Siddeshwara Swamiji: ಸಿದ್ಧೇಶ್ವರ ಶ್ರೀಗಳ ನುಡಿ ನಮನ ಕಾರ್ಯಕ್ರಮ, ಪ್ರಧಾನಿ ಮೋದಿ ಆಹ್ವಾನ, ರೂಪುರೇಷೆ ಹೀಗಿದೆ

ವಿಜಯಪುರ, ಡಿಸೆಂಬರ್ 11: ವಿಜಯಪುರದ ಶ್ರೀ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳು (Siddeshwara Swamiji ಅಗಲಿ ಜನವರಿಗೆ ಒಂದು ವರ್ಷವಾಗಲಿದೆ. ಈ ಸಂಬಂಧ ಆಶ್ರಮ ವತಿಯಿಂದ ಗುರುನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು ಸಹ ಆಹ್ವಾನಿಸಲಾಗಿದೆ.

ಗುರುನಮನ ಕಾರ್ಯಕ್ರಮ ಪ್ರಯುಕ್ತ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರು ರೂಪರೇಷೆ ಬಗ್ಗೆ ಚರ್ಚಿಸಲು ಸಭೆ ನಡೆಸಿದರು. 2024ರ ಜನವರಿಗೆ 2ಕ್ಕೆ ಸಿದ್ಧೇಶ್ವರ ಶ್ರೀಗಳು ನಮ್ಮನ್ನು ಅಗಲಿ ಒಂದು ವರ್ಷವಾಗಲಿದೆ. ಗುರು ನಮನ ಹಾಗೂ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಜ್ಞಾನಯೋಗಾಶ್ರಮ ಶ್ರೀಗಳು ಪ್ರಧಾನಿ ಮೋದಿ ಅವರನ್ನು ಕಾರ್ಯಕ್ರಮಕ್ಕೆ ಕರೆಯಲಾಗಿದೆ ಎಂದು ತಿಳಿಸಿದರು.

Siddheshwar Swamiji Guru Naman Program Held by Jnanayogashrama, Invited to PM Modi, Says MB Patil

ಗುರುನಮನ ಮೂಲಕ ಸಿದ್ಧೇಶ್ವರ ಶ್ರೀಗಳನ್ನು ಸ್ಮರಿಸಲಾಗುತ್ತದೆ. ಅಲ್ಲದೇ ಡಿಸೆಂಬರ್ ಅಂತ್ಯದಿಂದಲೇ ಅನೇಕ ಕಾರ್ಯಕ್ರಮ ಆಯೋಜಿಸಲಾಗಿದೆ. ಡಿಸೆಂಬರ್ 21ರಿಂದ ಡಿಸೆಂಬರ್ 31ರವರೆಗೆ ಜ್ಞಾನಯೋಗಾಶ್ರಮದ ಆವರಣದಲ್ಲಿ ವಿವಿಧ ಗೋಷ್ಠಿಗಳುನ್ನು ನಡೆಸಲು ತೀರ್ಮಾನಿಸಲಾಗಿದೆ.

ಶ್ರಿಗಳ ಆಶಯಕ್ಕೆ ಧಕ್ಕೆ ಉಂಟಾಗದಂತೆ ಕಾರ್ಯಕ್ರಮಗಳು ನಡೆಯಲಿವೆ. ಈ ವೇಳೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು. ಸಭೆಯಲ್ಲಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಬಸವಲಿಂಗ ಸೇರಿದಂತೆ ಮತ್ತಿತರರು ಪಾಲ್ಲಗೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+