಗೆ 5 ರಿಂದ ಸಂಜೆ 4ರ ವರೆಗೆ ವಿಜಯಪುರ ನಗರದ ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಸಂಜೆ 6.5ಕ್ಕೆ ಸರ್ಕಾರದ ಸಕಲ ಗೌರವಗಳೊಂದಿಗೆ ಶ್ರೀಗಳ ಅಂತಿಮ ಸಂಸ್ಕಾರ ನಡೆಯಲಿದೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications