ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿಗೆ ಅಧಿಕಾರ ತಪ್ಪಲು ಟಿಪ್ಪು ಸುಲ್ತಾನ್ ಶಾಪವೇ ಕಾರಣ, ರೇವಣ್ಣ

|
Google Oneindia Kannada News

Recommended Video

ಟಿಪ್ಪು ಸುಲ್ತಾನ್ ಶಾಪದಿಂದ ಬಿಜೆಪಿಗೆ ಅಧಿಕಾರ ತಪ್ಪಿದ್ದು, ಎಂದ ಎಚ್ ಡಿ ರೇವಣ್ಣ | Oneindia Kannada

ಬೆಂಗಳೂರು, ನ 10: ಬಿಜೆಪಿಗೆ ಪ್ರತಿಭಟನೆ ನಡೆಸಲು ಒಂದು ಕಾರಣ ಬೇಕಿದೆ, ಅದಕ್ಕಾಗಿ ಟಿಪ್ಪು ಜಯಂತಿ ಕಾರ್ಯಕ್ರಮವನ್ನು ವಿರೋಧಿಸುತ್ತಿದೆ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಕಿಡಿಕಾರಿದ್ದಾರೆ.

104 ಸೀಟು ಬಂದರೂ ಬಿಜೆಪಿಗೆ ಅಧಿಕಾರ ತಪ್ಪಲು ಟಿಪ್ಪು ಸುಲ್ತಾನ್ ಶಾಪವೇ ಕಾರಣ. ಟಿಪ್ಪು ಜಯಂತಿ ಆಚರಿಸುತ್ತಿರುವುದರಿಂದ ಕಾಂಗ್ರೆಸ್ ಮತ್ತೆ ಸಮ್ಮಿಶ್ರ ಸರಕಾರದಲ್ಲಿ ಅಧಿಕಾರದಲ್ಲಿದೆ ಎಂದು ರೇವಣ್ಣ ಹೇಳಿದ್ದಾರೆ.

ಇಂದು ಟಿಪ್ಪು ಜಯಂತಿ: ಪ್ರತಿಭಟನೆ, ನಿಷೇಧಾಜ್ಞೆ, ಕೊಡಗು ಬಂದ್ ಇಂದು ಟಿಪ್ಪು ಜಯಂತಿ: ಪ್ರತಿಭಟನೆ, ನಿಷೇಧಾಜ್ಞೆ, ಕೊಡಗು ಬಂದ್

ಟಿಪ್ಪು ಜಯಂತಿ ಆಚರಣೆಯ ವಿಚಾರದಲ್ಲಿ ಜಾಣ ನಡೆಯಿಟ್ಟಿರುವ ಸಿಎಂ ಕುಮಾರಸ್ವಾಮಿ, ವಿಶ್ರಾಂತಿಯ ಹೆಸರಿನಲ್ಲಿ ಕಾರ್ಯಕ್ರಮದಿಂದ ದೂರವುಳಿದಿದ್ದಾರೆ. ಒಂದು ರೀತಿಯಲ್ಲಿ ಟಿಪ್ಪು ಜಯಂತಿ ಕಾರ್ಯಕ್ರಮ ಸಂಪೂರ್ಣ ಕಾಂಗ್ರೆಸ್ ಕಾರ್ಯಕ್ರಮದಂತಾಗಿದೆ.

Since, BJP is opposing Tippu Sultan, they are not in power: HD Revanna

ನಾವು ಟಿಪ್ಪು ಜಯಂತಿ ಕಾರ್ಯಕ್ರಮವನ್ನು ವಿರೋಧಿಸುತ್ತಿಲ್ಲ, ನಾನು ಮುಖ್ಯಮಂತ್ರಿಗಳಿಗೆ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಸಲಹೆಯನ್ನೂ ನೀಡಲಿಲ್ಲ. ಇದೆಲ್ಲಾ ಸುಳ್ಳು ಸುದ್ದಿ ಎಂದು ರೇವಣ್ಣ ಹೇಳಿದ್ದಾರೆ.

ಸ್ವಾತಂತ್ರ್ಯ ಯೋಧ ಟಿಪ್ಪು ಸುಲ್ತಾನ್ -ಜಯಂತಿ, ಆಚರಣೆ ಅಗತ್ಯವೇನು?ಸ್ವಾತಂತ್ರ್ಯ ಯೋಧ ಟಿಪ್ಪು ಸುಲ್ತಾನ್ -ಜಯಂತಿ, ಆಚರಣೆ ಅಗತ್ಯವೇನು?

ಹಾಸನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಾನು ಭಾಗವಹಿಸುತ್ತಿದ್ದೇನೆ. ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರೆ, ಅಧಿಕಾರ ತಪ್ಪುತ್ತದೆ ಎಂದು ನಾನು ಕುಮಾರಸ್ವಾಮಿಗೆ ಹೇಳಿದ್ದೇನೆ ಎನ್ನುವುದು ಸತ್ಯಕ್ಕೆ ದೂರವಾದಂತಹ ಮಾತು ಎಂದು ರೇವಣ್ಣ ಸ್ಪಷ್ಟ ಪಡಿಸಿದ್ದಾರೆ.

ಟಿಪ್ಪು ಜಯಂತಿ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಟಿಪ್ಪು ಜಯಂತಿ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಸರಕಾರದ ಅಧಿಕೃತ ಟಿಪ್ಪು ಜಯಂತಿ ಕಾರ್ಯಕ್ರಮದಿಂದ ಜಾರಿಕೊಂಡಿರುವ ಸಿಎಂ ಕುಮಾರಸ್ವಾಮಿ, ವೈದ್ಯರ ಸಲಹೆಯ ಮೇರೆಗೆ ನವೆಂಬರ್ ಹನ್ನೊಂದರವರೆಗೆ ವಿಶ್ರಾಂತಿಗೆ ತೆರಳಿದ್ದಾರೆ. ಈ ವೇಳೆ, ಅವರು ತಮ್ಮ ಕುಟುಂಬದ ಸದಸ್ಯರ ಜೊತೆಗೆ ಮಾತ್ರ ಕಾಲ ಕಳೆಯಲಿದ್ದಾರೆಂದು ಸಿಎಂ ಕಚೇರಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

English summary
Since, BJP is opposing Tippu Sultan and Tippu Jayanthi they are not in power: Karnataka PWD HD Revanna statement. He said, I am going to participate in Tippu Jayanathi programme in Hassan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X